ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿಲ್ಲ: ನಳಿನ್‌ ಕುಮಾರ್ ಕಟೀಲ್

Public TV
1 Min Read

ಬೆಂಗಳೂರು: ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿಲ್ಲ. ಈ ಕುರಿತಂತೆ ಮಾಧ್ಯಮಗಳಲ್ಲಿ ಬರುತ್ತಿರುವ ಮಾಹಿತಿ ಸತ್ಯಕ್ಕೆ ದೂರವಾದುದು ಎಂದು ಬಿಜೆಪಿ (BJP) ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್‌ ಕುಮಾರ್ ಕಟೀಲ್ (Nalinkumar Katil) ಅವರು ತಿಳಿಸಿದ್ದಾರೆ.

ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ ಅವರು, ಬಳ್ಳಾರಿಯಲ್ಲಿ ವಿ. ಸೋಮಣ್ಣ (V Somanna) ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷೆಯನ್ನು ಪ್ರಕಟಿಸಿದ ಕುರಿತ ಪ್ರಶ್ನೆಗೆ ಉತ್ತರಿಸುವ ವೇಳೆ ಸೋಲಿನ ನೈತಿಕ ಹೊಣೆ ಹೊರುತ್ತೇನೆ. ಸೋಲಿನ ಕಾರಣಗಳ ಕುರಿತಂತೆ ಪಕ್ಷದ ಹಿರಿಯರಿಗೆ ಮಾಹಿತಿ ನೀಡಿದ್ದೇನೆ. 4 ವರ್ಷಗಳಿಂದ ನಾನು ಅಧ್ಯಕ್ಷ ಸ್ಥಾನದಲ್ಲಿದ್ದೇನೆ ಎಂದು ತಿಳಿಸಿದ್ದಾಗಿ ಅವರು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕಟೀಲ್‌ ರಾಜೀನಾಮೆ

 

ಪಕ್ಷದ ರಾಜ್ಯಾಧ್ಯಕ್ಷರ ನೇಮಕ ಕುರಿತಂತೆ ಪಕ್ಷವು ಸೂಕ್ತ ಸಂದರ್ಭದಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಅವರು ತಿಳಿಸಿದ್ದಾರೆ. ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದಾಗಿ ನಾನು ಹೇಳಿಲ್ಲ. ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಿ ಸುದ್ದಿ ಬಿತ್ತರಿಸಲಾಗುತ್ತಿದೆ ಎಂದು ಹೇಳಿಕೆಯಲ್ಲಿ ವಿವರಿಸಿದ್ದಾರೆ.

Share This Article