ಮೈಸೂರು ಚಾಮುಂಡಿಬೆಟ್ಟದಲ್ಲಿ ಮತ್ತೆ ಭೂಕುಸಿತ; ಹೆಚ್ಚಿದ ಆತಂಕ

Public TV
1 Min Read

ಮೈಸೂರು: ನಗರದಲ್ಲಿ ಗುರುವಾರ ರಾತ್ರಿ ಸುರಿದ ಧಾರಾಕಾರ ಮಳೆಗೆ ಚಾಮುಂಡಿಬೆಟ್ಟದಲ್ಲಿ ಮತ್ತೆ ಭೂಕುಸಿತ ಸಂಭವಿಸಿದೆ. ಬೆಟ್ಟದ ರಸ್ತೆಯ ಮುಕ್ಕಾಲು ಭಾಗ ಕುಸಿತಕ್ಕೆ ಒಳಗಾಗಿದೆ.

ಕಳೆದ ತಿಂಗಳು ಭಾರಿ ಮಳೆಯಿಂದಾಗಿ ನಂದಿ ಬೆಟ್ಟಕ್ಕೆ ಹೋಗುವ ಮಾರ್ಗದಲ್ಲಿ ಭೂಕುಸಿತ ಸಂಭವಿಸಿತ್ತು.‌ ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಟಿ.ಸೋಮಶೇಖರ್ ಅವರು ಈಚೆಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಅಲ್ಲದೆ ಸಿಎಂ ಜೊತೆಗೆ ಮಾತನಾಡಿ ಶಾಶ್ವತ ಪರಿಹಾರ ಕಾಮಗಾರಿಗೆ ಕ್ರಮವಹಿಸಲಾಗುವುದು ಎಂದು ತಿಳಿಸಿದ್ದರು. ಆದರೆ ಈಗ ಬೆಟ್ಟದಲ್ಲಿ ಮತ್ತೆ ಭೂಕುಸಿತ ಸಂಭವಿಸಿದೆ. ಇದರಿಂದ ಸ್ತಳೀಯರಲ್ಲಿ ಆತಂಕ ಮೂಡಿದೆ. ಇದನ್ನೂ ಓದಿ: ಪುನೀತ್ ಮಾಡುತ್ತಿದ್ದ ಕೆಲಸಕ್ಕೆ ನಾನೂ ಕೈ ಜೋಡಿಸುತ್ತೇನೆ: ರೇಣುಕಾಚಾರ್ಯ

ಚಾಮುಂಡಿ ಬೆಟ್ಟದಲ್ಲಿ ನಿರಂತರ ಅಭಿವೃದ್ಧಿ ಕಾಮಗಾರಿ, ನಿರ್ವಹಣೆ ವೈಫಲ್ಯ, ಮರಗಳ ಹನನ, ಬೆಟ್ಟದ ಮೇಲೆ ಹೆಚ್ಚುತ್ತಿರುವ ಒತ್ತಡಗಳು ಕುಸಿತಕ್ಕೆ ಕಾರಣವಾಗಿದೆ ಎನ್ನಲಾಗುತ್ತಿದೆ. ಇದನ್ನೂ ಓದಿ: ದೀಪಾವಳಿ: ನಂಜನಗೂಡಿನಲ್ಲಿ ಗೋಪೂಜೆ ಮಾಡಿದ ಸಚಿವ ಸೋಮಶೇಖರ್‌

ಬೆಟ್ಟದ ಮೇಲೆ ವಾಣಿಜ್ಯ ಸಂಕೀರ್ಣ, ಹೋಟೆಲ್‌, ಶೌಚಾಲಯ, ದಾಸೋಹ ಭವನ ಸೇರಿದಂತೆ ಅನೇಕ ಕಟ್ಟಡಗಳ ನಿರ್ಮಾಣವಾಗುತ್ತಿವೆ. ಇವುಗಳಿಂದ ಬರುವ ಸಿವೇಜ್‌ ನೀರನ್ನು ರಸ್ತೆ ಪಕ್ಕದಲ್ಲಿ ಬಿಡಲಾಗುತ್ತಿದೆ. ಇದರಿಂದ ರಸ್ತೆಗಳಲ್ಲಿ ತೇವಾಂಶ ಹೆಚ್ಚಾಗಿ ಮಳೆ ಬಿದ್ದಾಗ ಕುಸಿತ ಉಂಟಾಗುತ್ತಿದೆ. ಅಷ್ಟೇ ಅಲ್ಲದೆ ಬೆಟ್ಟದ ಸುತ್ತಮುತ್ತ ಒತ್ತುವರಿ ಮಾಡಿಕೊಂಡು ಮರಗಳನ್ನು ನಾಶ ಮಾಡಲಾಗುತ್ತಿದೆ. ಈ ಎಲ್ಲಾ ಕಾರಣಗಳಿಂದ ಮತ್ತೆ ಮತ್ತೆ ಭೂಕುಸಿತ ಸಂಭವಿಸುತ್ತಿದೆ ಎಂಬ ಗಂಭೀರ ಆರೋಪವೂ ಹಲವರಿಂದ ವ್ಯಕ್ತವಾಗಿದೆ.

Share This Article
Leave a Comment

Leave a Reply

Your email address will not be published. Required fields are marked *