ರಾಮ ಮಂದಿರ ಉದ್ಘಾಟನೆ ದಿನವೇ ನಟ ಧ್ರುವ ಪುತ್ರಿಗೆ ನಾಮಕರಣ

Public TV
1 Min Read

ಜನವರಿ 22ರ ದಿನಕ್ಕಾಗಿ ಇಡೀ ದೇಶಕ್ಕೆ ದೇಶವೇ ಕಾಯುತ್ತಿದೆ. ಅಂದು ಅಯೋಧ್ಯಯಲ್ಲಿ ರಾಮ ಮಂದಿರ (Rama Mandir) ಉದ್ಘಾಟನೆ ನಡೆಯುತ್ತಿದೆ. ಈ ಕಾರ್ಯಕ್ರಮದಲ್ಲಿ ಭಾಗಿ ಆಗುವುದಕ್ಕಾಗಿ ಹಲವರು ತುದಿಗಾಲಲ್ಲಿ ನಿಂತಿದ್ದಾರೆ. ಕನ್ನಡ ಸಿನಿಮಾ ರಂಗದಿಂದಲೂ ಹಲವಾರು ಸಿಲೆಬ್ರಿಟಿಗಳು ಭಾಗಿ ಆಗುತ್ತಿದ್ದಾರೆ. ಈ ದಿನವೇ ನಟ ಧ್ರುವ ಸರ್ಜಾ (Dhruva Sarja) ತಮ್ಮ ಪುತ್ರಿಗೆ ನಾಮಕರಣ ಮಾಡಲಿದ್ದಾರೆ.

ಧ್ರುವ ಸರ್ಜಾ ಅಂಡ್ ಫ್ಯಾಮಿಲಿ ಆಂಜನೇಯನ ಭಕ್ತರು. ಆಂಜನೇಯ ಗುಡಿಯನ್ನೇ ಈ ಕುಟುಂಬ ನಿರ್ಮಾಣ ಮಾಡಿದೆ. ಧ್ರುವ ಸಿನಿಮಾದಲ್ಲಿ ಹನುಮನ ಕುರಿತಾಗಿ ಸನ್ನಿವೇಶವೋ, ಹಾಡೋ ಇದ್ದೇ ಇರುತ್ತದೆ. ಹನುಮನ ಉಸಿರಾಗಿರುವ ರಾಮನ ಮಂದಿರ ಉದ್ಘಾಟನೆ ದಿನದಂದು ತಮ್ಮ ಪುತ್ರಿಗೆ ನಾಮಕರಣ ಮಾಡಲಿದ್ದಾರಂತೆ ಧ್ರುವ.

ಧ್ರುವ ಸರ್ಜಾ ಮಗಳಿಗೆ ನಾಮಕರಣ ಮಾಡುತ್ತಿದ್ದರೆ, ಅನೇಕ ಮಹಿಳೆಯರು ಅಂದೇ ಹೆರಿಗೆ ಮಾಡಿಸುವಂತೆ ವೈದ್ಯರ ದುಂಬಾಲು ಬಿದ್ದಿರುವ ಘಟನೆಗಳು ನಡೆದಿವೆ. ರಾಮ ಮಂದಿರ ಉದ್ಘಾಟನೆ ದಿನವೇ ಹೆರಿಗೆ ಮಾಡಿಸಿಕೊಳ್ಳಲು ಹಲವರು ತಯಾರಿ ಕೂಡ ಮಾಡಿಕೊಂಡಿದ್ದಾರೆ. ಅಷ್ಟರ ಮಟ್ಟಿಗೆ ರಾಮ ಜನರ ಮನಸ್ಸಲ್ಲಿ ಬೇರೂರಿದ್ದಾನೆ.

Share This Article