ಮಹಿಳೆಗೆ ಕೆಲಸ ಕೊಡಿಸೋದಾಗಿ 3 ಲಕ್ಷ ರೂ. ವಸೂಲಿ ಆರೋಪ – ಕಾಂಗ್ರೆಸ್‌ನಿಂದ ನಾಜಿಮಾ, ತಿಮ್ಮರಾಜು ಉಚ್ಚಾಟನೆ

1 Min Read

ಶಿವಮೊಗ್ಗ: ಜಿಲ್ಲಾ ಕಾಂಗ್ರೆಸ್ (Congress) ಕಾರ್ಯದರ್ಶಿ ನಾಜಿಮಾ ಹಾಗೂ ವೈ. ತಿಮ್ಮರಾಜು ಅವರು ಮಹಿಳೆಯೊಬ್ಬರಿಗೆ ಕೆಲಸ ಕೊಡಿಸುವುದಾಗಿ 3 ಲಕ್ಷ ರೂ. ಹಣ ಪಡೆದಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಇದರ ಬೆನ್ನಲ್ಲೇ ಇಬ್ಬರನ್ನೂ ಪಕ್ಷದಿಂದ 6 ವರ್ಷಗಳ ಕಾಲ ಉಚ್ಚಾಟಿಸಲಾಗಿದೆ.

ಇಬ್ಬರು ಸೇರಿ ಅಸ್ಮಾ ಬಾನು ಎಂಬುವವರಿಗೆ ಗುತ್ತಿಗೆ ಆಧಾರದಲ್ಲಿ ಕೆಲಸ ಕೊಡಿಸುವುದಾಗಿ 3 ಲಕ್ಷ ಹಣ ರೂ. ಪಡೆದಿದ್ದರು. ಅಲ್ಲದೇ ಪಕ್ಷದ ಹೆಸರು, ಜಿಲ್ಲಾ ಉಸ್ತುವಾರಿ ಸಚಿವರ ಹೆಸರು ಹಾಗೂ ವಿಧಾನ ಪರಿಷತ್‌ನ ಸದಸ್ಯರ ಹೆಸರನ್ನು ದುರುಪಯೋಗ ಪಡೆಸಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಇವರ ವಿರುದ್ಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಶಿಕ್ಷಕನಿಂದ 1 ಲಕ್ಷ ರೂ. ಲಂಚ ಪಡೆಯುವಾಗ ಭದ್ರಾವತಿ ಬಿಇಒ ʻಲೋಕಾʼ ಬಲೆಗೆ

ಇದರಿಂದಾಗಿ ಪಕ್ಷಕ್ಕೆ ಮುಜುಗರವಾಗಿದೆ ಎಂದು ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶ್ವೇತಾ ಬಂಡಿ, ನಾಜಿಮಾ ಅವರನ್ನು ಪಕ್ಷದಿಂದ ಉಚ್ಚಾಟಿಸುವಂತೆ ಜಿಲ್ಲಾಧ್ಯಕ್ಷರಿಗೆ ಪತ್ರ ಬರೆದಿದ್ದರು. ನಾಜಿಮಾ ಹಾಗೂ ವೈ. ತಿಮ್ಮರಾಜು ಅವರನ್ನು ಕಾಂಗ್ರೆಸ್ ಪಕ್ಷದಿಂದ 6 ವರ್ಷಗಳ ಕಾಲ ಉಚ್ಚಾಟನೆ ಮಾಡಿ ಜಿಲ್ಲಾ ಅಧ್ಯಕ್ಷ ಆರ್. ಪ್ರಸನ್ನಕುಮಾರ್ ಆದೇಶ ಹೊರಡಿಸಿದ್ದಾರೆ. ಇದನ್ನೂ ಓದಿ: ನ್ಯೂಯಾರ್ಕ್‌ನಲ್ಲಿ ಗುಂಡಿನ ದಾಳಿ – ಭಾರತೀಯ ಮೂಲದ ವಿದ್ಯಾರ್ಥಿನಿ ದುರ್ಮರಣ

Share This Article