ನವದೆಹಲಿ: ಸಾಕಷ್ಟು ಹಗ್ಗಜಗ್ಗಾಟದ ನಂತರ ಬಾಕಿ ಉಳಿದಿದ್ದ ರಾಜ್ಯದ ನಿಗಮ ಮಂಡಳಿಗಳಿಗೆ ಅಧ್ಯಕ್ಷರ ಹೆಸರು ಅಂತಿಮಪಡಿಸಲಾಗಿದೆ.
ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ 2.5 ವರ್ಷ ತುಂಬುತ್ತಿರುವ ಹೊತ್ತಿನಲ್ಲಿ ರಾಜ್ಯದ ಒಟ್ಟು 39 ನಿಗಮ, ಮಂಡಳಿ ಮತ್ತು ಪ್ರಾಧಿಕಾರಗಳಿಗೆ ಅಧ್ಯಕ್ಷರ ನೇಮಕ ಪಟ್ಟಿಯನ್ನು ಎಐಸಿಸಿ ಬಿಡುಗಡೆ ಮಾಡಿದೆ.ಇದನ್ನೂ ಓದಿ: ಸೆ.26ರಿಂದ 5 ದಿನ ಕಾವೇರಿ ಆರತಿ – ಕೆಆರ್‌ಎಸ್‌ಗೆ ಭೇಟಿ ನೀಡಿ, ಸಿದ್ಧತೆ ವೀಕ್ಷಿಸಿದ ಡಿಕೆಶಿ
39 ನಿಗಮ ಮಂಡಳಿಗೆ ಅಧ್ಯಕ್ಷರ ನೇಮಕ ಮಾಡಿ ಎಐಸಿಸಿಯಿಂದ ರಾಜ್ಯಕ್ಕೆ ಪಟ್ಟಿ ರವಾನಿಸಿದೆ. ಶಾಸಕರಿಗೆ ಹೆಚ್ಚು ಮಣೆ ಹಾಕದೇ ಕಾರ್ಯಕರ್ತರಿಗೆ ಹೆಚ್ಚು ಅವಕಾಶ ಮಾಡಿ ಕೊಡಲಾಗಿದೆ. ಶಾಸಕ ವಿನಯ್ ಕುಲಕರ್ಣಿ ಕೊಲೆ ಪ್ರಕರಣವೊಂದರಲ್ಲಿ ಜೈಲು ಸೇರಿರುವ ಹಿನ್ನೆಲೆ ಪತ್ನಿ ಶಿವಲೀಲಾ ಕುಲಕರ್ಣಿಗೆ ಪತಿಗೆ ನೀಡಿದ್ದ ನಿಗಮದ ಅಧ್ಯಕ್ಷ ಸ್ಥಾನ ನೀಡಲಾಗಿದೆ.
ಇನ್ನೂ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ಹೆಸರು ಪ್ರಕಟವಾಗಿದೆ. ಅದಲ್ಲದೇ ಜಾತಿಗಳ ಅಭಿವೃದ್ಧಿ ನಿಗಮಗಳಿಗೂ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ನಂಜಯ್ಯನ ಮಠ್ ಹಾಗೂ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಅವರಿಗೂ ನಿಗಮದ ಅಧ್ಯಕ್ಷ ಸ್ಥಾನ ಘೋಷಣೆ ಮಾಡಲಾಗಿದೆ. ಎಐಸಿಸಿಯಿಂದ ರಾಜ್ಯಕ್ಕೆ ಪಟ್ಟಿ ರವಾನೆ ಆಗಿದ್ದು, ಸರ್ಕಾರದಿಂದ ಅಧಿಕೃತ ಆದೇಶ ಒಂದೇ ಬಾಕಿ ಇದೆ.ಇದನ್ನೂ ಓದಿ: ಮೂರು ಮಕ್ಕಳ ತಾಯಿ ಲೀಲಾಳ ಲವ್ವರ್‌ಗೆ ಬಿಯರ್ ಬಾಟಲ್‌ನಿಂದ ಹೊಡೆದ ಪತಿ ಮಂಜುನಾಥ್