‘ಜವಾನ್’ ಚಿತ್ರದಲ್ಲಿನ ನಯನತಾರಾ ಪೋಸ್ಟರ್ ರಿಲೀಸ್

Public TV
1 Min Read

ತ್ತೀಚೆಗಷ್ಟೇ ಬಿಡುಗಡೆಯಾದ ಶಾರುಖ್ ಖಾನ್ (Shah Rukh Khan) ಅಭಿನಯದ ‘ಜವಾನ್’ (Jawan) ಚಿತ್ರದ ಪ್ರಿವ್ಯೂ, ಪ್ರೇಕ್ಷಕರ ವಲಯದಲ್ಲಿ ಸಾಕಷ್ಟು ನಿರೀಕ್ಷೆ ಮತ್ತು ಕುತೂಹಲವನ್ನು ಹುಟ್ಟುಹಾಕಿದೆ. ಈಗ ಚಿತ್ರದಲ್ಲಿನ ನಯನತಾರಾ ಅವರ ಪಾತ್ರದ ಪೋಸ್ಟರ್ (Poster) ಅನ್ನು ನಾಯಕ ನಟ ಶಾರುಖ್ ಖಾನ್ ಬಿಡುಗಡೆ ಮಾಡಿದ್ದು, ಈ ಪೋಸ್ಟರ್ ಇಂಟರ್ನೆಟ್ ನಲ್ಲಿ ಸಾಕಷ್ಟು ವೈರಲ್ ಆಗಿದೆ.

ಪ್ರಿವ್ಯೂನಲ್ಲಿ ನಯನತಾರಾ (Nayantara) ಅವರನ್ನು ಸಾಹಸ ದೃಶ್ಯಗಳಲ್ಲಿ ಪ್ರೇಕ್ಷಕರು ನೋಡಿ ಅವಕ್ಕಾಗಿದ್ದರು. ಆಕೆಯನ್ನು ಇನ್ನಷ್ಟು ನೋಡಬಯಸಿದ್ದರು. ಈಗ ನಯನತಾರಾ ಪೋಸ್ಟರ್ ಗೆ ಸಾಕಷ್ಟು ಮೆಚ್ಚುಗೆ ವ್ಯಕ್ತವಾಗಿದೆ. ನಯನತಾರಾ ಅವರ ಪಾತ್ರವನ್ನು ‘ಬಿರುಗಾಳಿಗೂ ಮುಂಚೆ ಬರುವ ಗುಡುಗು’ ಎಂದು ಶಾರುಖ್ ಖಾನ್ ವರ್ಣಿಸಿದ್ದು, ಆಕೆಯ ಪಾತ್ರದ ಬಗ್ಗೆ ಇನ್ನಷ್ಟು ಕುತೂಹಲ ಹೆಚ್ಚಾಗಿದೆ. ಇದನ್ನೂ ಓದಿ:ಟೊಮ್ಯಾಟೋ ವಿಚಾರದಲ್ಲಿ ಕ್ಷಮೆ ಕೇಳಿದ ನಟ ಸುನೀಲ್ ಶೆಟ್ಟಿ

ಇದೇ ಮೊದಲ ಬಾರಿಗೆ ಶಾರುಖ್ ಖಾನ್ ಮತ್ತು ನಯನತಾರಾ, ಈ ಚಿತ್ರದಲ್ಲಿ ಒಟ್ಟಾಗಿ ನಟಿಸಿದ್ದಾರೆ. ‘ಜವಾನ್’ನಲ್ಲಿ ನಯನತಾರಾ, ಪೊಲೀಸ್ ಅಧಿಕಾರಿಯಾಗಿ ಕಾಣಿಸಿಕೊಂಡಿದ್ದು, ಅವರ ಪಾತ್ರ ಇಡೀ ಚಿತ್ರದ ಹೈಲೈಟ್ ಆಗಲಿದೆ ಎಂದು ಹೇಳಲಾಗುತ್ತಿದೆ. ಚಿತ್ರದಲ್ಲಿ ಸಾಕಷ್ಟು ಸಾಹಸಮಯ ದೃಶ್ಯಗಳಲ್ಲಿ ನಯನತಾರಾ ಕಾಣಿಸಿಕೊಂಡಿದ್ದಾರೆ.

 

‘ಜವಾನ್’ ಚಿತ್ರವನ್ನು ರೆಡ್ ಚಿಲ್ಲೀಸ್ ಎಂಟರ್ಟೈನ್ಮೆಂಟ್ ಅಡಿಯಲ್ಲಿ ಗೌರಿ ಖಾನ್ ನಿರ್ಮಿಸಿದ್ದು, ದಕ್ಷಿಣ ಭಾರತದ ಜನಪ್ರಿಯ ನಿರ್ದೇಶಕರಾದ ಅಟ್ಲಿ ನಿರ್ದೇಶನ ಮಾಡಿದ್ದಾರೆ. ಗೌರವ್ ವರ್ಮ ಈ ಚಿತ್ರದ ಸಹನಿರ್ಮಾಪಕರು. ಸೆಪ್ಟೆಂಬರ್ 7ರಂದು ಈ ಚಿತ್ರವು ಜಗತ್ತಿನಾದ್ಯಂತ ಹಿಂದಿ, ತಮಿಳು ಮತ್ತು ತೆಲುಗಿನಲ್ಲಿ ಏಕಕಾಲಕ್ಕೆ ಬಿಡುಗಡೆಯಾಗುತ್ತಿದೆ.

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್