ನೇಹಾ ಹತ್ಯೆ ಕೇಸ್ – ಆರೋಪಿ ಫಯಾಜ್ ಜಾಮೀನು ಅರ್ಜಿ ವಜಾ

Public TV
1 Min Read

ಹುಬ್ಬಳ್ಳಿ: ನೇಹಾ ಹಿರೇಮಠ (Neha Hiremath) ಹತ್ಯೆ ಆರೋಪಿ ಫಯಾಜ್ (Accused Fayaz) ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಹುಬ್ಬಳ್ಳಿ (Hubballi) ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ವಜಾಗೊಳಿಸಿದೆ.

ಮಹಿಳಾ ನ್ಯಾಯಾಧೀಶರಾದ ಪಲ್ಲವಿ ಬಿಆರ್ ಮಹತ್ವದ ಆದೇಶ ನೀಡಿದ್ದಾರೆ. ಕಳೆದ ಒಂದು ವರ್ಷ ನಾಲ್ಕು ತಿಂಗಳಿಂದಲೂ ಧಾರವಾಡ (Dharwad) ಕೇಂದ್ರ ಕಾರಾಗೃಹದಲ್ಲಿರುವ ಆರೋಪಿ ಫಯಾಜ್ ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರಾಗಿದ್ದ. ಇದನ್ನೂ ಓದಿ: ಧರ್ಮಸ್ಥಳದ ಅರಣ್ಯದಲ್ಲಿ ಮತ್ತೊಂದು ಅಸ್ಥಿಪಂಜರ ಪತ್ತೆ

ಆರೋಪಿ ಪರವಾಗಿ ಬೆಳಗಾವಿಯ (Belagavi) ಜೆಡ್ ಎಂ ಹತ್ತರಕಿ ವಕೀಲರು ಜಾಮೀನು ಅರ್ಜಿ ಸಲ್ಲಿಸಿದ್ದರು. ಈ ಜಾಮೀನು ಅರ್ಜಿಗೆ ಸಿಐಡಿ ಪರ ವಕೀಲರಾದ ಎಸ್‌ಪಿಪಿ ಮಹೇಶ್ ವೈದ್ಯ, ನೇಹಾ ಕುಟುಂಬದ ಪರ ವಕೀಲ ರಾಘವೇಂದ್ರ ಮುತ್ತಗಿಕರ ಆಕ್ಷೇಪಣೆ ಅರ್ಜಿ ಸಲ್ಲಿಸಿದ್ದರು. ಇದನ್ನೂ ಓದಿ: ಗ್ರಾ.ಪಂ ಸದಸ್ಯನ ಕಿಡ್ನ್ಯಾಪ್‌ಗೆ ಯತ್ನಿಸಿ ವಿಫಲ – ಚಾಕು ಇರಿದು ದುಷ್ಕರ್ಮಿಗಳು ಎಸ್ಕೇಪ್

ಆರೋಪಿ ಫಯಾಜ್, ಜಾಮೀನಿಗಾಗಿ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದ. ಅರ್ಜಿಯಲ್ಲಿ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್‌ಗೆ ಹೇಗೆ ಜಾಮೀನು ನೀಡಲಾಗಿದೆಯೋ ಹಾಗೇ ನನಗೂ ನೀಡಿ ಎಂದು ಬೇಡಿಕೆ ಇಟ್ಟಿದ್ದ. ಇದೀಗ ಈ ಅರ್ಜಿ ವಿಚಾರಣೆ ಮಾಡಿದ ನ್ಯಾಯಾಲಯವು ಜಾಮೀನು ಅರ್ಜಿಯನ್ನು ವಜಾಗೊಳಿಸಿದ್ದು, ಆರೋಪಿ ಫಯಾಜ್‌ಗೆ ಇದೇ ತಿಂಗಳ 6ರಂದು ಖುದ್ದು ನ್ಯಾಯಾಲಯಕ್ಕೆ ಹಾಜರಾಗಲು ಸೂಚನೆ ನೀಡಿದೆ. ಇದನ್ನೂ ಓದಿ: 1 ದಿನ ಸಾರಿಗೆ ಮುಷ್ಕರ ಮುಂದೂಡಿ: ಹೈಕೋರ್ಟ್‌ ಸೂಚನೆ

ಏನಿದು ಪ್ರಕರಣ?
ಏ.18ರ ಸಂಜೆ 4:45ರ ಸುಮಾರಿಗೆ ಫಯಾಜ್ ಎಂಬಾತ, ವಿದ್ಯಾರ್ಥಿನಿ ನೇಹಾ ಹಿರೇಮಠ ಕಾಲೇಜಿನಿಂದ ಹೊರಬರುತ್ತಿದ್ದ ಸಂದರ್ಭದಲ್ಲಿ ಏಕಾಏಕಿ ಆಕೆಯ ಕುತ್ತಿಗೆ, ಹೊಟ್ಟೆ ಹಾಗೂ ಬೆನ್ನಿನ ಭಾಗಕ್ಕೆ ಮನಬಂದಂತೆ ಚಾಕುವಿನಿಂದ ಇರಿದು ಹತ್ಯೆಗೈದಿದ್ದ. ಬಳಿಕ ಆರೋಪಿ ಕಿಮ್ಸ್ ಆಸ್ಪತ್ರೆಯ ಹಿಂಬದಿ ಅವಿತು ಕುಳಿತಿದ್ದ, ಆತನನ್ನು ಕೂಡಲೇ ಬಂಧಿಸಲಾಗಿತ್ತು. ಆರೋಪಿಗೆ ಕಠಿಣ ಶಿಕ್ಷೆಗೆ ಆಗ್ರಹಿಸಿ ರಾಜ್ಯಾದ್ಯಂತ ಪ್ರತಿಭಟನೆಗಳಾಗಿದ್ದವು.

Share This Article