Oscars 2023: ಪ್ರತಿಷ್ಠಿತ ಆಸ್ಕರ್ ವೇದಿಕೆಯಲ್ಲಿ ಪ್ರದರ್ಶನಗೊಳ್ಳಲಿದೆ `ನಾಟು ನಾಟು’ ಸಾಂಗ್

Public TV
2 Min Read

ಖ್ಯಾತ ನಿರ್ದೇಶಕ ರಾಜಮೌಳಿ (Director Rajamouli) ನಿರ್ದೇಶನದ `RRR’ ಸಿನಿಮಾದ ಕೀರ್ತಿ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಈ ಚಿತ್ರದ `ನಾಟು ನಾಟು’ ಸಾಂಗ್‌ಗೆ ಗೋಲ್ಡನ್ ಗ್ಲೋಬ್ ಪ್ರಶಸ್ತಿ ಬಾಚಿಕೊಂಡ ಬೆನ್ನಲ್ಲೇ ಇದೀಗ ಪ್ರತಿಷ್ಠಿತ ಆಸ್ಕರ್ ವೇದಿಕೆಯಲ್ಲಿ `ನಾಟು ನಾಟು’ (Naatu Naatu Song) ಹಾಡು ಪ್ರದರ್ಶನಗೊಳ್ಳುವುದರ ಬಗ್ಗೆ ಸಿಹಿಸುದ್ದಿ ಸಿಕ್ಕಿದೆ.

ಆಸ್ಕರ್ (Oscars 2023) ಅಂಗಳಕ್ಕೆ ಹೋಗೋದು ಪ್ರತೀ ಫಿಲಂ ಮೇಕರ್‌ನ ಬಹುದೊಡ್ಡ ಕನಸು. ಆಸ್ಕರ್ ವೇದಿಕೆಯಲ್ಲಿ ಜಗತ್ತಿನ ವಿವಿಧ ಭಾಷೆಗಳ ವಿವಿಧ ದೇಶಗಳ ನಾನಾ ಮೈ ಬಣ್ಣದ ನಟ- ನಟಿಯರ ಮೇಳವೇ ನಡೆಯುತ್ತೆ. ಆದರೆ ಈ ಬಾರಿ ಆಸ್ಕರ್‌ನಲ್ಲಿ ಪ್ರಸಿದ್ಧ `ಆರ್‌ಆರ್‌ಆರ್’ ಸಿನಿಮಾದ್ದೇ ಸಮಾಚಾರ. ಈ ಚಿತ್ರ ಬಂದು ವರ್ಷ ಕಳೆದರೂ `ಆರ್‌ಆರ್‌ಆರ್’ ಚಿತ್ರದ `ನಾಟು ನಾಟು’ ಹಾಡು ಇಡೀ ಜಗತ್ತನ್ನೇ ಕುಣಿಸುತ್ತಿದೆ. ಹಾಗಾಗಿ ಮಾ.12ಕ್ಕೆ ಲಾಸ್ ಎಂಜಲೀಸ್‌ನಲ್ಲಿ 95ನೇ ಅಕಾಡೆಮಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ಆ ವೇದಿಕೆ ಮೇಲೆ `ನಾಟು ನಾಟು’ ಲೈವ್ ಪರ್ಫಾರ್ಮೆನ್ಸ್‌ಗೆ ಅವಕಾಶ ಸಿಕ್ಕಿದೆ. ಈ ಹಿಂದೆಯೇ ಈ ಬಗ್ಗೆ ಸುಳಿವು ಸಿಕ್ಕಿತ್ತು. ಇದೀಗ ಅಧಿಕೃತವಾಗಿ ಈ ವಿಚಾರವನ್ನು ಅಕಾಡೆಮಿ ಸ್ಪಷ್ಟಪಡಿಸಿದೆ.

