ನನಗೆ ಒಳ್ಳೆಯ ಸಾವು ಬರಲಿ ಎಂದಷ್ಟೇ ಪ್ರಾರ್ಥಿಸುತ್ತೇನೆ: ತನ್ವೀರ್ ಸೇಠ್

Public TV
1 Min Read

ಮೈಸೂರು: ನನಗೆ ಹೆಚ್ಚಿನ ಸೆಕ್ಯುರಿಟಿ ಬೇಕಿಲ್ಲ. ನನ್ನ ಜೊತೆ ನನ್ನ ಕಾರ್ಯಕರ್ತರೇ ಇದ್ದಾರೆ. ಸಾವನ್ನು ಯಾರೂ ತಪ್ಪಿಸಲು ಸಾಧ್ಯವಿಲ್ಲ. ಆದರೆ ನನಗೆ ಒಳ್ಳೆಯ ಸಾವು ಬರಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಶಾಸಕ ತನ್ವೀರ್ ಸೇಠ್ ಹೇಳಿದ್ದಾರೆ.

ತಮ್ಮ ಮೇಲಿನ ಕೊಲೆ ಯತ್ನ ಪ್ರಕರಣದ ಬಗ್ಗೆ ಮೈಸೂರಿನಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿ, ನನ್ನ ಮೇಲೆ ನಡೆದ ಹಲ್ಲೆ ಪ್ರಕರಣ ಅನಿರೀಕ್ಷಿತ. ಪೊಲೀಸರು ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಅದರ ಪ್ರತಿಯನ್ನು ಪಡೆದುಕೊಂಡಿದ್ದೇನೆ. ತನಿಖೆ ಬಗ್ಗೆ ನನಗೆ ಯಾವುದೇ ತಕರಾರು ಇಲ್ಲ. ಪೊಲೀಸರು ತಮ್ಮ ಕರ್ತವ್ಯ ನಿರ್ವಹಣೆ ಮಾಡುತ್ತಿದ್ದಾರೆ. ನನ್ನ ಮೇಲೆ ಹಲ್ಲೆ ಮಾಡಿದವರು ಯಾರು ಎಂಬುದು ಗೊತ್ತಿಲ್ಲ. ಇದೆಲ್ಲವು ಸಾರ್ವಜನಿಕವಾಗಿ ಬಹಿರಂಗವಾಗಬೇಕು. ಇದನ್ನು ಪೊಲೀಸರು ಜನರಿಗೆ ತಿಳಿಸಬೇಕು ಎಂದರು.

ಪಿಎಫ್‍ಐ, ಎಸ್‍ಡಿಪಿಐ ಬ್ಯಾನ್ ಮಾಡೋ ವಿಚಾರ ಕುರಿತ ಪ್ರಶ್ನೆಗೆ ಉತ್ತರಿಸಿದ ತನ್ವೀರ್ ಸೇಠ್, ನನ್ನ ಮೇಲೆ ಯಾರು, ಏತಕ್ಕಾಗಿ ಹಲ್ಲೆ ಮಾಡಿದ್ದಾರೆ ಗೊತ್ತಿಲ್ಲ. ಅದನ್ನ ಗೊತ್ತಿಲ್ಲದೆ ನಾನು ಹೇಳಲು ಸಾಧ್ಯವಿಲ್ಲ. ಸದ್ಯ ಪ್ರಕರಣವನ್ನ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ವಿಚಾರಣೆ ಮುಕ್ತಾಯದ ಬಳಿಕ ಈ ಬಗ್ಗೆ ಸ್ಪಷ್ಟನೆ ಸಿಗಲಿದೆ ಎಂದು ತಿಳಿಸಿದರು.

ನಾನು ಈಗ ಆರೋಗ್ಯವಾಗಿದ್ದೇನೆ. ಧ್ವನಿ ಪೆಟ್ಟಿಗೆ ಮಾತ್ರ ಹಂತಹಂತವಾಗಿ ಸರಿಯಾಗಲಿದೆ. ಧ್ವನಿ ಸರಿಯಾಗಲು ಥೆರಪಿ ಟ್ರೀಟ್‍ಮೆಂಟ್ ನಡೆಯುತ್ತಿದೆ. ಅದನ್ನು ಹೊರತುಪಡಿಸಿ ನಾನು ಫುಲ್ ಆರಾಮವಾಗಿದ್ದೇನೆ. ಮೊದಲಿಗೆ ಹೋಲಿಸಿದರೆ ಇದೀಗ ಫೈನ್ ಮತ್ತು ಧ್ವನಿ ಸುಧಾರಿಸಿದೆ. ಇನ್ಮುಂದೆ ಹಂತ ಹಂತವಾಗಿ ಸಾರ್ವಜನಿಕವಾಗಿ ಕಾಣಿಸಿಕೊಳ್ಳುತ್ತೇನೆ. ಸಭೆ ಸಮಾರಂಭಗಳಲ್ಲೂ ಭಾಗಿಯಾಗುತ್ತೇನೆ ಎಂದರು.

Share This Article
Leave a Comment

Leave a Reply

Your email address will not be published. Required fields are marked *