ರಶ್ಮಿಕಾ ಮಂದಣ್ಣ `ಮೈಸಾ’ ಸಿನಿಮಾದ ಮೊದಲ ಗ್ಲಿಂಪ್ಸ್‌ ರಿಲೀಸ್

2 Min Read

ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ (Rashmika Mandanna) ಅಭಿನಯದ ಮೈಸಾ ಸಿನಿಮಾ ಫಸ್ಟ್ ಗ್ಲಿಂಪ್ಸ್‌ ರಿಲೀಸ್ ಆಗಿದೆ. ಹಿಂದೆಂದೂ ಕಾಣಿಸಿಕೊಳ್ಳದ ಲುಕ್‌ನಲ್ಲಿ ನಟಿ ರಶ್ಮಿಕಾ ಕಾಣಿಸಿಕೊಂಡಿದ್ದಾರೆ. ಈಗಾಗಲೇ ಸಿನಿಮಾದ ಟೈಟಲ್ ಹಾಗೂ ಫಸ್ಟ್ ಲುಕ್‌ನಿಂದಲೂ ಸದ್ದು ಮಾಡಿದ್ದ ಮೈಸಾ ಸಿನಿಮಾ ವರ್ಷಾಂತ್ಯದಲ್ಲಿ ಗ್ಲಿಂಪ್ಸ್‌ ಮೂಲಕ ಎಲ್ಲರ ಗಮನ ಸೆಳೆಯುತ್ತಿದೆ.

ಮೈಸಾ (Mysaa) ಸಿನಿಮಾದಿಂದ ರವೀಂದ್ರ ಪುಲ್ಲೆ ನಿರ್ದೇಶಕರಾಗಿ ಚಿತ್ರರಂಗದಲ್ಲಿ ತನ್ನ ಮೊದಲ ಹೆಜ್ಜೆಯನ್ನು ಇಡುತ್ತಿದ್ದಾರೆ. ಅನ್ಫಾರ್ಮ್ಯುಲಾ ಫಿಲ್ಮ್ಸ್ ನಿರ್ಮಾಣ ಮಾಡುತ್ತಿರುವ ಈ ಪ್ಯಾನ್–ಇಂಡಿಯಾ ಚಿತ್ರ ಭಾರೀ ಬಜೆಟ್‌ನಲ್ಲಿ ಮೂಡಿಬರುತ್ತಿದೆ. ಸದ್ಯ ಬಿಡುಗಡೆ ಆಗಿರೋ ಗ್ಲಿಂಪ್ಸ್‌ನಲ್ಲಿ ರಶ್ಮಿಕಾ ಲುಕ್ ನೋಡ್ತಿದ್ರೆ. ಸಿನಿಮಾ ಮೇಲಿನ ನಿರೀಕ್ಷೆ ಮತ್ತಷ್ಟು ಹೆಚ್ಚು ಮಾಡ್ತಿದೆ. ಇದನ್ನೂ ಓದಿ: ಸಾವಿರ ಕೋಟಿ ಬಜೆಟ್‌ನಲ್ಲಿ ಅಲ್ಲು ಅರ್ಜುನ್ ಮತ್ತೊಂದು ಸಿನಿಮಾ..!

ಇಷ್ಟು ದಿನಗಳ ಕಾಲ ಕಮರ್ಷಿಯಲ್ ಸಿನಿಮಾಗಳಲ್ಲಿ ಅಭಿನಯ ಮಾಡಿ ಸೈ ಎನಿಸಿಕೊಂಡಿದ್ದ ರಶ್ಮಿಕಾ ಮಂದಣ್ಣ ಇದೇ ಮೊದಲ ಬಾರಿಗೆ ವಿಭಿನ್ನ ಪಾತ್ರದ ಮೂಲಕ ಪ್ರೇಕ್ಷಕರ ಮುಂದೆ ಬರಲು ಸಜ್ಜಾಗಿದ್ದಾರೆ. ಈ ಪಾತ್ರಕ್ಕಾಗಿ ಸಾಕಷ್ಟು ತಯಾರಿ ಕೂಡ ಮಾಡಿಕೊಂಡಿದ್ದಾರೆ ರಶ್ಮಿಕಾ. ಗ್ಲಿಂಪ್ಸ್‌ನಲ್ಲಿ ನಾಯಕಿಯ ತಾಯಿ ಹೇಳುವ ಶಕ್ತಿಶಾಲಿ ವಾಯ್ಸ್ ಓವನೊಂದಿಗೆ ಆರಂಭವಾಗುತ್ತದೆ. ಅವಳ ಮಗಳು ಮರಣವನ್ನೇ ಎದುರಿಸಿ ನಿಲ್ಲುವ ಶಕ್ತಿ ಹೊಂದಿದ್ದಾಳೆ ಎಂದು ಹೇಳುತ್ತಾ, ಈ ಹೆಸರನ್ನು ನೆನಪಿಟ್ಟುಕೊಳ್ಳಿ ಮೈಸಾ ಎಂದು ಲೋಕಕ್ಕೆ ಸಂದೇಶ ನೀಡುತ್ತಾರೆ.

