ಆಷಾಢದ 4ನೇ ಶುಕ್ರವಾರ – ಚಾಮುಂಡಿ ತಾಯಿಗೆ ಸಿಂಹವಾಹಿನಿ ಅಲಂಕಾರ

Public TV
1 Min Read

ಮೈಸೂರು: ಆಷಾಢ ಮಾಸದ ನಾಲ್ಕನೇ ಶುಕ್ರವಾರದ ಹಿನ್ನೆಲೆ ನಾಡದೇವಿ ಚಾಮುಂಡಿಗೆ (Chamundi Devi) ಸಿಂಹವಾಹಿನಿ ಅಲಂಕಾರ ಮಾಡಲಾಗಿದೆ.

ಉತ್ಸವ ಮೂರ್ತಿಗೆ ವಿವಿಧ ಬಗೆಯ ಹೂ ಹಾಗೂ ನವಿಲಿನಗರಿ ಹಾರದ ಅಲಂಕಾರ ಮಾಡಲಾಗಿದೆ. ದೇವಾಲಯದ ಆವರಣಕ್ಕೆ ವಿವಿಧ ಪುಷ್ಪಗಳಿಂದ ಅಲಂಕಾರ ಮಾಡಲಾಗಿದೆ. ಮುಂಜಾನೆ 4:30ರಿಂದ ತಾಯಿಗೆ ವಿಶೇಷ ಪೂಜೆ ನೆರವೇರುತ್ತಿದೆ. ಇದನ್ನೂ ಓದಿ: 3ನೇ ಆಷಾಢ ಸಂಭ್ರಮ; ಗಜ ಲಕ್ಷ್ಮಿ, ನಾಗಲಕ್ಷ್ಮಿ ಅಲಂಕಾರದಲ್ಲಿ ಕಂಗೊಳಿಸಿದ ಚಾಮುಂಡಿ ತಾಯಿ


ಮುಂಜಾನೆಯಿಂದಲೇ ಸರತಿ ಸಾಲಿನಲ್ಲಿ ಭಕ್ತರು ತಾಯಿಯ ದರ್ಶನ ಪಡೆಯುತ್ತಿದ್ದಾರೆ. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಿರುವುದರಿಂದ ಚಾಮುಂಡಿ ಬೆಟ್ಟಕ್ಕೆ ಖಾಸಗಿ ವಾಹನಗಳನ್ನು ನಿಷೇಧಿಸಲಾಗಿದೆ. ಇದನ್ನೂ ಓದಿ: ಆಷಾಢದ 3ನೇ ಶುಕ್ರವಾರ – ಕೋಲಾರಮ್ಮನಿಗೆ 1001 ಹಲಸಿನ ಹಣ್ಣಿನ ಅಲಂಕಾರ!

Share This Article