ಮೈಸೂರಿನಲ್ಲಿ ಸಿದ್ದು ಶಕ್ತಿ ಪ್ರದರ್ಶನಕ್ಕೆ ಸಜ್ಜು – 1 ಬಸ್ಸಿಗೆ 6 ಸಾವಿರ ಕೊಡುತ್ತಿದ್ದಾರೆ ಕೈ ನಾಯಕರು

Public TV
1 Min Read

ಮೈಸೂರು: ಶನಿವಾರ ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಸರ್ಕಾರದ ಸಾಧನಾ ಸಮಾವೇಶ (Sadhana Samavesha) ಆಯೋಜನೆಗೊಂಡಿದೆ. ಇದು ಒಂದರ್ಥದಲ್ಲಿ ಸಿದ್ದರಾಮಯ್ಯ (Siddaramaiah) ಶಕ್ತಿ ಪ್ರದರ್ಶನ ಸಮಾವೇಶವಾಗಿ ಮಾರ್ಪಟ್ಟಿದೆ. ಹೀಗಾಗಿ ಕಾರ್ಯಕರ್ತರಿಗೆ ದುಡ್ಡು ಕೊಟ್ಟು ಸಮಾವೇಶಕ್ಕೆ ಕರೆ ತರಲು ಕಾಂಗ್ರೆಸ್ ನಾಯಕರು (Congress Leader) ಮುಂದಾಗಿದ್ದಾರೆ.

ಸಮಾವೇಶದ ಪೂರ್ವಭಾವಿ ಸಭೆಯಲ್ಲಿ ನಾಯಕರು ಈ ಬಗ್ಗೆ ಚರ್ಚೆ ಮಾಡಿದ್ದಾರೆ. ಒಂದು ಬಸ್ಸಿಗೆ 5 ರಿಂದ 6 ಸಾವಿರ ರೂ. ಕೊಡುತ್ತೇವೆ. 19 ರ ಸಮಾವೇಶಕ್ಕೆ ಜನ ಕರೆದುಕೊಂಡು ಬರಬೇಕು ಅಷ್ಟೇ ಎಂದು ಮುಖಂಡರು ಹೇಳಿದ್ದಾರೆ. ಇದನ್ನೂ ಓದಿ: ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಟೆಕ್ಕಿ ಗಿರೀಶ್‌ ಹತ್ಯೆ ಕೇಸ್‌ ಶುಭಾಗೆ ಕ್ಷಮಾದಾನ ಅವಕಾಶ ನೀಡಿದ ಸುಪ್ರೀಂ

 

ಚಾಮುಂಡೇಶ್ವರಿ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ನಾಯಕರು ಈ ಹೇಳಿಕೆ ನೀಡಿದ್ದಾರೆ. ಜುಲೈ 19ರ ಸಮಾವೇಶಕ್ಕೆ ಜನ ಕರೆ ತರಬೇಕು ಅಷ್ಟೇ. ಕರ್ಕೊಂಡ್ ಬರ್ತೀವಿ. ಒಂದು ಬಸ್ಸಿಗೆ 5 ರಿಂದ 6 ಸಾವಿರ ಕೊಡುತ್ತೀರಿ. ಇದನ್ನ ಬಿಟ್ಟರೆ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ನಮ್ಮ ಕಷ್ಟವನ್ನು ಕೇಳುವವರು ಯಾರಿದ್ದೀರಿ ಎಂದು ಕೇಳಿದ್ದಾರೆ. ಇದನ್ನೂ ಓದಿ: ಮಗಳ ಆತ್ಮಹತ್ಯೆ ಕಣ್ಣಾರೆ ಕಂಡ ತಾಯಿ – ಶವ ಇಳಿಸಿ ಅದೇ ಫ್ಯಾನ್‌ಗೆ ನೇಣು ಬಿಗಿದುಕೊಂಡು ಸಾವು

ನಮ್ಮ ಕ್ಷೇತ್ರಕ್ಕೆ ಕಾಂಗ್ರೆಸ್ ಶಾಸಕರಿಲ್ಲ. ನಮ್ಮ ಸರ್ಕಾರವೇ ಅಧಿಕಾರಿಗಳನ್ನು ಹಾಕುತ್ತದೆ. ಆದರೆ ಇರುವ ಅಧಿಕಾರಿಗಳು ಶಾಸಕರ ಮಾತು ಕೇಳುತ್ತಾರೆ. ಹಾಗಾಗಿ ನಾವು ಎಲ್ಲಿಗೆ ಹೋಗಿ ಕೇಳುವುದು ಎಂದು ಪರೋಕ್ಷವಾಗಿ ಸಿದ್ದರಾಮಯ್ಯ ಸೋತ ನಂತರ ಚಾಮುಂಡೇಶ್ವರಿ ಕ್ಷೇತ್ರ ಕೈ ಬಿಟ್ಟಿದ್ದಾರೆ ಎಂದು ಕೂಡ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸಭೆಯಲ್ಲಿ ಬಹಿರಂಗವಾಗಿಯೇ ಕಾಂಗ್ರೆಸ್ ನಾಯಕ ಧನಗಹಳ್ಳಿ ಬಸವರಾಜು ಈ ರೀತಿ ಹೇಳಿದ್ದಾರೆ.

Share This Article