ನಾಗಭೂಷಣ್, ಅಮೃತಾ ನಟನೆಯ ‘ಟಗರು ಪಲ್ಯ’ ಟೈಟಲ್ ಟ್ರ‍್ಯಾಕ್ ರಿಲೀಸ್

Public TV
1 Min Read

ಕ್ಕಟ್, ಬಡವ ರಾಸ್ಕಲ್ (Badava Rascal) ಸಿನಿಮಾಗಳ ಖ್ಯಾತಿಯ ಪ್ರತಿಭಾನ್ವಿತ ಕಲಾವಿದ ನಾಗಭೂಷಣ್ (Nagabhushan) ಅವರಿಗಿಂದು ಜನ್ಮದಿನದ ಸಂಭ್ರಮ. ಅವರ ಹುಟ್ಟುಹಬ್ಬದ ಸ್ಪೆಷಲ್ ಆಗಿ ‘ಟಗರು ಪಲ್ಯ’ (Tagaru Palya) ಸಿನಿಮಾ ಬಳಗದಿಂದ ವಿಶೇಷ ಉಡುಗೊರೆ ಸಿಕ್ಕಿದೆ. ಡಾಲಿ ಧನಂಜಯ್ (Daali Dhananjay) ತಮ್ಮದೇ ಡಾಲಿ ಪಿಕ್ಚರ್ಸ್ ನಡಿ ನಿರ್ಮಿಸುತ್ತಿರುವ ಮೂರನೇ ಚಿತ್ರ ಟಗರು ಪಲ್ಯ ಟೈಟಲ್ ಟ್ರ‍್ಯಾಕ್ ಅನ್ನು ನಾಯಕ ನಾಗಭೂಷಣ್ ಬರ್ತ್‌ಡೇ ಅಂಗವಾಗಿ ಬಿಡುಗಡೆ ಮಾಡಲಾಗಿದೆ. ಧನಂಜಯ್ ಕ್ಯಾಚಿ ಮ್ಯಾಚಿ ಪದಗಳನ್ನು ಸೇರಿಸಿ ಸಾಹಿತ್ಯ ರಚಿಸಿದ್ದು, ವಾಸುಕಿ ವೈಭವ್ ಸಂಗೀತ ನೀಡಿದ್ದು, ವಿಜಯ್ ಪ್ರಕಾಶ್ ಹಾಡಿಗೆ ಕಂಠ ಕುಣಿಸಿದ್ದಾರೆ.

ಯುವ ನಿರ್ದೇಶಕ ಉಮೇಶ್ ಕೆ ಕೃಪಾ ನಿರ್ದೇಶನದ ಚೊಚ್ಚಲ ಚಿತ್ರವಾಗಿರುವ ಟಗರು ಪಲ್ಯ ಮೂಲಕ ನೆನಪಿರಲಿ ಪ್ರೇಮ್ ಪುತ್ರಿ ಅಮೃತಾ (Amrutha Prem) ನಾಯಕಿಯಾಗಿ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದಾರೆ. ನಾಗಭೂಷಣ್ ನಾಯಕನಾಗಿ ನಟಿಸಿದ್ದಾರೆ. ಮಂಡ್ಯ ಹಳ್ಳಿಗಳಲ್ಲಿ ನಡೆಯುವ ಆಚರಣೆ ಸುತ್ತಾ ಇಡೀ ಸಿನಿಮಾವನ್ನು ನಿರ್ದೇಶಕ ಉಮೇಶ್ ಕೆ. ಕೃಪಾ ಕಟ್ಟಿಕೊಟ್ಟಿದ್ದಾರೆ. ಇದನ್ನೂ ಓದಿ:ನಿರ್ದೇಶಕನಾದ ‘ಗೊಂಬೆಗಳ ಲವ್’ ಹೀರೋ ಅರುಣ್

ಹಿರಿಯ ಕಲಾವಿದರಾದ ತಾರಾ, ಶರತ್ ಲೋಹಿತಾಶ್ವ, ರಂಗಾಯಣ ರಘು ಸೇರಿದಂತೆ ದೊಡ್ಡ ತಾರಾಬಳಗವಿರುವ ಟಗರು ಪಲ್ಯ ಚಿತ್ರಕ್ಕೆ ವಾಸುಕಿ ವೈಭವ್ ಸಂಗೀತ ನೀಡಿದ್ದಾರೆ. ಎಸ್ ಕೆ ರಾವ್ ಕ್ಯಾಮೆರಾ ಹಿಡಿದಿದ್ದಾರೆ. ಟೈಟಲ್ ಟ್ರ‍್ಯಾಕ್ ಮೂಲಕ ಪ್ರಚಾರ ಕಾರ್ಯ ಆರಂಭಿಸಿರುವ ಚಿತ್ರತಂಡ ಕನ್ನಡ ರಾಜ್ಯೋತ್ಸವಕ್ಕೆ ಸಿನಿಮಾವನ್ನು ತೆರೆಗೆ ತರಲು ಯೋಜನೆ ಹಾಕಿಕೊಂಡಿದೆ.

ಮೊದಲ ಬಾರಿಗೆ ಅಮೃತಾ ಪ್ರೇಮ್- ನಾಗಭೂಷಣ್ (Nagabhushan) ಜೋಡಿಯಾಗಿ ಅಭಿನಯಿಸಿರುವ ‘ಟಗರು ಪಲ್ಯ’ (Tagaru Palya) ಸಿನಿಮಾ ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆಯಿದೆ. ಸಿನಿಮಾಗಾಗಿ ಫ್ಯಾನ್ಸ್ ಎದುರು ನೋಡ್ತಿದ್ದಾರೆ.

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್