ವಿದ್ಯುತ್ ತಂತಿ ತುಳಿದು ದಸರಾ ಆನೆ ಅಶ್ವತ್ಥಾಮ ದುರ್ಮರಣ

Public TV
0 Min Read

ಮೈಸೂರು: ವಿದ್ಯುತ್ ತಂತಿ ತುಳಿದು ದಸರಾ (Mysuru Dussehra) ಆನೆ ಅಶ್ವತ್ಥಾಮ (38) (Ashwatthama Elephant) ಸಾವನ್ನಪ್ಪಿದ ಘಟನೆ ನಾಗರಹೊಳೆ ಅರಣ್ಯ ಪ್ರದೇಶದಲ್ಲಿ ನಡೆದಿದೆ.

ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ವ್ಯಾಪ್ತಿಯ ಭೀಮನಕಟ್ಟೆ ಬಳಿ ಹಾಕಲಾಗಿದ್ದ ಸೋಲಾರ್ ಬೇಲಿಯ ವಿದ್ಯುತ್ ಪ್ರವಹಿಸಿ ಅಶ್ವತ್ಥಾಮ ಆನೆ ಸಾವನ್ನಪ್ಪಿದೆ. ಎರಡು ಬಾರಿ ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದಲ್ಲಿ ಅಶ್ವತ್ಥಾಮ ಭಾಗಿಯಾಗಿತ್ತು. ಶಾಂತ ಹಾಗೂ ಗಾಂಭೀರ್ಯಕ್ಕೆ ಈ ಆನೆ ಹೆಸರುವಾಸಿಯಾಗಿತ್ತು.

2017ರಲ್ಲಿ ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನಲ್ಲಿ ಅಶ್ವತ್ಥಾಮ ಆನೆಯನ್ನು ಸೆರೆಹಿಡಿಯಲಾಗಿತ್ತು.

Share This Article