‘ಸಿತಾರೆ ಜಮೀನ್ ಪರ್’ ಬಾಯ್‌ಕಾಟ್‌ಗೆ ಆಗ್ರಹ- ಆಮೀರ್ ಖಾನ್ ವಿರುದ್ಧ ತಿರುಗಿಬಿದ್ದ ನೆಟ್ಟಿಗರು

By
2 Min Read

ಬಾಲಿವುಡ್ ನಟ ಆಮೀರ್ ಖಾನ್ (Aamir Khan) ನಟನೆಯ ‘ಸಿತಾರೆ ಜಮೀನ್ ಪರ್’ (Sitaare Zameen Par) ಚಿತ್ರಕ್ಕೆ ಸಂಕಷ್ಟವೊಂದು ಎದುರಾಗಿದೆ. ಈ ಸಿನಿಮಾವನ್ನು ನಿಷೇಧಿಸುವಂತೆ ಬಾಯ್‌ಕಾಟ್ ‘ಸಿತಾರೆ ಜಮೀನ್ ಪರ್’ ಎಂದು ಎಕ್ಸ್ ಖಾತೆಯಲ್ಲಿ ಟ್ರೆಂಡಿಂಗ್ ಆಗ್ತಿದೆ. ಆಮೀರ್ ಸಿನಿಮಾ ವಿರುದ್ಧ ನೆಟ್ಟಿಗರು ಕೆಂಡಕಾರಿದ್ದಾರೆ. ಇದನ್ನೂ ಓದಿ:ಉಪೇಂದ್ರ ಪುತ್ರ ಚಿತ್ರರಂಗಕ್ಕೆ ಎಂಟ್ರಿ- ‘ಮೊದಲಾ ಸಲ’ ಖ್ಯಾತಿಯ ನಿರ್ದೇಶಕ ಆ್ಯಕ್ಷನ್ ಕಟ್

‘ಸಿತಾರೆ ಜಮೀನ್ ಪರ್’ ಚಿತ್ರದ ಮೂಲಕ 3 ವರ್ಷಗಳ ಬಳಿಕ ಆಮೀರ್ ಖಾನ್ ಸಿನಿಮಾ ರಿಲೀಸ್‌ಗೆ ಸಜ್ಜಾಗಿದೆ. ಹೀಗಿರುವಾಗ ಬಾಯ್‌ಕಾಟ್ ಸಿತಾರೆ ಜಮೀನ್ ಪರ್’ ಎಂದು ಎಕ್ಸ್ ಖಾತೆಯಲ್ಲಿ ಟ್ರೆಂಡಿಂಗ್ ಆಗ್ತಿರೋದು ಚಿತ್ರತಂಡಕ್ಕೆ ತಲೆನೋವಾಗಿದೆ. ಅದಕ್ಕೆಲ್ಲಾ ಕಾರಣ, ಆಮೀರ್ ಖಾನ್ ಈ ಹಿಂದೆ ಟರ್ಕಿ ಅಧ್ಯಕ್ಷ ರೆಸೆಪ್ ತಯ್ಯಿಪ್ ಎರ್ಡೋಗನ್ ದಂಪತಿಯನ್ನು ಭೇಟಿ ಮಾಡಿದ್ದ ಫೋಟೋ ಮತ್ತೆ ಮುನ್ನೆಲೆ ಬಂದಿದ್ದರಿಂದ ಚಿತ್ರತಂಡಕ್ಕೆ ಸಂಕಷ್ಟ ಎದುರಾಗಿದೆ. ಇದನ್ನೂ ಓದಿ:ತಡವಾಗಿ ಆಮೀರ್ ಖಾನ್ ಪ್ರಶಂಸೆ- ಈಗ ಎಚ್ಚರವಾದ್ರಾ ಎಂದು ಪ್ರಶ್ನಿಸಿದ ನೆಟ್ಟಿಗರು


ಇತ್ತ ಭಯೋತ್ಪಾದನೆ ವಿರುದ್ಧ ಭಾರತ ‘ಆಪರೇಷನ್ ಸಿಂಧೂರ’ ಕಾರ್ಯಾಚರಣೆ ನಡೆಸುತ್ತಿದೆ. ಶತ್ರು ದೇಶ ಪಾಪಿ ಪಾಕಿಸ್ತಾನಕ್ಕೆ ಟರ್ಕಿ ಬೆಂಬಲವಾಗಿ ನಿಂತಿದೆ. ಶಸ್ತ್ರಾಸ್ತ್ರಗಳನು ಪಾಕ್‌ಗೆ ಒದಗಿಸಿದ ಟರ್ಕಿಗೆ ಒಂದೊಂದೇ ವ್ಯವಹಾರಗಳಿಗೆ ಬ್ರೇಕ್ ಹಾಕುತ್ತಾ ಭಾರತ ತಕ್ಕ ಪಾಠ ಕಲಿಸುತ್ತಿದೆ. ಇದರ ನಡುವೆ ಟರ್ಕಿ ಅಧ್ಯಕ್ಷ ಉತ್ತಮ ಒಡನಾಟ ಹೊಂದಿರುವ ಆಮೀರ್ ಈಗ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾರಿದ್ದಾರೆ. ಟರ್ಕಿ ಫ್ಯಾನ್ಸ್‌ಗೆ ಬೇಸರ ಮೂಡಿಸದಿರಲು ಆಮೀರ್‌ಗೆ ಇಷ್ಟವಿಲ್ಲ. ಹೀಗಾಗಿ ‘ಆಪರೇಷನ್ ಸಿಂಧೂರ’ (Operation Sindoor) ಕಾರ್ಯಾಚರಣೆ ಬಗ್ಗೆ ಆಮೀರ್ ತಡವಾಗಿ ಅಭಿನಂದನೆ ಸಲ್ಲಿಸಿದರು ಎಂದೆಲ್ಲಾ ನಟನ ವಿರುದ್ಧ ನೆಟ್ಟಿಗರು ತಿರುಗಿ ಬಿದ್ದಿದ್ದಾರೆ.

2020ರಲ್ಲಿ ‘ಲಾಲ್ ಸಿಂಗ್ ಚಡ್ಡಾ’ ಸಿನಿಮಾದ ಕೆಲವು ಭಾಗಗಳನ್ನು ಟರ್ಕಿಯಲ್ಲಿಯೇ ಶೂಟಿಂಗ್ ಮಾಡಲಾಗಿತ್ತು. ಆ ವೇಳೆ ಕ್ಲಿಕ್ಕಿಸಿದ್ದ ಟರ್ಕಿ ಅಧ್ಯಕ್ಷ ರೆಸೆಪ್ ದಂಪತಿಯೊಂದಿನ ಆಮೀರ್ ಫೋಟೋ ಈಗ ಸೋಷಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗ್ತಿದೆ. ‘ಸಿತಾರೆ ಜಮೀನ್ ಪರ್’ ಬಹಿಷ್ಕಾರ ಮಾಡಲೇಬೇಕು ಎಂದು ನೆಟ್ಟಿಗರು ಪಟ್ಟುಹಿಡಿದಿದ್ದಾರೆ. ಹೀಗಾಗಿ ಈ ಚಿತ್ರ ಎಕ್ಸ್‌ನಲ್ಲಿ ಟ್ರೆಂಡಿಂಗ್‌ನಲ್ಲಿದೆ.

Share This Article