ಬೆಂಗಳೂರು: ರಾಷ್ಟ್ರೀಯ ಉತ್ತಮ ಶಿಕ್ಷಕ ಪುರಸ್ಕೃತ ಪಿಜಿ ದ್ವಾರಕನಾಥ್ ನಿಧನರಾಗಿದ್ದಾರೆ. ಇಂದು ಸಾಯಂಕಾಲ ಕೆಂಗೇರಿ ಚಿತಾಗಾರದಲ್ಲಿ ಅಂತ್ಯಕ್ರಿಯೆ ನಡೆಯಲಿದೆ.
ವಿದ್ಯಾವರ್ಧಕ ಸಂಘದ ಕಾರ್ಯದರ್ಶಿಯಾಗಿದ್ದ ದ್ವಾರಕನಾಥ್ ಅವರು ಶುಕ್ರವಾರ ರಾತ್ರಿ 9 ಗಂಟೆಗೆ ಆರ್ಆರ್ ನಗರದ ರಾಷ್ಟ್ರೋತ್ಥಾನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ರಾಷ್ಟ್ರಪತಿಗಳಿಂದ ರಾಷ್ಟ್ರೀಯ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರಾಗಿದ್ದರು. ಅವರ ವ್ಯಾಪಕ ಶೈಕ್ಷಣಿಕ ಮತ್ತು ಆಡಳಿತಾತ್ಮಕ ಅನುಭವಕ್ಕಾಗಿ ಸಂಘದ ಕಾರ್ಯದರ್ಶಿಗಳಾಗಿ ನೇಮಕ ಮಾಡಲಾಗಿತ್ತು. ರಾಷ್ಟ್ರೀಯ ಉತ್ತಮ ಶಿಕ್ಷಕ ಪ್ರಶಸ್ತಿಗೆ ಭಾಜನರಾಗಿದ್ದರು.
ವಿವಿಎಸ್ ಸಂಸ್ಥೆಗಳಿಗೆ ಮಾರ್ಗದರ್ಶಿ ಶಕ್ತಿ ಮತ್ತು ಬೆಂಬಲದ ಆಧಾರ ಸ್ತಂಭವಾಗಿದ್ದರು. ಅವರ ದೃಷ್ಟಿ ಮತ್ತು ನಾಯಕತ್ವವು ವಿವಿಎಸ್ನ ಬೆಳವಣಿಗೆಗೆ ಕಾರಣವಾಗಿತ್ತು. 25 ವರ್ಷಗಳ ಕಾಲ ಹೈಸ್ಕೂಲ್ ಶಿಕ್ಷಕರಾಗಿ, ಮುಖ್ಯೋಪಾಧ್ಯಾಯರಾಗಿ ಸೇವೆ ಸಲ್ಲಿಸಿದ್ದರು. ನಂತರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು.
ಇಂದು ಬೆಳಗ್ಗೆ 8 ಗಂಟೆಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಬೆಳಗ್ಗೆ 8 ರಿಂದ ಮಧ್ಯಾಹ್ನ 3 ಗಂಟೆ ವರೆಗೆ ಅಂತಿಮ ನಮನಕ್ಕೆ ಅವಕಾಶ ಕಲ್ಪಿಸಲಾಗಿದೆ. ಸಾಯಂಕಾಲ 4 ಗಂಟೆ ನಂತರ ಕೆಂಗೇರಿ ಚಿತಾಗಾರದಲ್ಲಿ ಅಂತ್ಯಕ್ರಿಯೆ ನಡೆಯಲಿದೆ.