ವಾರಣಾಸಿ: ವಾರಣಾಸಿಯಲ್ಲಿ ಕರ್ನಾಟಕ ರೇಷ್ಮೆ ಮಾರುಕಟ್ಟೆ ಸ್ಥಾಪನೆಗೆ ರೇಷ್ಮೆ ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಸಚಿವ ಡಾ.ನಾರಾಯಣಗೌಡ ಅವರ ಪ್ರಸ್ತಾಪಕ್ಕೆ ಉತ್ತರ ಪ್ರದೇಶ ಸರ್ಕಾರ ತಕ್ಷಣವೇ ಸ್ಪಂದಿಸಿದೆ.
ವಾರಣಾಸಿಯ ಸಾರಂಗ್ ತಲಾಬ್ ಪ್ರದೇಶದಲ್ಲಿ ಕರ್ನಾಟಕ ರೇಷ್ಮೆ ಮಾರಾಟ ಮಂಡಳಿ ಶಾಖೆ ತೆರೆಯಲು ಯುಪಿ ಸರ್ಕಾರ ಜಾಗ ನೀಡಲು ಒಪ್ಪಿದೆ. ಸಾರಂಗ್ ತಲಾಬ್ ಪ್ರದೇಶದಲ್ಲಿ ಕೆಎಸ್‍ಎಂಬಿ ಶಾಖೆ ತೆರೆಯಲು ಒಪ್ಪಿಗೆ ನೀಡಲಾಗಿದ್ದು, ಕಟ್ಟಡದ ಜಾಗಕ್ಕೆ ನಾರಾಯಣಗೌಡ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇದನ್ನೂ ಓದಿ: ಬಟ್ಟೆ ಬಿಚ್ಚಿ ತಿರುಗುವವರಿಗೇನ್ ಗೊತ್ತು ಗಾಂಧಿ ಮೌಲ್ಯ: ಕಂಗನಾ ವಿರುದ್ಧ ರಮೇಶ್ ಕುಮಾರ್ ಕಿಡಿ
ಕೆಎಸ್‍ಎಂಬಿ ಕಚೇರಿ ಹಾಗೂ ಗೋದಾಮಿಗೆ ನೀಡಲು ಉದ್ದೇಶಿತ ಕಟ್ಟಡ ಪರಿಶೀಲನೆ ನಡೆಸಿ, ಶೀಘ್ರವೇ ಯುಪಿ ಸರ್ಕಾರದ ಜೊತೆ ಒಪ್ಪಂದ ಮಾಡಿಕೊಳ್ಳಲು ಅಗತ್ಯ ಕ್ರಮಗಳನ್ನು ಕೈಗೊಂಡು, ಕೂಡಲೇ ಅಗತ್ಯವಿರುವ ಕಾಮಗಾರಿಗಳನ್ನು ಕೈಗೊಳ್ಳುವಂತೆ ಸೂಚಿಸಿದರು. ಇದನ್ನೂ ಓದಿ: ನಿಮ್ಮ ತಟ್ಟೆಯಲ್ಲಿ ಬಿದ್ದಿರುವ ಕತ್ತೆಯನ್ನು ತೆಗೆಯಿರಿ – ಕಾಂಗ್ರೆಸ್ ವಿರುದ್ಧ ಶ್ರೀರಾಮುಲು ಕಿಡಿ