ಮೋದಿಯನ್ನು ಭೇಟಿಯಾದ ಮೈಸೂರಿನ ಶಿಲ್ಪಿ ಯೋಗಿರಾಜ್ ಅರುಣ್

Public TV
2 Min Read

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರನ್ನು ಮೈಸೂರಿನ ಶಿಲ್ಪಿ ಯೋಗಿರಾಜ್ ಅರುಣ್ ಭೇಟಿಯಾಗಿ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಪ್ರತಿಮೆಯನ್ನು ನೀಡಿದ್ದಾರೆ. ಈ ಬಗ್ಗೆ ಮೋದಿ ಟ್ವೀಟ್ ಮಾಡಿ ಸಂತಸ ವ್ಯಕ್ತಪಡಿಸಿದ್ದಾರೆ.

ಟ್ವೀಟ್‍ನಲ್ಲಿ ಏನಿದೆ?:
ಯೋಗಿರಾಜ್ ಅರುಣ್ ಅವರನ್ನು ಭೇಟಿಯಾಗಿದ್ದಕ್ಕೆ ಸಂತೋಷವಾಯಿತು. ನೇತಾಜಿ ಬೋಸ್ ಅವರ ಈ ಅಸಾಧಾರಣ ಪ್ರತಿಮೆಯನ್ನು ನೀಡಿದ್ದಕ್ಕೆ ಯೋಗಿರಾಜ್ ಅವರಿಗೆ ಕೃತಜ್ಞರಾಗಿರುತ್ತೇನೆ ಎಂದು ತಿಳಿಸಿದ್ದಾರೆ.

ಯೋಗಿರಾಜ್ ಯಾರು?:
ಉತ್ತರಾಖಂಡದ ಕೇದಾರನಾಥದಲ್ಲಿ ಇತ್ತೀಚೆಗಷ್ಟೇ ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಿರುವ ಶಂಕರಾಚಾರ್ಯರ ಸುಂದರವಾದ ಪುತ್ಥಳಿಯನ್ನು ಕೆತ್ತಿದ ಶ್ರೇಯಸ್ಸು ಮೈಸೂರಿನ ಶಿಲ್ಪಿ ಯೋಗಿರಾಜ್ ಅರುಣ್ ಅವರಿಗೆ ಸಲ್ಲಿಸುತ್ತದೆ. ಈ ಪ್ರತಿಮೆಯನ್ನು ಯೋಗಿರಾಜ್ ಅವರು ತಮ್ಮ ಪುತ್ರ ಅರುಣ್ ಜೊತೆ ಸೇರಿ ಕೆತ್ತಿದ್ದಾರೆ.

ಯೋಗಿರಾಜ್ ಅವರ ಕುಟುಂಬ ಐದು ತಲೆಮಾರಿನಿಂದ ಕಲ್ಲಿನ ಕೆತ್ತನೆಯಲ್ಲಿ ನೈಪುಣ್ಯ ಪಡೆದಿದ್ದಾರೆ. ಸ್ವತಃ ಪ್ರಧಾನಿ ಸಚಿವಾಲಯದ ಅಧಿಕಾರಿಗಳೇ ದೇಶಾದ್ಯಂತ ಹುಡುಕಾಡಿ ಶಂಕರರ ಪುತ್ಥಳಿ ಕೆತ್ತಲು ಅಂತಿಮವಾಗಿ ಆಯ್ಕೆ ಮಾಡಿಕೊಂಡಿದ್ದರು. ಇದನ್ನೂ ಓದಿ: ಅಮೆರಿಕದ ಟೈಮ್ಸ್‌ ಸ್ಟ್ರೀಟ್‌ನಲ್ಲಿ ಮೊದಲ ಬಾರಿಗೆ ನಮಾಜ್- ಇಸ್ಲಾಂ ಬಗ್ಗೆ ತಪ್ಪು ಕಲ್ಪನೆಗಳಿವೆ ಎಂದ ಮುಸ್ಲಿಮರು

ಪ್ರತಿಮೆಯ ವಿಶೇಷತೆ:
2013ರ ಜಲಪ್ರಳಯದಲ್ಲಿ ಹಾನಿಗೀಡಾದ ಶಂಕರಾಚಾರ್ಯ ಸಮಾಧಿಯನ್ನು ಪುನರ್ ನಿರ್ಮಾಣ ಮಾಡಲಾಗಿದೆ. ಪ್ರಧಾನಿ ಕಾರ್ಯಾಲಯದ ಸೂಚನೆಯ ಮೇರೆಗೆ ಮೈಸೂರಿನ ಖ್ಯಾತ ಶಿಲ್ಪ ಕಲಾವಿದ ಅರುಣ್ ಯೋಗಿರಾಜ್ ಈ ಪ್ರತಿಮೆಯನ್ನು ನಿರ್ಮಿಸಿದ್ದು, ಶಂಕರಾಚಾರ್ಯರ ಪುತ್ಥಳಿ 12 ಅಡಿ ಎತ್ತರವಿದ್ದು, ಕುಳಿತ ಭಂಗಿಯಲ್ಲಿದೆ. 35 ಟನ್ ತೂಕದ ಪುತ್ಥಳಿ ಕೆತ್ತಲು ಹೆಗ್ಗಡದೇವನಕೋಟೆಯಿಂದ ತರಲಾದ 120 ಟನ್‍ನ ಕೃಷ್ಣಶಿಲೆ ಬಳಸಲಾಗಿದೆ. ಇದನ್ನೂ ಓದಿ: ನನ್ನನ್ನು ಈ ಬಾರಿ ಪರಿಗಣಿಸುತ್ತಾರೆ ಎಂಬ ನಂಬಿಕೆ ಇದೆ: ರೇಣುಕಾಚಾರ್ಯ

ಮೈಸೂರಿನಲ್ಲಿ 9 ತಿಂಗಳ ಶ್ರಮದ ಬಳಿಕ ಪುತ್ಥಳಿಯನ್ನು ಕೆತ್ತಲಾಗಿತ್ತು. ಬಳಿಕ ಮೈಸೂರಿನಿಂದ ಚಮೋಲಿ ಏರ್‌ಬೇಸ್‍ವರೆಗೆ ರಸ್ತೆಯ ಮೂಲಕ ಸಾಗಿಸಲಾಗಿತ್ತು. ಅಲ್ಲಿಂದ ಕೇದಾರನಾಥದಲ್ಲಿರುವ ಸಮಾಧಿ ಸ್ಥಳಕ್ಕೆ ಭಾರತೀಯ ವಾಯುಪಡೆ ವಿಮಾನದ ಮೂಲಕ ಸಾಗಿಸಲಾಗಿತ್ತು.

Share This Article
Leave a Comment

Leave a Reply

Your email address will not be published. Required fields are marked *