ಮೈಸಾ Gondi ಸಮುದಾಯದ ಮಹಿಳಾ ನಾಯಕಿಯನ್ನು ಅತ್ಯಂತ ಬಲಿಷ್ಠ, ಉಗ್ರ ಮತ್ತು ಭಾವನಾತ್ಮಕವಾಗಿ ತೋರಿಸುವ ಮೊದಲ ಚಲನಚಿತ್ರವಾಗಿ ಗುರುತಿಸಿಕೊಳ್ಳುತ್ತಿದೆ. ಚಿತ್ರದಲ್ಲಿ ಈಶ್ವರಿ ರಾವ್, ಗುರು ಸೋಮಸುಂದರಂ ಮತ್ತು ರಾವ್ ರಮೇಶ್ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಾರೆ. ಚಿತ್ರದ ಛಾಯಾಗ್ರಾಹಕ ಶ್ರೀಯಾಸ್ ಪಿ ಕೃಷ್ಣ ಅವರ ಕೆಲಸ ಸಿನಿಮಾಗೆ ಮತ್ತಷ್ಟು ಪ್ಲಸ್ ಆಗಲಿದೆ. ಜೇಕ್ಸ್ ಬೆಜೋಯ್ ಅವರ ಸಂಗೀತ ಹಾಗೂ ಅಂತರರಾಷ್ಟ್ರೀಯ ಸ್ಟಂಟ್ ನಿರ್ದೇಶಕ ಆಂಡಿ ಲಾಂಗ್ ನೇತೃತ್ವದ ಆಕ್ಷನ್ ಸೀನ್‌ಗಳು ಅದ್ಬುತವಾಗಿ ಮೂಡಿ ಬರ್ತಿದೆ. ಪ್ರಸ್ತುತ ತೆಲಂಗಾಣ ಮತ್ತು ಕೇರಳದ ಅರಣ್ಯ ಪ್ರದೇಶಗಳಲ್ಲಿ ಚಿತ್ರ ಶೂಟಿಂಗ್ ನಡೆಯುತ್ತಿದ್ದು, ಟೀಸರ್ ಬಿಡುಗಡೆಯಿಂದ ಚಿತ್ರದ ಮೇಲೆ ಮತ್ತಷ್ಟು ಕುತೂಹಲ ಹೆಚ್ಚಿದೆ. ಆ್ಯಕ್ಷನ್ ಪ್ರಧಾನ ಸಿನಿಮಾ ಆಗಿರುವುದರಿಂದ, ನಿರ್ಮಾಪಕರು ಯಾವುದೇ ವಿಚಾರಕ್ಕೂ ಕಾಂಪ್ರಮೈಸ್ ಆಗದೇ ಚಿತ್ರಕ್ಕೆ ಬೇಕಿರೋ ಎಲ್ಲಾ ರೀತಿಯ ವ್ಯವಸ್ಥೆಗಳನ್ನು ಮಾಡಿಕೊಡುತ್ತಿದ್ದಾರೆ. ಇದನ್ನೂ ಓದಿ: ಸುದೀಪ್ ಯುದ್ಧದ ಮಾತು : ವಿಜಯಲಕ್ಷ್ಮಿ ತಿರುಗೇಟು ಬಗ್ಗೆ ರಕ್ಷಿತಾ ಪ್ರೇಮ್ ಹೇಳಿದ್ದೇನು?

Share This Article