ದೇಶಾದ್ಯಂತ 508 ರೈಲ್ವೆ ನಿಲ್ದಾಣ ಪುನರಾಭಿವೃದ್ಧಿಗೆ ಮೋದಿ ಚಾಲನೆ

Public TV
2 Min Read

ನವದೆಹಲಿ: ದೇಶಾದ್ಯಂತ 508 ರೈಲ್ವೆ ನಿಲ್ದಾಣಗಳ (Railway Station) ಪುನರಾಭಿವೃದ್ಧಿಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಭಾನುವಾರ ವೀಡಿಯೋ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಿದ್ದಾರೆ.

ಉತ್ತರ ಪ್ರದೇಶ ಮತ್ತು ರಾಜಸ್ಥಾನದಲ್ಲಿ ತಲಾ 55, ಬಿಹಾರದಲ್ಲಿ 49, ಮಹಾರಾಷ್ಟ್ರದಲ್ಲಿ 44, ಮಶ್ಚಿಮ ಬಂಗಾಳದಲ್ಲಿ 37, ಮಧ್ಯ ಪ್ರದೇಶದಲ್ಲಿ 34, ಅಸ್ಸಾಂನಲ್ಲಿ 32, ಒಡಿಶಾದಲ್ಲಿ 25, ಪಂಜಾಬ್‌ನಲ್ಲಿ 22, ಗುಜರಾತ್ ಮತ್ತು ತೆಲಂಗಾಣದಲ್ಲಿ ತಲಾ 21, ಜಾರ್ಖಂಡ್‌ನಲ್ಲಿ 20, ಆಂಧ್ರಪ್ರದೇಶ ಮತ್ತು ತಮಿಳುನಾಡಿನಲ್ಲಿ ತಲಾ 18, ಹರಿಯಾಣದಲ್ಲಿ 15, ಕರ್ನಾಟಕದಲ್ಲಿ 13 ಸೇರಿದಂತೆ ದೇಶಾದ್ಯಂತ ಒಟ್ಟು 508 ರೈಲ್ವೆ ನಿಲ್ದಾಣಗಳು ಇದರಲ್ಲಿ ಸೇರಿವೆ ಎಂದು ಪ್ರಧಾನಿ ಕಾರ್ಯಾಲಯ ತಿಳಿಸಿದೆ.

ದೇಶದ ರೈಲ್ವೆ ನಿಲ್ದಾಣಗಳನ್ನು ಹೈಟೆಕ್ ಮಾಡುವ ನಿಟ್ಟಿನಲ್ಲಿ ಅಮೃತ್ ಭಾರತ್ ನಿಲ್ದಾಣ ಯೋಜನೆಯ (Amrit Bharat Station Scheme) ಮೊದಲ ಹಂತ ಇದಾಗಿದ್ದು, ಇದಕ್ಕಾಗಿ ಕರ್ನಾಟಕದಿಂದ ಆಯ್ಕೆಯಾದ 55 ನಿಲ್ದಾಣಗಳ ಪೈಕಿ 13 ನಿಲ್ದಾಣಗಳಿಗೆ ಇಂದು ಶಿಲಾನ್ಯಾಸ ಕಾರ್ಯಕ್ರಮ ನೆರವೇರಿದೆ. ಇದನ್ನೂ ಓದಿ: ಅಮೃತ್ ಭಾರತ್; ರಾಜ್ಯದ 13 ರೈಲ್ವೆ ನಿಲ್ದಾಣಗಳ ಪುನರಾಭಿವೃದ್ಧಿ – ಮೋದಿಯಿಂದ ಇಂದು ಚಾಲನೆ

ಶಿಲಾನ್ಯಾಸಗೊಂಡ ಕರ್ನಾಟಕದ 13 ನಿಲ್ದಾಣಗಳೆಂದರೆ, ಬಳ್ಳಾರಿ, ಘಟಪ್ರಭಾ, ಗೋಕಾಕ್ ರಸ್ತೆ, ಬೀದರ್, ಮಂಗಳೂರು, ಹರಿಹರ, ಅಳ್ನಾವರ, ಗದಗ, ಅರಸೀಕೆರೆ, ಕಲಬುರಗಿ, ಶಹಾಬಾದ್, ಕೊಪ್ಪಳ. 24,470 ಕೋಟಿ ರೂ. ವೆಚ್ಚದಲ್ಲಿ ದೇಶಾದ್ಯಂತ ರೈಲ್ವೆ ನಿಲ್ದಾಣಗಳ ಮರುಅಭಿವೃದ್ಧಿ ಕಾರ್ಯ ನಡೆಯಲಿದೆ. ಇದರಲ್ಲಿ 347 ಕೋಟಿ ರೂ. ಕರ್ನಾಟಕದ ರೈಲ್ವೆ ನಿಲ್ದಾಣಗಳಿಗೆ ಮೀಸಲಿಡಲಾಗಿದೆ. ಇದನ್ನೂ ಓದಿ: 7 ಎಕರೆಯಲ್ಲಿ ಟೊಮೆಟೋ ಬೆಳೆದು ಕೋಟಿ ರೂ. ಸಂಪಾದಿಸಿದ ರೈತ

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್