ಜವಳಿ ಇಲಾಖೆಯಲ್ಲಿ 12 ಲಕ್ಷ ಉದ್ಯೋಗ ಸೃಷ್ಟಿ: ಶಂಕರ್ ಪಾಟೀಲ್ ಮುನೇನಕೊಪ್ಪ

Public TV
2 Min Read

ಬಳ್ಳಾರಿ: ಜವಳಿ ಇಲಾಖೆಯಲ್ಲಿ 12 ಲಕ್ಷ ಜನರಿಗೆ ಉದ್ಯೋಗ ಸೃಷ್ಟಿಸುವ ಕೆಲಸವನ್ನು ಮಾಡಲಾಗುತ್ತಿದೆ ಎಂದು ಕೈಮಗ್ಗ ಮತ್ತು ಜವಳಿ, ಸಕ್ಕರೆ ಮತ್ತು ಕಬ್ಬು ಅಭಿವೃದ್ಧಿ ಸಚಿವ ಶಂಕರ್ ಬಿ.ಪಾಟೀಲ್ ಮುನೇನಕೊಪ್ಪ ಹೇಳಿದ್ದಾರೆ.

ಬಳ್ಳಾರಿ ಜಿ.ಪಂ ನಜೀರ್ ಸಾಬ್ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಬಳ್ಳಾರಿ ವಿಭಾಗ(ಉತ್ತರ ವಲಯ) ಮಟ್ಟದ ಕೈಮಗ್ಗ ಮತ್ತು ಜವಳಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಮಂತ್ರಿ ನರೇಂದ್ರ ಮೋದಿ ನ್ಯಾಷನಲ್ ಹ್ಯಾಂಡಲೂಮ್ ಡೆವಲಪ್‍ಮೆಂಟ್ ಪ್ರೋಗ್ರಾಂ ಎಂಬ ಹೊಸ ಯೋಜನೆಯನ್ನು ಜಾರಿಗೆ ತಂದಿದ್ದಾರೆ. ಇದರಿಂದ ನಮ್ಮ ರಾಜ್ಯಕ್ಕೆ ಉಪಯೋಗವಾಗುವ ನಿಟ್ಟಿನಲ್ಲಿ ಕ್ರಮವಹಿಸಲಾಗುವುದು ಎಂದು ತಿಳಿಸಿದರು. ಇದನ್ನೂ ಓದಿ: ಆನ್‍ಲೈನ್ ಪಾಠ ಕೇಳಿ ಕುಗ್ಗಿದ್ದ ಮಕ್ಕಳಿಗೆ ವಿಶೇಷ ತರಬೇತಿ ನೀಡಿದ ಸುರಾನ ವಿದ್ಯಾಲಯ

ರಾಜ್ಯದಲ್ಲಿ ಕೈಮಗ್ಗ ಮತ್ತು ಜವಳಿ ಇಲಾಖೆಯಿಂದ 132 ಕೋಟಿ ರೂ. ಸಬ್ಸಿಡಿ ಹಣ ಅರ್ಹ ಫಲಾನುಭವಿಗಳಿಗೆ ನೀಡಿದ್ದು, ಪರಿಶಿಷ್ಟ ವರ್ಗಗಳ ಹೊರತುಪಡಿಸಿ 2020-21 ನೇ ಸಾಲಿನಲ್ಲಿ 121 ಕೋಟಿ ಸಾಲಮನ್ನಾ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಮೆಗಾ ಟೆಕ್ಸ್ ಟೈಲ್ ಪಾರ್ಕ್ ಆರಂಭಕ್ಕೆ ಚಿಂತನೆ ನಡೆದಿದೆ ಎಂದು ಹೇಳಿದರು.

ಜವಳಿ ಇಲಾಖೆಯು ನೇಕಾರ ಸಮುದಾಯದ ಸರ್ವತೋಮುಖ ಬೆಳವಣಿಗೆಗೆ ಶ್ರಮಿಸುತ್ತಿದೆ. ನ್ಯಾಷನಲ್ ಹ್ಯಾಂಡಲೂಮ್ ಡೆವಲಪ್‍ಮೆಂಟ್ ಪ್ರೋಗ್ರಾಂ ಎಂಬ ಮಹತ್ವಾಕಾಂಕ್ಷಿ ಯೋಜನೆ ಕೇಂದ್ರ ಸರ್ಕಾರ ಜಾರಿಗೆ ತಂದಿದ್ದು, ಈ ಯೋಜನೆಯ ಮೂಲಕ ಕೈಮಗ್ಗ ಮತ್ತು ಜವಳಿ ಇಲಾಖೆಗೆ 10 ಸಾವಿರ ಕೋಟಿ ರೂ. ಅನುದಾನ ಬಿಡುಗಡೆ ಮಾಡಲಿದೆ. ಇದರಿಂದ ಇಲಾಖೆಯ ಪುನಶ್ಚೇತನವಾಗಲಿದೆ ಎಂದರು. ಇದನ್ನೂ ಓದಿ: ಮುತ್ಯಾಲಮಡುವು ಗಡಿಭಾಗದಲ್ಲಿ ಚೆಕ್ ಡ್ಯಾಂ ನಿರ್ಮಾಣಕ್ಕೆ ಗುದ್ದಲಿ ಪೂಜೆ

ಜವಳಿ ಇಲಾಖೆ ಶೇ.90 ರಷ್ಟು ಸಬ್ಸಿಡಿ ನೀಡುವ ಮೂಲಕ ನೇಕಾರ ಸಮುದಾಯದ ನೆರವಿಗೆ ನಿಲ್ಲುವ ಕೆಲಸ ಮಾಡಲಾಗುತ್ತಿದೆ. ಸಮಾಜದ ಎಲ್ಲರಿಗೂ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಸಬ್ಸಿಡಿ ಹೆಚ್ಚಿಸಲಾಗಿದೆ. ಆಯುಷ್ಮಾನ ಯೋಜನೆಯ ಮುಖಾಂತರ ಬಿಪಿಎಲ್ ಪಡಿತರ ಚೀಟಿ ಹೊಂದಿದವರೆಗೆ ಉಚಿತ ಆರೋಗ್ಯ ಸೇವೆ ನಿಡಲಾಗುತ್ತದೆ. ಇದರ ಕುರಿತು ಹಲವರಿಗೆ ಮಾಹಿತಿಯ ಕೊರತೆಯಿದೆ. ಇದರ ಕುರಿತು ಅರಿವು ಮೂಡಿಸುವ ಕೆಲಸ ಮಾಡಿ ಎಂದು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.

Share This Article
Leave a Comment

Leave a Reply

Your email address will not be published. Required fields are marked *