– ಕೇರಳಕ್ಕೆ ಹಸುಗಳನ್ನು ಸಾಗಿಸುತ್ತಿದ್ದ ಗ್ಯಾಂಗ್
– ಮಾಂಸಕ್ಕೆ ಯೋಗ್ಯವಲ್ಲ ಅಂತ ಕೊಂದು ಎಸೆದಿದ್ದ ಪಾಪಿಗಳು
ನೆಲಮಂಗಲ: ಹಸುಗಳ (Cow) ಕತ್ತು ಕೊಯ್ದು ರಸ್ತೆಯಲ್ಲಿ ಬಿಸಾಡಿದ್ದ ಮೂವರು ಆರೋಪಿಗಳನ್ನು ನೆಲಮಂಗಲ (Nelamangala) ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಇಮ್ರಾನ್ (30) ಸೈಯದ್ ನವಾಜ್ (35) ಗುರುತಿಸಲಾಗಿದೆ. ಮತ್ತೋರ್ವ ಆರೋಪಿಯ ಹೆಸರು ಬಹಿಂಗಪಡಿಸಿಲ್ಲ. ಆರೋಪಿಗಳು ಇತ್ತೀಚೆಗೆ ನೆಲಮಂಗಲ ತಾಲೂಕಿನ ಅರಳಸಂದ್ರ ಗ್ರಾಮದ ಸೇತುವೆ ಮೇಲೆ 2 ನಾಟಿ ಹಸುಗಳ ಕತ್ತು ಕೊಯ್ದು ಬಿಸಾಡಿದ್ದರು. ಈ ಪ್ರಕರಣದ ಬಗ್ಗೆ ಸದನದಲ್ಲೂ ಚರ್ಚೆ ಆಗಿತ್ತು. ಇದನ್ನೂ ಓದಿ: ವರದಕ್ಷಿಣೆ ಕಿರುಕುಳದ ಆರೋಪ – ಮಗುವಿನ ಎದುರೇ ತಾಯಿ ನೇಣಿಗೆ ಶರಣು
ಈ ಸಂಬಂಧ ತನಿಖೆ ಕೈಗೆತ್ತಿಕೊಂಡಿದ್ದ ನೆಲಮಂಗಲ ಗ್ರಾಮಾಂತರ ಠಾಣೆ ಪೊಲೀಸರು, ಕೇರಳಕ್ಕೆ (Kerala) ಹಸುಗಳನ್ನ ಸಾಗಿಸುತ್ತಿದ್ದ ಗ್ಯಾಂಗ್‍ನ ಮೂವರನ್ನು ಬಂಧಿಸಿದ್ದಾರೆ. ವಿಚಾರಣೆ ವೇಳೆ, ಹತ್ಯೆಯಾದ ಹಸುಗಳ ಮಾಂಸ ತಿನ್ನಲು ಯೋಗ್ಯವಲ್ಲದ ಕಾರಣ ಆರೋಪಿಗಳು ಕೊಂದು ಬಿಸಾಡಿದ್ದಾರೆ ಎಂಬುದು ತಿಳಿದು ಬಂದಿದೆ.
ಈ ಪ್ರಕರಣ ಸಂಬಂಧ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಗದಗ | ಬೈಕ್‌ಗೆ ಟ್ರ್ಯಾಕ್ಟರ್ ಡಿಕ್ಕಿ – ಗ್ರಾಮ ಸಹಾಯಕ ಸಾವು