IPL ಪಂದ್ಯದ ದಿನ ತಡರಾತ್ರಿ 2ರವರೆಗೆ ಸಂಚಾರ ಅವಧಿ ವಿಸ್ತರಿಸಿದ ʻನಮ್ಮ ಮೆಟ್ರೋʼ

1 Min Read

ಬೆಂಗಳೂರು: ಇಂದಿನಿಂದ 2026ರ ಐಪಿಎಲ್‌ ಆವೃತ್ತಿ ಆರಂಭವಾಗುತ್ತಿದೆ. ಈ ಹಿನ್ನೆಲೆ ಪಂದ್ಯದ ದಿನದಂದು ತಡರಾತ್ರಿ 2 ಗಂಟೆವರೆಗೆ ನಮ್ಮ ಮೆಟ್ರೋ ಕಾರ್ಯನಿರ್ವಹಿಸಲಿದೆ ಎಂದು ಬಿಎಂಆರ್‌ಸಿಎಲ್‌ ತಿಳಿಸಿದೆ.

ಇಂದು (ಮಾ.28) ಆರ್‌ಸಿಬಿ ಹಾಗೂ ಎಸ್‌ಆರ್‌ಹೆಚ್‌ ನಡುವೆ ಮೊದಲ ಪಂದ್ಯ ನಡೆಯಲಿದೆ. ಹೀಗಾಗಿ ಮ್ಯಾಚ್‌ ನೋಡಿ ಹಿಂದಿರುಗುವವರಿಗೆ ಅನುಕೂಲವಾಗಬೇಕು ಎಂಬ ಉದ್ದೇಶದಿಂದ ಬಿಎಂಆರ್‌ಸಿಎಲ್ ಈ ಕ್ರಮ ಕೈಗೊಂಡಿದೆ. ಇದನ್ನೂ ಓದಿ: ಬೆಂಗಳೂರಲ್ಲಿ ಇಂದು ಐಪಿಎಲ್‌ ಉದ್ಘಾಟನೆ – ಚಿನ್ನಸ್ವಾಮಿ‌ ಕ್ರೀಡಾಂಗಣಕ್ಕೆ 2,000 ಪೊಲೀಸರ ಭದ್ರತೆ

ಸಾಮಾನ್ಯವಾಗಿ ರಾತ್ರಿ 11 ಗಂಟೆಗೆ ಕೊನೆಯ ಮೆಟ್ರೋ ಸಂಚರಿಸುತ್ತಿತ್ತು. ಇದೀಗ ಐಪಿಎಲ್‌ ಪ್ರಾರಂಭವಾಗಿದ್ದು, ಪಂದ್ಯದ ದಿನದಂದು ಎಲ್ಲಾ ನಿಲ್ದಾಣಗಳಿಂದ ಕೊನೆಯ ಮೆಟ್ರೋ ಸೇವೆಯನ್ನು ರಾತ್ರಿ 11 ಗಂಟೆಯ ಬದಲಾಗಿ ತಡರಾತ್ರಿ 2 ಗಂಟೆಯವರೆಗೆ ವಿಸ್ತರಣೆ ಮಾಡಲಾಗಿದೆ. ಮೆಜೆಸ್ಟಿಕ್ ನಿಲ್ದಾಣದಿಂದ ನಾಲ್ಕೂ ದಿಕ್ಕುಗಳಿಗೆ ಕೊನೆಯ ರೈಲು ಮಧ್ಯರಾತ್ರಿ 1.30ಕ್ಕೆ ಹೊರಡಲಿದೆ.

ಇನ್ನೂ ಐಪಿಎಲ್ ಪಂದ್ಯದ ಟಿಕೆಟ್‌ಗಳಲ್ಲಿ ಈಗಾಗಲೇ ನಮ್ಮ ಮೆಟ್ರೋ ಕ್ಯೂಆರ್ ಕೋಡ್ ಮುದ್ರಣಗೊಂಡಿದ್ದು, ಕ್ರೀಡಾಂಗಣಕ್ಕೆ ಬರುವವರು ಕಬ್ಬನ್ ಪಾರ್ಕ್ ಅಥವಾ ಮಹಾತ್ಮ ಗಾಂಧಿ ರಸ್ತೆ ಮೆಟ್ರೋ ನಿಲ್ದಾಣಗಳನ್ನು ಬಳಸಲು ಸೂಚನೆ ನೀಡಲಾಗಿದೆ. ವಾಹನ ದಟ್ಟಣೆ ನಿಯಂತ್ರಿಸಲು ನಗರದ 44 ಮೆಟ್ರೋ ನಿಲ್ದಾಣಗಳಲ್ಲಿ ಹೆಚ್ಚಿನ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ.ಇದನ್ನೂ ಓದಿ: ಇಂದು IPL ಉದ್ಘಾಟನಾ ಪಂದ್ಯ: ಚಿನ್ನಸ್ವಾಮಿ ಸುತ್ತಮುತ್ತ ನೋ ಪಾರ್ಕಿಂಗ್, ಎಲ್ಲಿ ಪಾರ್ಕ್ ಮಾಡ್ಬೋದು?

Share This Article