‘ಯುಗಾದಿ’ಗಾಗಿ ಹೊಸ ಹಾಡು ಬರೆದ ನಾಗೇಂದ್ರ ಪ್ರಸಾದ್

Public TV
1 Min Read

ಹಿರಿಯಸಾಹಿತಿ, ನಿರ್ದೇಶಕ ವಿ. ನಾಗೇಂದ್ರಪ್ರಸಾದ್ (V. Nagendra Prasad) ಒಬ್ಬ ಪರಿಸರ ಪ್ರೇಮಿಯಾಗಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿರುವ ಚಿತ್ರ  ‘ಕೃಷ್ಣಾವತಾರ’ (Krishnavatara). ಸಿರಿ ವೈ.ಎಸ್.ಆರ್.  ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿರುವ ಈ ಚಿತ್ರದಲ್ಲಿ ಯುಗಾದಿ ಹಬ್ಬಕ್ಕಾಗಿ ವಿಶೇಷ ಹಾಡೊಂದನ್ನು ನಾಗೇಂದ್ರ ಪ್ರಸಾದ್ ಬರೆದಿದ್ದಾರೆ.

‘ಯಗಗಳ ಆದಿ ಯುಗಾದಿ’ ಎಂಬ ಯುಗಾದಿ (Ugadi) ಮಹತ್ವ ಸಾರುವ ಸಾಹಿತ್ಯ ಒಳಗೊಂಡ ಈ ಲಿರಿಕಲ್ ವಿಡಿಯೋ ಹಾಡನ್ನು (Song)  ಮೈಸೂರು ಮಹಾರಾಜರಾದ ಯದುವೀರ್ ಒಡೆಯರ್ ಅವರು ಬಿಡುಗಡೆ ಮಾಡಿದರು. ಮುಂದಿನ ದಿನಗಳಲ್ಲಿ ಇದು ಯುಗಾದಿ ಹಬ್ಬದ ಖಾಯಂ ಹಾಡಾಗುವಂಥ ಎಲ್ಲಾ ಲಕ್ಷಣಗಳು ಈಗಾಗಲೇ ಗೋಚರಿಸಿವೆ. ಅಷ್ಟೊಂದು ಪರಿಣಾಮಕಾರಿಯಾದ ಸಾಹಿತ್ಯ, ರಾಗಸಂಯೋಜನೆ ಈ ಹಾಡಿನಲ್ಲಿದೆ.

ಮಾಯಾಬಜಾರ್ ಫಿಲಂಸ್ ಬ್ಯಾನರ್ ಅಡಿ ಗುರುಪ್ರಸಾದ್ ಕೆ. ಅವರು ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಶುಭ ರಕ್ಷಾ, ತ್ರಿವೇಣಿ ರಾಜ್ ಚಿತ್ರದ ನಾಯಕಿಯರಾಗಿ ಕಾಣಿಸಿಕೊಂಡಿದ್ದಾರೆ. ವಿಶ್ವನಾಥ್, ಮಾನಸಿ ಸುಧೀರ್, ರಘು ರಾಮನಕೊಪ್ಪ, ಪ್ರಕಾಶ್ ತುಮ್ಮಿನಾಡ್ ಹಾಗೂ  ಇತರರು  ಉಳಿದ ತಾರಾಗಣದಲ್ಲಿದ್ದಾರೆ.

 

ಇನ್ನು ಈ ಚಿತ್ರಕ್ಕೆ ರಾಜ ಶಿವಶಂಕರ್ ಅವರು ಕ್ಯಾಮೆರಾ ವರ್ಕ್ ಮಾಡಿದ್ದು, ಎಬಿಎಂ ಸಂಗೀತ ಸಂಯೋಜನೆ ಮಾಡಿದ್ದಾರೆ.

Share This Article