ನವರಾತ್ರಿ 2023: ಸಿದ್ಧಿ ಕರುಣಿಸಿ ಭಕ್ತರನ್ನು ಕಾಪಾಡುವ ಸಿದ್ಧಿದಾತ್ರಿ ದೇವಿ

Public TV
1 Min Read

ವರಾತ್ರಿಯ ಒಂಬತ್ತನೇ ದಿನ ಅಂದರೆ ಮಹಾನವಮಿಯ ದಿನ ದುರ್ಗಾ ದೇವಿಯ ಒಂಬತ್ತನೇ ರೂಪವಾದ ದೇವಿ ಸಿದ್ಧಿದಾತ್ರಿಗೆ ಸಮರ್ಪಿತವಾಗಿದೆ. ಸಿದ್ಧಿದಾತ್ರಿ ದೇವಿಯು ತನ್ನ ಎರಡು ಕೈಗಳಲ್ಲಿ ಗದಾ ಮತ್ತು ಚಕ್ರವನ್ನು ಹೊಂದಿದ್ದಾಳೆ. ಇನ್ನೆರಡು ಕೈಗಳಲ್ಲಿ ಕಮಲ ಮತ್ತು ಶಂಕು ಹಿಡಿದಿದ್ದಾಳೆ. ಈ ದಿನ ಆಯುಧ ಪೂಜೆ ಆಗಿರುವುದರಿಂದ ಯಂತ್ರೋಪಕರಣ, ವಾಹನಗಳಿಗೆ ಪೂಜೆ ಸಲ್ಲಿಸಲಾಗುತ್ತದೆ.

ಸಿದ್ಧಿದಾತ್ರಿಯ ಮಹತ್ವ:
ಸಿದ್ಧಿದಾತ್ರಿ ದೇವಿಯು ಎಲ್ಲಾ ಸಿದ್ಧಿಗಳ ಮೂಲ. ಆಕೆ ಎಲ್ಲಾ ಎಂಟು ಅಷ್ಟಸಿದ್ಧಿಗಳನ್ನು ಹೊಂದಿದ್ದಾಳೆ. ದೇವಿಯ ಆರಾಧನೆಯು ಸಹಸ್ರಾರ ಚಕ್ರವನ್ನು ಪ್ರಚೋದಿಸುತ್ತದೆ. ಇದನ್ನು ಕಿರೀಟ ಚಕ್ರ ಎಂದೂ ಕರೆಯುತ್ತಾರೆ. ಹಿಂದೂ ಶಾಸನಗಳ ಪ್ರಕಾರ, ಅವಳು ತನ್ನ ಭಕ್ತರಿಗೆ ಅದೃಷ್ಟವನ್ನು ಆಶೀರ್ವದಿಸುತ್ತಾಳೆ ಮತ್ತು ಅವರಿಗೆ ಮೋಕ್ಷವನ್ನು ಒದಗಿಸುತ್ತಾಳೆ.

ಸಿದ್ಧಿ ಎಂದರೆ ಅಲೌಕಿಕ ಶಕ್ತಿ ಅಥವಾ ಸೃಷ್ಟಿ, ಅಸ್ತಿತ್ವದ ಅಂತಿಮ ಮೂಲದ ಅರ್ಥವನ್ನು ಸಾಧಿಸುವ ಸಾಮರ್ಥ್ಯ. ದಾತ್ರಿ ಎಂದರೆ ಕೊಡುವುದು. ತಾಯಿಯನ್ನು ಪೂಜೆ ಮಾಡಿದರೆ ನಿಜವಾದ ಅಸ್ತಿತ್ವವನ್ನು ಅರಿತುಕೊಳ್ಳುವ ಶಕ್ತಿ ಪ್ರಾಪ್ತಿಯಾಗುತ್ತದೆ. ತಾಯಿಯ ಆರಾಧನೆಯು ನಮ್ಮ ಮನಸ್ಸಿನಲ್ಲಿರುವ ಅಜ್ಞಾನವನ್ನು ತೆಗೆದುಹಾಕಲು ಸಹಾಯ ಮಾಡುತ್ತದೆ ಎಂದು ಹೇಳಲಾಗುತ್ತದೆ. ಪುರಾಣ ಗ್ರಂಥಗಳ ಪ್ರಕಾರ ಜಗತ್ತಿನ ಎಂಟು ಸಿದ್ಧಿಗಳೆಂದರೆ ಅನಿಮಾ, ಮಹಿಮಾ, ಗರಿಮಾ, ಲಘಿಮಾ, ಪ್ರಾಪ್ತಿ, ಪ್ರಕ್ಯಾಮ್ಯ, ಇನ್ಶಿತ್ವ, ವಶಿತ್ವ. ನವದುರ್ಗೆಗಳಲ್ಲಿ ತಾಯಿ ಸಿದ್ಧಿದಾತ್ರಿಯು ಈ ಎಲ್ಲ ಅದ್ಭುತ ಅಂಶಗಳನ್ನು ಹೊಂದಿದ್ದಾಳೆ.

ಪುರಾಣದ ಕಥೆಗಳ ಪ್ರಕಾರ ತಾಯಿ ಸಿದ್ಧಿದಾತ್ರಿಯಿಂದ ಆಶೀರ್ವಾದ ಪಡೆದ ಶಿವನು ಆಕೆಯಿಂದ ಎಂಟು ಸಿದ್ಧಿಗಳನ್ನು ಪಡೆದ ಎಂದು ಹೇಳಲಾಗುತ್ತದೆ. ಬ್ರಹ್ಮಾಂಡದ ಸೃಷ್ಟಿಯ ವೇಳೆ ಶಿವನು ಪರಾಕಾಷ್ಟೆಯನ್ನು ಆರಾಧಿಸಿದನು. ಎಷ್ಟೇ ಆರಾಧಿಸದರೂ ಶಕ್ತಿ ದೇವತೆ ಪ್ರತ್ಯಕ್ಷಳಾಗಲಿಲ್ಲ. ನಂತರ ಆಕೆಯು ಶಿವನ ಎಡ ಭಾಗದ ಅರ್ಧದಲ್ಲಿ ಕಾಣಿಸಿಕೊಂಡಳು. ಅಂದಿನಿಂದ ಪರಶಿವನು ಅರ್ಧನಾರೀಶ್ವರ ಎಂಬ ಇನ್ನೊಂದು ಹೆಸರಿನಿಂದ ಗುರುತಿಸಿಕೊಂಡನು ಎಂದು ಹೇಳಲಾಗುತ್ತದೆ.

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್