ನೇಹಾ ಕೊಲೆ ಆರೋಪಿಗೆ ಘೋರ ಶಿಕ್ಷೆ ಕೊಡಿಸುತ್ತೇವೆ: ಸಿದ್ದರಾಮಯ್ಯ

Public TV
1 Min Read

– ಬಿಜೆಪಿ ನಾಯಕರ ವಿರುದ್ಧ ಸಿಎಂ ಕಿಡಿ

ಬೀದರ್: ವಿದ್ಯಾರ್ಥಿನಿ ನೇಹಾ ಹಿರೇಮಠ (Neha Hiremath) ಕೊಲೆ ಪ್ರಕರಣದ ಆರೋಪಿಗೆ ಘೋರ ಶಿಕ್ಷೆಯನ್ನು ಕೊಡಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಹೇಳಿದ್ದಾರೆ.

ನೇಹಾ ಕುಟುಂಬವನ್ನು ಭೇಟಿಗೂ ಮುನ್ನ ಬೀದರ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೇಹಾ ಹತ್ಯೆಯನ್ನು ನಾನು ಈಗಾಗಲೇ ಖಂಡಿಸಿದ್ದೇನೆ. ಪ್ರಕರಣವನ್ನು ಈಗಾಗಲೇ ಸಿಐಡಿಗೆ ಕೊಟ್ಟಿದ್ದೇವೆ. ಇದಕ್ಕಾಗಿ ವಿಶೇಷ ನ್ಯಾಯಾಲಯ ಮಾಡಬೇಕು. ಕೊಲೆ ಆರೋಪಿಗೆ ಕಠಿಣವಾದ ಶಿಕ್ಷೆ ಕೊಡಿಸಬೇಕು. ನಾನು ಈಗಾಗಲೇ ಪಬ್ಲಿಕ್ ಪ್ಯಾಸಿಕ್ಯೂಟರ್ ಜೊತೆ ಮಾತನಾಡಿದ್ದೇನೆ. ಆರೋಪಿಗೆ ಘೋರ ಶಿಕ್ಷೆ ಕೊಡಿಸುತ್ತೇವೆ ಎಂದು ಭರವಸೆ ನೀಡಿದರು.

ನೇಹಾ ಹತ್ಯೆ ಸಿಬಿಐಗೆ ಕೊಡುವ ವಿಚಾರದ ಕುರಿತು ಪ್ರತಿಕ್ರಿಯಿಸಿ, ಬಿಜೆಪಿಯವರು ಯಾವುದಾದರೂ ಪ್ರಕರಣವನ್ನ ಸಿಬಿಐಗೆ ಕೊಟ್ಟಿದ್ದಾರಾ..? ಅಧಿಕಾರದಲ್ಲಿ ಇದ್ದಾಗ ಒಂದು ಪ್ರಕರಣ ಸಿಬಿಐಗೆ ಕೊಟ್ಟಿದ್ದಾರಾ..? ನಾನು ಅಧಿಕಾರದಲ್ಲಿರುವಾಗ ಅನೇಕ ಪ್ರಕರಣಗಳನ್ನು ಸಿಬಿಐಗೆ ಕೊಟ್ಟಿದ್ದೇನೆ. ಇದರಲ್ಲಿ ಬಿಜೆಪಿ ರಾಜಕೀಯ ಮಾಡಬಾರದು. ಇದನ್ನ ಬಿಜೆಪಿ ರಾಕೀಯವಾಗಿ ಬಳಸುವುದು ಸರಿಯಲ್ಲಾ ಎಂದು ಬಿಜೆಪಿ ನಾಯಕರ ವಿರುದ್ಧ ಸಿಎಂ ಕಿಡಿಕಾರಿದರು. ಇದನ್ನೂ ಓದಿ: ನೇಹಾ ಕೊಲೆ ಆರೋಪಿ ಫಯಾಜ್‍ನನ್ನು ವಶಕ್ಕೆ ಪಡೆದು ಅಜ್ಞಾತ ಸ್ಥಳಕ್ಕೆ ಕರೆದೊಯ್ದ ಸಿಐಡಿ

ಕಾಂಗ್ರೆಸ್ ಜನರ ಆಸ್ತಿ ಕಿತ್ತುಕೊಳ್ಳುತ್ತಿದೆ ಎಂಬ ಮೋದಿ ಹೇಳಿಕೆ ಬಗ್ಗೆ ಮಾತನಾಡಿ, 15 ಲಕ್ಷ ಅಕೌಂಟ್‍ಗೆ ಹಾಕಿದ್ದಾರಾ.? 2 ಕೋಟಿ ಉದ್ಯೋಗ ಕೊಟ್ರಾ? ರೈತರ ಆದಾಯ ದುಪ್ಪಟ್ಟು ಮಾಡಿದ್ರಾ..? ಡಾಲರ್ ಬೆಲೆ, ಅಗತ್ಯ ವಸ್ತುಗಳ ಬೆಲೆ ಕಡಿಮೆ ಮಾಡಿದ್ರಾ ಎಂದು ಸಿಎಂ ಲೇವಡಿ ಮಾಡಿದರು.

Share This Article