ನಮ್ಮ ಮೆಟ್ರೋ ಆರೆಂಜ್ ಲೈನ್ ಆರಂಭಕ್ಕೂ ಮುನ್ನವೇ ಮುಕ್ತಾಯದ ಟಾರ್ಗೆಟ್ ಮುಂದಕ್ಕೆ!

Public TV
2 Min Read

– 2030ರಿಂದ 2031ಕ್ಕೆ ಆರೆಂಜ್ ಲೈನ್ ಪ್ರಾಜೆಕ್ಟ್ ವಿಸ್ತರಣೆ

ಬೆಂಗಳೂರು: ಇತ್ತೀಚಿಗಷ್ಟೇ ರಾಜ್ಯ ಸರ್ಕಾರ ಅನುಮೋದನೆ ನೀಡಿದ್ದ ಬೆಂಗಳೂರಿನ ಆರೆಂಜ್ ಲೈನ್ ಮೆಟ್ರೋ (Orange Line Metro) ಸಂಬಂಧ ಕಹಿ ಸುದ್ದಿ ಹೊರ ಬಿದ್ದಿದೆ. ಈ ಮಾರ್ಗದ ಕಾಮಗಾರಿ ಆರಂಭಕ್ಕೂ ಮುನ್ನವೇ ಮುಕ್ತಾಯದ ಅವಧಿಯನ್ನು 2030ರಿಂದ 2031ಕ್ಕೆ ವಿಸ್ತರಣೆ ಮಾಡಲಾಗಿದೆ.

ಇತ್ತೀಚೆಗಷ್ಟೇ ಪ್ರಧಾನಿ ಮೋದಿ (PM Modi), ಹಳದಿ ಲೈನ್ ಮೆಟ್ರೋ ಉದ್ಘಾಟನೆ ಮಾಡಿ ಅದೇ ದಿನ ಆರೆಂಜ್ ಲೈನ್‌ಗೆ ಶಂಕುಸ್ಥಾಪನೆ ಮಾಡಿದ್ದರು. ಆದರೆ ಇದೀಗ ಬಹುನಿರೀಕ್ಷಿತ ಮಾರ್ಗದ ಕಾಮಗಾರಿ ಮುಕ್ತಾಯದ ಸಮಯಾವಕಾಶ ಮತ್ತೊಂದು ವರ್ಷ ಮುಂದಕ್ಕೆ ಹೋಗಿದೆ. ಈ ಮೂಲಕ 2030ಕ್ಕೆ ಮುಕ್ತಾಯವಾಗಬೇಕಿದ್ದ ಮಾರ್ಗಕ್ಕೆ ಹೆಚ್ಚುವರಿ ಒಂದು ವರ್ಷ ಕಾಯಬೇಕಾಗಿದೆ. ಇದನ್ನೂ ಓದಿ: ಮೋದಿ ಸಂಚಾರಕ್ಕೆ ಜಿನ್‌ಪಿಂಗ್‌ ಮೆಚ್ಚಿನ ಕಾರು ನೀಡಿದ ಚೀನಾ!

 ಹೌದು, ಇದು ಬೆಂಗಳೂರಿನ (Bengaluru) ಬಹುನಿರೀಕ್ಷಿತ ಮಾರ್ಗಗಳಲ್ಲಿ ಒಂದಾದ ಕಿತ್ತಾಳೆ ಮಾರ್ಗದ ಬಗೆಗಿನ ಸುದ್ದಿ. ಜೆ.ಪಿ.ನಗರ 4ನೇ ಹಂತದಿಂದ ಕೆಂಪಾಪುರ ಮತ್ತು ಹೊಸಹಳ್ಳಿಯಿಂದ ಕಡಬಗೆರೆಯನ್ನು ಸಂಪರ್ಕಿಸುವ ಈ ಮಾರ್ಗದ ಕಾಮಗಾರಿಯ ಅವಧಿಯನ್ನು 2031ರ ಮೇ ತನಕ ವಿಸ್ತರಿಸಲಾಗಿದೆ. ಬಿಎಂಆರ್‌ಸಿಎಲ್ ಮೂಲಗಳ ಪ್ರಕಾರ, ಕಿತ್ತಳೆ ಮಾರ್ಗದ ಕಾಮಗಾರಿಗೆ ಐದೂವರೆ ವರ್ಷಗಳ ಕಾಲಾವಧಿ ತೆಗೆದುಕೊಳ್ಳಲಿದೆ. ಈ ವರ್ಷದ ನವೆಂಬರ್‌ನಲ್ಲಿ ಟೆಂಡರ್ ಪ್ರಕ್ರಿಯೆ ಅಂತಿಮಗೊಳ್ಳಲಿದ್ದು, ಡಿಸೆಂಬರ್-ಜನವರಿಯಲ್ಲಿ ಕಾಮಗಾರಿ ಆರಂಭವಾಗುವ ಗುರಿಯಿದೆ. ಆರಂಭದಲ್ಲಿ 2029 ಅಥವಾ 2030ರಲ್ಲಿ ಯೋಜನೆಯನ್ನು ಪೂರ್ಣಗೊಳಿಸುವ ಗುರಿಯಿತ್ತು. ಆದರೆ, ಸಂಚಾರ ದಟ್ಟಣೆಯನ್ನು ಕಡಿಮೆ ಮಾಡಲು ಎರಡೂ ಕಾರಿಡಾರ್‌ಗಳಲ್ಲಿ ಡಬಲ್ ಡೆಕ್ಕರ್ ಮಾರ್ಗ ನಿರ್ಮಾಣದ ನಿರ್ಧಾರದಿಂದ ಕಾಮಗಾರಿಯ ಅವಧಿ ಒಂದು ವರ್ಷ ಹೆಚ್ಚಾಗಿದೆ ಎನ್ನಲಾಗಿದೆ. ಇದನ್ನೂ ಓದಿ: ಆನ್‌ಲೈನ್ ಗೇಮಿಂಗ್ ನಿಷೇಧ ಕಾಯ್ದೆ ಬಗ್ಗೆ ನಿಮಗೆಷ್ಟು ಗೊತ್ತು?