ಚಂದ್ರಬೋಸ್ ಸಾಹಿತ್ಯ ಬರೆದಿರುವ `ನಾಟು ನಾಟು’ ಹಾಡನ್ನು ಗಾಯಕರಾದ ರಾಹುಲ್ ಸಿಪ್ಲಿಗಿಂಜ್ ಹಾಗೂ ಕಾಲ ಭೈರವ ಹಾಡಿದ್ದರು. ಇದೀಗ ಇವರಿಬ್ಬರಿಗೆ ಆಸ್ಕರ್ ವೇದಿಕೆಯ ಮೂಲಕ ಮತ್ತೊಮ್ಮೆ ಹಾಡಿನ ಲೈವ್ ಪರ್ಫಾರ್ಮೆನ್ಸ್ ನೀಡುವ ಅವಕಾಶ ದಕ್ಕಿದೆ. ಇದನ್ನು ಟ್ವೀಟ್ ಮಾಡಿ ಅಕಾಡೆಮಿ ಖಚಿತ ಪಡಿಸಿದೆ. ಜೇಮ್ಸ್ ಕ್ಯಾಮರೂನ್‌ನಂತ ಹಾಲಿವುಡ್ ಫಿಲ್ಮ್ ಮೇಕರ್ಸ್ ‘RRR’ ಸಿನಿಮಾ ನೋಡಿ ಮೆಚ್ಚಿ ಹೊಗಳಿದ್ದಾರೆ. ಈ ವಾರ ಸಿನಿಮಾ ಅಮೆರಿಕಾದಲ್ಲಿ ಮತ್ತೆ ರಿಲೀಸ್ ಆಗುತ್ತಿದೆ. ವಿಶೇಷ ಪ್ರದರ್ಶನಗಳನ್ನು ಏರ್ಪಡಿಸಲಾಗಿದೆ. ಖ್ಯಾತ ಸಂಗೀತ ನಿರ್ದೇಶಕ ಎಂ.ಎಂ ಕೀರವಾಣಿ (M.M Keeravani) ಈ ಹಾಡಿಗೆ ಸಂಗೀತ ನಿರ್ದೇಶನ ಮಾಡಿದವರು. ಅವರು ಆಸ್ಕರ್ ವೇದಿಕೆಯಲ್ಲಿ ಭಾಗಿ ಆಗುವುದು ಅನುಮಾನ ಎನ್ನಲಾಗ್ತಿದೆ. ಇತ್ತೀಚೆಗೆ ಆರೋಗ್ಯ ಕಾರಣಗಳಿಂದ ವೇದಿಕೆಯಲ್ಲಿ ಪರ್ಫಾರ್ಮೆನ್ಸ್ ಕಷ್ಟ ಎಂದು ಕೀರವಾಣಿ ಹೇಳಿದ್ದರು. ಅವರ ಬರುವಿಕೆಯ ಬಗ್ಗೆ ನಿರೀಕ್ಷೆಯಿದೆ. ಇದನ್ನೂ ಓದಿ ಸ್ವೀಟ್‌ ಹಾರ್ಟ್‌ಗೆ ವಿಶ್‌ ಮಾಡಿದ ರಿಷಬ್ ಶೆಟ್ಟಿ

ಚಿತ್ರದ ನಾಟು ನಾಟು ಸಾಂಗ್ ಅನ್ನ ಉಕ್ರೇನ್‌ನಲ್ಲಿ ಶೂಟ್ ಮಾಡಲಾಗಿತ್ತು. ಪ್ರೇಮ್ ರಕ್ಷಿತ್ ಕೊರಿಯೋಗ್ರಾಫಿಯಲ್ಲಿ ತಾರಕ್- ಚರಣ್ ಜಬರ್‌ದಸ್ತ್ ಆಗಿ ಹೆಜ್ಜೆ ಹಾಕಿದ್ದರು. ಈ ಸಿನಿಮಾ ಗೆಲುವಿಗೆ ರಾಜಮೌಳಿ ಅವರ ನಿರ್ದೇಶನವಷ್ಟೇ ಸಾಥ್ ನೀಡಿರುವುದಲ್ಲ. ಚಿತ್ರಕಥೆಯ ಜೊತೆ ತಾರಕ್ ಮತ್ತು ರಾಮ್ ಚರಣ್ ಅಭಿನಯ ಕೂಡ ಗೆಲುವಿಗೆ ಕಾರಣವಾಗಿದೆ.

Share This Article
Leave a Comment

Leave a Reply

Your email address will not be published. Required fields are marked *