ಗ್ರಾಮೀಣಾಭಿವೃದ್ಧಿ ಕ್ಷೇತ್ರದಲ್ಲಿ ನರೇಗಾ ವಿಶ್ವಕ್ಕೆ ಮಾದರಿ: ಕೆ.ಎಸ್.ಈಶ್ವರಪ್ಪ

Public TV
2 Min Read

ಶಿವಮೊಗ್ಗ: ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆ ಗ್ರಾಮೀಣಾಭಿವೃದ್ಧಿ ಮಾಡಲು ವಿಶ್ವಕ್ಕೆ ಮಾದರಿ ಯೋಜನೆಯಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದರು.

ಜಿಲ್ಲೆಯ ಹೊಳಲೂರಿನ ಅಂಬೇಡ್ಕರ್ ಭವನದಲ್ಲಿ, ಕರ್ನಾಟಕ ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆ ನೌಕರರ ಕ್ಷೇಮಾಭಿವೃದ್ಧಿ ಸಂಘ ಆಯೋಜಿಸಿದ್ದ, ನರೇಗಾ ದಿನಾಚರಣೆ ಕಾರ್ಯಕ್ರಮವನ್ನು ಈಶ್ವರಪ್ಪ ಅವರು ಉದ್ಘಾಟಿಸಿ ಮಾಧ್ಯಮಗಳೊಂದಿಗೆ ಮಾತನಾಡಿದರು. ಇದನ್ನೂ ಓದಿ: ಡಿಕೆಶಿ, ಸಿದ್ದರಾಮಯ್ಯ ನಡುವೆ ಜಗಳವಿರಬಹುದು : ಸತೀಶ್ ಜಾರಕಿಹೊಳಿ

ಈ ವೇಳೆ ಅವರು, ನರೇಗಾ ಯೋಜನೆ ಕೇವಲ ಕೂಲಿಗಾಗಿ ಕೆಲಸ ಮಾಡುವ ಯೋಜನೆ ಅಲ್ಲ. ಗ್ರಾಮೀಣ ಪ್ರದೇಶದಲ್ಲಿ ಅಗತ್ಯ ಮೂಲ ಸೌಲಭ್ಯಗಳನ್ನು ಒದಗಿಸುವುದರೊಂದಿಗೆ, ವೈಯಕ್ತಿಕ ಸೌಲಭ್ಯಗಳನ್ನು ಸಹ ಪಡೆಯುವ ಯೋಜನೆ ಇದಾಗಿದೆ. ಯೋಜನೆಯಡಿ ರಾಜ್ಯದಲ್ಲಿ ಗ್ರಾಮಗಳನ್ನು ವ್ಯವಸ್ಥಿತವಾಗಿ ಅಭಿವೃದ್ಧಿ ಪಡಿಸಲಾಗುತ್ತಿದ್ದು, 600ಕ್ಕೂ ಹೆಚ್ಚು ಹಳೆ ಕಲ್ಯಾಣಿಗಳಿಗೆ ಪುನರ್ಜನ್ಮ ನೀಡಲು ಸಾಧ್ಯವಾಗಿದೆ. ಕಳೆದ ಎರಡು ವರ್ಷಗಳಲ್ಲಿ ಪ್ರತಿ ಗ್ರಾಮದಲ್ಲಿ ಕನಿಷ್ಟ ಒಂದು ಕೆರೆ ಅಭಿವೃದ್ಧಿ ಯೋಜನೆ ಕೈಗೊಳ್ಳಲಾಗಿದ್ದು, ಇದರಿಂದ ಅಂತರ್ಜಲ ಮಟ್ಟ ಹೆಚ್ಚಾಗಿರುವುದನ್ನು ಕಂಡುಕೊಳ್ಳಲಾಗಿದೆ. ಇದರಿಂದಾಗಿ ಜಲಧಾರೆ ಯೋಜನೆಯಡಿ ನಮ್ಮ ರಾಜ್ಯ ದೇಶಕ್ಕೆ ಪ್ರಥಮ ಸ್ಥಾನ ಪಡೆಯಲು ಸಾಧ್ಯವಾಗಿದೆ ಎಂದರು.

