ರಕ್ಷಣಾ ಪಡೆಗಳ ಮುಖ್ಯಸ್ಥ ಅನಿಲ್ ಚೌಹಾಣ್‍ಗೆ Z+ ಭದ್ರತೆ

Public TV
1 Min Read

ನವದೆಹಲಿ: ಗೃಹ ಸಚಿವಾಲಯದ ನಿರ್ದೇಶನದ ಮೇರೆಗೆ ದೆಹಲಿ ಪೊಲೀಸರು ರಕ್ಷಣಾ ಪಡೆಗಳ ಮುಖ್ಯಸ್ಥರಾಗಿರುವ (CDS) ಲೆಫ್ಟಿನೆಂಟ್ ಜನರಲ್ ಅನಿಲ್ ಚೌಹಾಣ್ (Anil Chauhan) ಅವರಿಗೆ ಝಡ್ ಪ್ಲಸ್ ಭದ್ರತೆಯನ್ನು (Z+ Security) ಒದಗಿಸಿದ್ದಾರೆ.

ಶುಕ್ರವಾರದಂದು ಅನಿಲ್ ಚೌಹಾಣ್ ಅವರು ಭಾರತದ ನೂತನ ರಕ್ಷಣಾ ಪಡೆಗಳ ಮುಖ್ಯಸ್ಥರಾಗಿ (Chief of Defense Staff) ಅಧಿಕಾರ ವಹಿಸಿಕೊಂಡರು. ಲೆಫ್ಟಿನೆಂಟ್ ಜನರಲ್ ಅನಿಲ್ ಚೌಹಾಣ್ 2021ರ ಮೇ ತಿಂಗಳಲ್ಲಿ ಪೂರ್ವ ಕಮಾಂಡ್‍ನ ಮುಖ್ಯಸ್ಥರಾಗಿ ನಿವೃತ್ತರಾಗಿದ್ದರು. ಇದನ್ನೂ ಓದಿ: ಸ್ವಚ್ಛನಗರಿ ರ್‍ಯಾಂಕಿಂಗ್‌ ಪಟ್ಟಿಯಲ್ಲಿ ಕುಸಿದ ಬೆಂಗಳೂರು- ಬಿಗ್‌ಶೇಮ್‌ ಎಂದು ಕುಟುಕಿದ ಪೈ

ಗೃಹ ಸಚಿವಾಲಯದ ಆದೇಶದ ಮೇರೆಗೆ ಸಿಡಿಎಸ್ ಜನರಲ್ ಅನಿಲ್ ಚೌಹಾಣ್ ಅವರಿಗೆ ಝಡ್ ಪ್ಲಸ್ ಭದ್ರತೆಯನ್ನು ಒದಗಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ರಕ್ಷಣಾ ಪಡೆಗಳ ಮುಖ್ಯಸ್ಥರಾಗಿ ಅನಿಲ್ ಚೌಹಾಣ್ ನೇಮಕ

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *