– ರಷ್ಯಾದಿಂದ ತೈಲು ಖರೀದಿಸಿದ್ರೆ ಆರ್ಥಿಕ ನಿರ್ಬಂಧ ಹಾಕ್ತೀವಿ
– ಶಾಂತಿ ಮಾತುಕತೆಗೆ ಒತ್ತಾಯಿಸಿ ಅಂತ ಭಾರತ, ಚೀನಾಗೆ ಒತ್ತಡ
ಬ್ರಸೆಲ್ಸ್: ರಷ್ಯಾದೊಂದಿಗೆ (Russia) ವ್ಯವಹಾರ ಮುಂದುವರಿಸಿದರೆ ತೀವ್ರ ಆರ್ಥಿಕ ನಿರ್ಬಂಧಗಳನ್ನು ಎದುರಿಸಬೇಕಾಗುತ್ತದೆ ಎಂದು ಭಾರತ, ಚೀನಾ, ಬ್ರೆಜಿಲ್ ದೇಶಗಳಿಗೆ ನ್ಯಾಟೊ (Nato) ಪ್ರಧಾನ ಕಾರ್ಯದರ್ಶಿ ಮಾರ್ಕ್ ರುಟ್ಟೆ (Mark Rutte) ಎಚ್ಚರಿಕೆ ನೀಡಿದ್ದಾರೆ.
ಬುಧವಾರ ಅಮೆರಿಕದ (America) ಸೆನೆಟರ್‌ಗಳನ್ನು ಭೇಟಿಯಾದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ರುಟ್ಟೆ, ಭಾರತ, ಚೀನಾ, ಬ್ರೆಜಿಲ್ ನಾಯಕರು ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರನ್ನು ಶಾಂತಿ ಮಾತುಕತೆಗಳನ್ನು ಗಂಭೀರವಾಗಿ ಪರಿಗಣಿಸುವಂತೆ ಒತ್ತಡ ಹೇರಬೇಕೆಂದು ಒತ್ತಾಯಿಸಿದರು. ಇದನ್ನೂ ಓದಿ: ನೀರಿಗಾಗಿ ಹಾಹಾಕಾರ – ಇನ್ನು 5ವರ್ಷ ಮಾತ್ರ ಬಾಕಿ.. ಈ ನಗರದಲ್ಲಿ ನೀರೇ ಇರಲ್ಲ!
ಚೀನಾ ಹಾಗೂ ಬ್ರೆಜಿಲ್ ಅಧ್ಯಕ್ಷ, ಭಾರತದ ಪ್ರಧಾನಿ ಅವರು, ರಷ್ಯಾದೊಂದಿಗೆ ವ್ಯಾಪಾರ ಮುಂದುವರಿಸಿದ್ದಾರೆ. ತೈಲ ಮತ್ತು ಅನಿಲ ಖರೀದಿಸುವುದನ್ನು ಮುಂದುವರಿಸುವುದಾದರೆ, ಉಕ್ರೇನ್ ಜೊತೆ ಶಾಂತಿ ಮಾತುಕತೆಗೆ ಒತ್ತಡ ಹಾಕಿ. ಇಲ್ಲದಿದ್ದರೆ, ನಾವು 100 ಪ್ರತಿಶತ ದ್ವಿತೀಯ ನಿರ್ಬಂಧಗಳನ್ನು ವಿಧಿಸುತ್ತೇನೆ ಎಂದು ಎಚ್ಚರಿಸಿದ್ದಾರೆ.
ಶಾಂತಿ ಮಾತುಕತೆಗೆ ಬದ್ಧರಾಗುವಂತೆ ಪುಟಿನ್‌ಗೆ ನೇರವಾಗಿ ಒತ್ತಾಯಿಸುವಂತೆ ರುಟ್ಟೆ ಮೂರು ರಾಷ್ಟ್ರಗಳ ನಾಯಕರಿಗೆ ಕರೆ ನೀಡಿದ್ದಾರೆ. ವ್ಲಾಡಿಮಿರ್ ಪುಟಿನ್ ಅವರಿಗೆ ಫೋನ್ ಕರೆ ಮಾಡಿ ಶಾಂತಿ ಮಾತುಕತೆಗಳ ಬಗ್ಗೆ ಗಂಭೀರವಾಗಿ ಯೋಚಿಸಬೇಕು ತಿಳಿಸಿ. ಇಲ್ಲದಿದ್ದರೆ ಇದು ಬ್ರೆಜಿಲ್, ಭಾರತ ಮತ್ತು ಚೀನಾದ ಮೇಲೆ ಭಾರಿ ಪ್ರಮಾಣದಲ್ಲಿ ಪರಿಣಾಮ ಬೀರುತ್ತದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಉಕ್ರೇನ್ ಪ್ರಧಾನಿ ಡೆನಿಸ್ ಶ್ಮಿಹಾಲ್ ರಾಜೀನಾಮೆ
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಉಕ್ರೇನ್‌ಗೆ ಹೊಸ ಮಿಲಿಟರಿ ಬೆಂಬಲವನ್ನು ಘೋಷಿಸಿದ್ದಾರೆ. ಅಲ್ಲದೇ, ರಷ್ಯಾ ಮತ್ತು ಅದರ ವ್ಯಾಪಾರ ಪಾಲುದಾರರ ಮೇಲೆ ವ್ಯಾಪಕ ಸುಂಕಗಳನ್ನು ವಿಧಿಸುವುದಾಗಿ ಬೆದರಿಕೆ ಹಾಕಿದ್ದಾರೆ. ಅದರ ಬೆನ್ನಲ್ಲೇ ನ್ಯಾಟೋ ಅಧ್ಯಕ್ಷರು ಅದೇ ಮಾದರಿಯಲ್ಲಿ ನಿರ್ಬಂಧ ಹಾಕುವುದಾಗಿ ಬೆದರಿಸಿದ್ದಾರೆ.
ಡೊನಾಲ್ಡ್ ಟ್ರಂಪ್, ರಷ್ಯಾದ ರಫ್ತುಗಳ ಮೇಲೆ ಶೇ.100 ರಷ್ಟು ಸುಂಕ ವಿಧಿಸುವುದಾಗಿ ಎಚ್ಚರಿಸಿದ್ದಾರೆ. 50 ದಿನಗಳಲ್ಲಿ ಉಕ್ರೇನ್ ಜೊತೆ ಶಾಂತಿ ಒಪ್ಪಂದ ಮಾಡಿಕೊಳ್ಳದಿದ್ದರೆ ರಷ್ಯಾದ ತೈಲ ಖರೀದಿಸುವುದನ್ನು ಮುಂದುವರಿಸುವ ದೇಶಗಳ ಮೇಲೆ ದ್ವಿತೀಯ ನಿರ್ಬಂಧಗಳನ್ನು ವಿಧಿಸುವ ಬಗ್ಗೆ ತಿಳಿಸಿದ್ದಾರೆ. ಇದನ್ನೂ ಓದಿ: ಅಫ್ಘಾನಿಸ್ತಾನ ಅಭಿವೃದ್ಧಿಗೆ ನೆರವು ನೀಡಿ: ಎಸ್‌ಸಿಒ ಸಭೆಯಲ್ಲಿ ಜೈಶಂಕರ್ ಒತ್ತಾಯ