ನರೇಗಾ ಯೋಜನೆಯಡಿ ಸಣ್ಣ ರೈತರು ತಮ್ಮ ಕೃಷಿ ಚಟುವಟಿಕೆ ಸಾಮಥ್ರ್ಯವನ್ನು ಹೆಚ್ಚಿಸಿ, ಹೆಚ್ಚಿನ ಆದಾಯ ಗಳಿಸಲು ಸಾಧ್ಯವಾಗಿದೆ. ಕೆರೆ, ಇಂಗುಗುಂಡಿಗಳ ನಿರ್ಮಾಣ, ತಡೆಗೋಡೆ ನಿರ್ಮಾಣ, ಹೊಲಕ್ಕೆ ಹೋಗಲು ಸಣ್ಣ ರಸ್ತೆಗಳ ನಿರ್ಮಾಣ, ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಸಸಿಗಳನ್ನು ನೆಡುವ ಯೋಜನೆ, ಜಾನುವಾರುಗಳಿಗೆ ಕುಡಿಯುವ ನೀರಿನ ತೊಟ್ಟಿ ನಿರ್ಮಾಣ, ದನದ ಕೊಟ್ಟಿಗೆ, ಕುರಿ ಶೆಡ್ ನಿರ್ಮಾಣ ಸೇರಿದಂತೆ ಯಾವುದೇ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಅವಕಾಶವಿದೆ ಎಂದರು.

ನರೇಗಾ ಯೋಜನೆಯಡಿ ತ್ಯಾವರೆಕೊಪ್ಪ ಹುಲಿ ಸಿಂಹಧಾಮದಲ್ಲಿರುವ ಕೆರೆಗಳ ಅಭಿವೃದ್ಧಿ ಸೇರಿದಂತೆ ಇನ್ನಿತರ ಕಾಮಗಾರಿಗಳನ್ನು ಅನುಷ್ಠಾನಗೊಳಿಸಲು ಪ್ರಸ್ತಾವನೆಯನ್ನು ಸಿದ್ಧಪಡಿಸಲಾಗಿದೆ. ಸರ್ಕಾರದಿಂದ ಅನುಮತಿಯನ್ನು ಪಡೆದು ಈ ಕಾಮಗಾರಿಗಳ ಅನುಷ್ಠಾನ ಕಾರ್ಯವನ್ನು ಆದಷ್ಟು ಬೇಗನೆ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ಇದನ್ನೂ ಓದಿ: ರಾಜ್ಯ ಸರ್ಕಾರದಿಂದ ಯಾವುದೇ ಕಾರ್ಯಕ್ರಮ ಆಗುತ್ತಿಲ್ಲ: ಸಂತೋಷ್ ಲಾಡ್

ನರೇಗಾ ಯೋಜನೆಯಡಿ ಪ್ರಸ್ತುತ ವರ್ಷ ಕೇಂದ್ರ ಸರ್ಕಾರ ನೀಡಿದ್ದ 13 ಕೋಟಿ ಮಾನವ ದಿನಗಳ ಗುರಿ, ನವೆಂಬರ್ ತಿಂಗಳಲ್ಲಿ ಪೂರ್ಣಗೊಂಡ ಕಾರಣ ಹೆಚ್ಚುವರಿಯಾಗಿ 1.40ಕೋಟಿ ಮಾನವ ದಿನ ರಾಜ್ಯಕ್ಕೆ ನೀಡಿತ್ತು. ಅದನ್ನು ಸಹ ಪೂರ್ಣಗೊಳಿಸಿ, ಹೆಚ್ಚುವರಿ ದಿನಕ್ಕೆ ಅವಕಾಶ ನೀಡಲು ಕೇಂದ್ರಕ್ಕೆ ಕೋರಲಾಗಿದೆ ಎಂದರು.

Share This Article
Leave a Comment

Leave a Reply

Your email address will not be published. Required fields are marked *