ಈ ವಿಳಂಬದಿಂದ ಯೋಜನೆಯ ವೆಚ್ಚವು 5% ರಷ್ಟು ಅಥವಾ ಅದಕ್ಕಿಂತಲೂ ಹೆಚ್ಚಾಗುವ ಸಂಭವವಿದೆ. 44.65 ಕಿ.ಮೀ ಉದ್ದದ ಈ ಮಾರ್ಗವನ್ನ ಎರಡು ಫೇಸ್‌ಗಳಲ್ಲಿ ನಿರ್ಮಾಣ ಮಾಡಲಾಗುತ್ತಿರುವ ಕಾರಣ ಡಬ್ಬಲ್ ಡೆಕ್ಕರ್ ನಿರ್ಮಾಣ ಮಾಡಬೇಕಿರೋ ಹಿನ್ನೆಲೆ ಹೆಚ್ಚುವರಿ ಸಮಯ ಬೇಕಾಗಲಿದೆ. ಇದೇ ಕಾರಣಕ್ಕೆ ಸದ್ಯ ಮಾರ್ಗದ ಪ್ರಾಜೆಕ್ಟ್ ಮುಕ್ತಾಯ 2031ರ ಸಮಯ ತೆಗೆದುಕೊಳ್ಳಲಿದೆ. ಯೋಜನೆಯ ಒಟ್ಟು ಅಂದಾಜು ವೆಚ್ಚ 15,611 ಕೋಟಿ ರೂ. ಗಳಾಗಿದ್ದು, ವಿಳಂಬದಿಂದ ಈ ವೆಚ್ಚ 5% ರಷ್ಟು ಹೆಚ್ಚಾಗಬಹುದು ಎಂದು ಅಂದಾಜಿಸಲಾಗಿದೆ.

2021ರಲ್ಲಿ ರಾಜ್ಯ ಸರ್ಕಾರ ಈ ಯೋಜನೆಗೆ ಒಪ್ಪಿಗೆ ನೀಡಿ ಸಮಗ್ರ ಯೋಜನಾ ವರದಿ(ಡಿಪಿಆರ್)ಅನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸಿತ್ತು. ಕೇಂದ್ರ ಸರ್ಕಾರ ಕಳೆದ ವರ್ಷ ಅನುಮೋದನೆ ನೀಡಿತ್ತು. ಜಪಾನ್ ಇಂಟರ್‌ನ್ಯಾಷನಲ್ ಕೋ ಆಪರೇಷನ್ ಏಜೆನ್ಸಿಯಿಂದ 6,770 ಕೋಟಿ ರೂ. ಸಾಲದ ಒಪ್ಪಂದವು ನವೆಂಬರ್‌ನಲ್ಲಿ ಏರ್ಪಡಲಿದೆ. ಈ ಅನುದಾನವು ರೈಲ್ವೆ ಬೋಗಿಗಳ ವೆಚ್ಚ ಮತ್ತು ಇತರ ಕಾಮಗಾರಿಗಳಿಗೆ ಬಳಕೆಯಾಗಲಿದೆ.

 ಒಟ್ಟಾರೆ ಮಾರ್ಗದ ನಿರ್ಮಾಣ ಕಾರ್ಯ ಸಂಪೂರ್ಣ ಮುಕ್ತಾಯವಾಗಬೇಕಾದರೆ, ಸದ್ಯದ ಅಂದಾಜಿನ ಪ್ರಕಾರ 2031ರ ಮೇ ಎನ್ನಲಾಗ್ತಿದೆ. ಆದರೆ ಯಲ್ಲೋ ಮಾರ್ಗದಲ್ಲಾದಂತ ಸಮಸ್ಯೆಯಾದ್ರೆ, ಹೆಚ್ಚುವರಿ ಸಮಯ ಮೀರಿ, ಇನ್ನಷ್ಟು ಸಮಯ ತೆಗೆದುಕೊಂಡರು ಅಚ್ಚರಿ ಪಡಬೇಕಿಲ್ಲ.

Share This Article