ಎನ್‌ಸಿಪಿ ಅಧ್ಯಕ್ಷ ಶರದ್ ಪವಾರ್ ಆಸ್ಪತ್ರೆಗೆ ದಾಖಲು

1 Min Read

ಮುಂಬೈ: ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ (NCP) ಅಧ್ಯಕ್ಷ ಮತ್ತು ರಾಜ್ಯಸಭಾ ಸಂಸದ ಶರದ್ ಪವಾರ್ (Sharad Pawar) ಅವರನ್ನು ನಿಯಮಿತ ಆರೋಗ್ಯ ತಪಾಸಣೆಗಾಗಿ ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

85 ವರ್ಷದ ನಾಯಕಯನ್ನು ಎರಡು ದಿನಗಳ ಹಿಂದೆ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರು ಆರೋಗ್ಯ ತಪಾಸಣೆಗಾಗಿ ಆಸ್ಪತ್ರೆಯಲ್ಲಿದ್ದಾರೆ, ಗಂಭೀರವಾದದ್ದೇನೂ ಇಲ್ಲ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ರಾಜಕಾರಣಿಗಳ ಮಕ್ಕಳು ರಾಜಕಾರಣಿಯಾದರೆ, ಜಡ್ಜ್‌ ಮಕ್ಕಳು ವಕೀಲರಾಗುವುದರಲ್ಲಿ ತಪ್ಪೇನಿಲ್ಲ: ಕೇಜ್ರಿವಾಲ್‌ ವಿರುದ್ಧ ಜಡ್ಜ್‌ ಗರಂ

ಪವಾರ್ ಇತ್ತೀಚೆಗೆ ವ್ಹೀಲ್‌ಚೇರ್‌ನಲ್ಲಿ ಕುಳಿತು ರಾಜ್ಯಸಭಾ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು. ಫೆಬ್ರವರಿ ಆರಂಭದಲ್ಲಿ, ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಎದೆಯ ಸೋಂಕು ಮತ್ತು ನಿರ್ಜಲೀಕರಣದಿಂದಾಗಿ ಪುಣೆಯಲ್ಲಿ ಎರಡು ಬಾರಿ ಆಸ್ಪತ್ರೆಗೆ ದಾಖಲಾಗಿದ್ದರು.

Share This Article