ನಮ್ಮ ಮೆಟ್ರೋದಲ್ಲಿ ಯುವತಿಯ ಖಾಸಗಿ ಅಂಗ ಸ್ಪರ್ಶಿಸಿ ಕಿರುಕುಳ – ಕಾಮುಕನ ವಿರುದ್ಧ NCR ದಾಖಲು

1 Min Read

ಬೆಂಗಳೂರು: ನಗರದಲ್ಲಿ ಮಹಿಳೆಯರ ಸುರಕ್ಷತೆ ಬಗ್ಗೆ ಮತ್ತೆ ಮತ್ತೆ ಪ್ರಶ್ನೆ ಮೂಡುವಂತಹ ಘಟನೆ ಮೆಜಸ್ಟಿಕ್‌ನ ನಮ್ಮ ಮೆಟ್ರೋ ನಿಲ್ದಾಣದಲ್ಲಿ ನಡೆದಿದೆ. ಕಾಮುಕನೊಬ್ಬ ಯುವತಿಯ ಜೊತೆ ಅಸಭ್ಯವಾಗಿ ವರ್ತಿಸಿ, ಖಾಸಗಿ ಅಂಗಾಗ ಮುಟ್ಟಿ ಕಿರುಕುಳ ನೀಡಿದ ಆರೋಪ ಕೇಳಿಬಂದಿದೆ. ಈ ಸಂಬಂಧ ಉಪ್ಪಾರ್ ಪೇಟೆ ಠಾಣೆಯಲ್ಲಿ ಎನ್‌ಸಿಆರ್ ದಾಖಲಾಗಿದೆ.

ಸಂತ್ರಸ್ತೆ ಯುವತಿ ಮೆಟ್ರೋದಲ್ಲಿ ವಿಧಾನಸೌಧದಿಂದ ಸಂಚರಿಸುತ್ತಿದ್ದ ವೇಳೆ ಅಲ್ಲಿಯೇ ಇದ್ದ ಸುಮಾರು ವ್ಯಕ್ತಿಯೊಬ್ಬ ಯುವತಿಯ ಖಾಸಗಿ ಅಂಗ ಸ್ಪರ್ಶಿಸಿದ್ದಾನೆ. ಇಷ್ಟೇ ಅಲ್ಲದೇ ಏನೂ ತಿಳಿದೇ ಇಲ್ಲ ಎನ್ನುವಂತೆ ಆಕೆಯ ಮುಂದೆಯೇ ನಿಂತು ಕೆಟ್ಟದಾಗಿ ನಗುವ ಕೆಲಸ ಮಾಡಿದ್ದಾನೆ ಎನ್ನಲಾಗಿದೆ. ಇದನ್ನೂ ಓದಿ: ಬಿಕ್ಲು ಶಿವ ಕೊಲೆ ಕೇಸ್‌ – ಬಂಧನ ಭೀತಿಯಲ್ಲಿದ್ದ ಬೈರತಿ ಬಸವರಾಜ್‌ಗೆ ತಾತ್ಕಾಲಿಕ ರಿಲೀಫ್‌

ರೈಲು ಕೆಂಪೇಗೌಡ ನಿಲ್ದಾಣಕ್ಕೆ ತಲುಪಿದಾಗ ಯುವತಿಯು ಮುತ್ತಪ್ಪನ ಅಸಭ್ಯ ವರ್ತನೆ ಬಗ್ಗೆ ನಿಲ್ದಾಣದ ಭದ್ರತಾ ಸಿಬ್ಬಂದಿಗೆ ತಿಳಿಸಿದ್ದಾರೆ. ಮೆಟ್ರೋ ಭದ್ರತಾ ಸಿಬ್ಬಂದಿ ಕೂಡಲೇ ಆರೋಪಿಯನ್ನು ವಶಕ್ಕೆ ಪಡೆದು ಉಪ್ಪಾರಪೇಟೆ ಪೊಲೀಸ್ ಠಾಣೆಗೆ ಒಪ್ಪಿಸಿದ್ದಾರೆ. ನಂತ್ರ ಯುವತಿ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಅಸಭ್ಯ ವರ್ತನೆ ಅಡಿಯಲ್ಲಿ ಪೊಲೀಸರು ಎನ್‌ಸಿಆರ್ ದಾಖಲಿಸಿಕೊಂಡಿದ್ದಾರೆ.

ಯುವತಿ ಕಾಲಿಗೆ ಬಿದ್ದು ಕ್ಷಮೆ ಕೇಳಿದ ಹಿನ್ನೆಲೆ ಮತ್ತೆ ದುರ್ವರ್ತನೆ ತೋರದಂತೆ ಮುತ್ತಪ್ಪನಿಗೆ ಎಚ್ಚರಿಕೆ ನೀಡಿ ಠಾಣೆಯಿಂದ ಬಿಟ್ಟು ಕಳುಹಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಇದನ್ನೂ ಓದಿ: ಬೆಂಗಳೂರು, ಮಂಗಳೂರಲ್ಲಿ ಕ್ರಿಸ್ಮಸ್ ಆಚರಿಸಿದ ಗ್ರೇಸ್ ಮಿನಿಸ್ಟ್ರಿ; ಬಡಮಕ್ಕಳ ಶಿಕ್ಷಣಕ್ಕೆ 15 ಲಕ್ಷ ರೂ. ದಾನ

Share This Article