ಯೋಗಿಗಳ ಕಾಲು ಹಿಡಿಯುವುದು ನನ್ನ ಅಭ್ಯಾಸ : ರಜನಿ ಖಡಕ್ ಉತ್ತರ

Public TV
2 Min Read

ತ್ತರ ಭಾರತ ಪ್ರವಾಸದ ವೇಳೆ ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಕಾಲಿಗೆ ಬಿದ್ದು ನಮಸ್ಕರಿಸಿದ್ದರು ಸೂಪರ್ ಸ್ಟಾರ್ ರಜನಿಕಾಂತ್ (Rajinikanth). ಈ ನಡೆಗೆ ಭಾರೀ ವಿರೋಧ ವ್ಯಕ್ತವಾಗಿತ್ತು. ವಯಸ್ಸಿನ ಅಂತರವಿರು ವ್ಯಕ್ತಿಯ ಕಾಲಿಗೆ ಬಿದ್ದದ್ದು ಒಂದು ಕಡೆಯಾಗಿದ್ದರೆ, ತಮಿಳಿನ ಅಸ್ಮಿತೆಯನ್ನೇ ಯೋಗಿ ಪಾದಕ್ಕೆ ಇಟ್ಟಿದ್ದಾರೆ ಎಂದು ಕೆಲವರು ಕಾಮೆಂಟ್ ಮಾಡಿದ್ದರು. ಅದಕ್ಕೀಯ ರಜನಿ ಉತ್ತರಿಸಿದ್ದಾರೆ.

ಪ್ರವಾಸ ಮುಗಿಸಿಕೊಂಡು ಚೆನ್ನೈಗೆ ವಾಪಸ್ಸಾಗಿರುವ ರಜನಿಕಾಂತ್, ಮಾಧ್ಯಮಗಳ ಜೊತೆ ಮಾತನಾಡಿ ‘ಯೋಗಿಗಳು, ತಪಸ್ವಿಗಳು, ಮಹಾತ್ಮರು ನನಗಿಂತ ಎಷ್ಟೇ ಚಿಕ್ಕವರಾಗಿದ್ದರೂ, ಅವರ ಕಾಲು ಹಿಡಿದುಕೊಂಡು ಆಶೀರ್ವಾದ ಪಡೆಯುವುದು ನನ್ನ ಅಭ್ಯಾಸ. ಅದಕ್ಕೆ ಬೇರೆ ಅರ್ಥ ಕಲ್ಪಿಸಬೇಕಿಲ್ಲ ಎಂದು ರಜನಿ ಹೇಳಿದ್ದಾರೆ. ಈ ಮೂಲಕ ವಿವಾದಕ್ಕೆ (Controversy) ತೆರೆ ಎಳೆಯುವ ಪ್ರಯತ್ನ ಮಾಡಿದ್ದಾರೆ.

ಜೈಲರ್ ಸಿನಿಮಾ ಯಶಸ್ಸಿನ ಬೆನ್ನಲ್ಲೇ ರಜನಿಕಾಂತ್ ಟೆಂಪಲ್ ರನ್ ಮಾಡುತ್ತಿದ್ದರು. ಸಿನಿಮಾ ರಿಲೀಸ್ ವೇಳೆ ಅವರು ಹಿಮಾಲಯಕ್ಕೆ ಹಾರಿದ್ದರು. ಅಲ್ಲಿ ಧ್ಯಾನಕ್ಕೆ ಶರಣಾಗಿದ್ದರು. ಅಲ್ಲಿಂದ ಹೊರಟು ಇದೀಗ ಉತ್ತರ ಪ್ರದೇಶದ ಹಲವು ದೇವಸ್ಥಾನಗಳಿಗೆ ಭೇಟಿ ನೀಡಿದ್ದರು. ಅಯೋಧ್ಯಗೆ (Ayodhya) ತೆರಳಿ ಶ್ರೀರಾಮನ (Sriram) ದರ್ಶನ ಪಡೆದಿದ್ದಾರೆ. ನಿರ್ಮಾಣ ಹಂತದಲ್ಲಿರುವ ದೇವಸ್ಥಾನವನ್ನೂ ಅವರು ವೀಕ್ಷಣೆ ಮಾಡಿದ್ದಾರೆ. ಇದನ್ನೂ ಓದಿ:ತಂದೆ ಸ್ಥಾನವನ್ನೂ ತುಂಬಿ ಮಗಳಿಗೆ ಹೆಸರಿಟ್ಟ ನಟಿ ದಿವ್ಯಾ ಶ್ರೀಧರ್

ಈ ವೇಳೆ ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ (Yogi Adityanath) ಭೇಟಿಯಾಗಿದ್ದರು. ಅವರ ಕಾಲು ಹಿಡಿದು ನಮಸ್ಕರಿಸಿದ್ದರು.  ನಂತರ  (ಆಗಸ್ಟ್ 19) ಜೈಲರ್ (Jailer) ಚಿತ್ರವನ್ನ ಅವರೊಂದಿಗೆ ವೀಕ್ಷಿಸಿದ್ದರು. ಯೋಗಿಯ ಕಾಲು ಹಿಡಿದದ್ದು ಟೀಕೆಗೆ ಗುರಿಯಾಗಿತ್ತು. ಸಖತ್ ಟ್ರೋಲ್ ಕೂಡ ಆಗಿತ್ತು.

 

ತಲೈವಾ-ಶಿವಣ್ಣ ಕಾಂಬೋ ‘ಜೈಲರ್’ (Jailer) ಸಿನಿಮಾ ಹೌಸ್‌ಫುಲ್ ಪ್ರದರ್ಶನ ಕಾಣುತ್ತಿದೆ. ತಲೈವಾ ಸಿನಿಮಾವನ್ನ ಒಪ್ಪಿ ಜನ ಮೆಚ್ಚಿಕೊಂಡಿದ್ದಾರೆ. ಸಿನಿಮಾ ಕಥೆ, ಡೈಲಾಗ್, ಸಾಂಗ್ಸ್ ಎಲ್ಲವೂ ಫ್ಯಾನ್ಸ್‌ಗೆ ಮೋಡಿ ಮಾಡಿದೆ. ಆಗಸ್ಟ್ 10ಕ್ಕೆ ರಿಲೀಸ್ ಆಗಿದ್ದು, ಐನೂರು ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಮಾಡಿದೆ. ಈ ಮೂಲಕ ಭರ್ಜರಿ ಕಲೆಕ್ಷನ್ ಮಾಡ್ತಿದೆ.

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್