ಪತ್ನಿ ರಾಖಿ ಸಾವಂತ್ ವಿರುದ್ಧ ಗುಡುಗಿದ ಮೈಸೂರು ಹುಡುಗ ಆದಿಲ್

By
1 Min Read

ಬಾಲಿವುಡ್ (Bollywood) ನಟಿ ರಾಖಿ ಸಾವಂತ್ ವಿರುದ್ಧ ಮೈಸೂರು (Mysore) ಹುಡುಗ ಆದಿಲ್ (Adil) ಗುಡುಗಿದ್ದಾರೆ. ರಾಖಿ ಮಾಡಿದ ಆರೋಪದ ಮೇಲೆ ಜೈಲು ಪಾಲಾಗಿರುವ ಆದಿಲ್, ತಮಗೆ ರಾಖಿಯಿಂದ ಆದ ತೊಂದರೆಯನ್ನು ಎಳೆ ಎಳೆಯಾಗಿ ಬಿಚ್ಚಿಡುವುದಾಗಿ ಹೇಳಿಕೊಂಡಿದ್ದಾರೆ. ರಾಖಿಯಿಂದ ತಮಗೆ ಏನೆಲ್ಲ ಮೋಸ (Cheating) ಆಗಿದೆ ಎಂದು ಪತ್ರಿಕಾಗೋಷ್ಠಿ ಮಾಡಿಯೇ ಹೇಳುತ್ತೇನೆ ಎಂದಿದ್ದಾರೆ.

ಆದಿಲ್ ತನ್ನನ್ನು ಮದುವೆಯಾಗಿ ವಂಚಿಸಿದ್ದಾನೆ. ಹಿಂಸೆ ನೀಡಿದ್ದಾನೆ. ಅಲ್ಲದೇ, ತನ್ನ ಲಕ್ಷಾಂತರ ರೂಪಾಯಿ ಖರ್ಚು ಮಾಡಿದ್ದಾನೆ ಎಂದು ರಾಖಿ (Rakhi Sawant) ಪೊಲೀಸ್ ಠಾಣೆ ಮೆಟ್ಟಿಲು ಏರಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆದಿಲ್ ಬಂಧನವಾಗಿತ್ತು. ಆನಂತರ ಜೈಲಿನಿಂದಲೇ  ತನ್ನನ್ನು ಕೊಲ್ಲುವುದಾಗಿ ಆದಿಲ್ ಹೆದರಿಸುತ್ತಿದ್ದಾನೆ ಎಂದೂ ರಾಖಿ ಮಾತನಾಡಿದ್ದರು.

 

ನಾನು ಯಾರಿಗೂ ಮೋಸ ಮಾಡಿಲ್ಲ. ನನಗೆ ಮೋಸವಾಗಿದೆ. ಕೋಟ್ಯಾಂತರ ರೂಪಾಯಿ ಯಾರು, ಯಾರಿಗೆ ಕೊಡಬೇಕು ಎನ್ನುವುದನ್ನು ಸಾಕ್ಷಿ ಸಮೇತ ತರುತ್ತೇನೆ. ಖಾಸಗಿ ವಿಚಾರಗಳನ್ನು ಹಂಚಿಕೊಳ್ಳಬಾರದು ಎಂದು ಸುಮ್ಮನಿದ್ದೆ. ಅದು ತಪ್ಪು ಅನಿಸುತ್ತಿದೆ. ಎಲ್ಲವನ್ನೂ ಮಾಧ್ಯಮಗೋಷ್ಠಿ ಮಾಡಿಯೇ ಹೇಳುತ್ತೇನೆ ಎಂದು ಆದಿಲ್ ಹೇಳಿದ್ದಾರೆ.

Web Stories

Share This Article
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್