ಕೊರೊನಾ ಹೊಸ ವೈರಸ್ B.1.1.529 ಪತ್ತೆ – ಭಾರತದಲ್ಲಿ ಆತಂಕ

Public TV
2 Min Read

ನವದೆಹಲಿ: ದಕ್ಷಿಣ ಆಫ್ರಿಕಾದಲ್ಲಿ ಕಂಡು ಬಂದಿರುವ ಹೊಸ ಕೊರೊನಾ ವೈರಸ್ B.1.1.529 ರೂಪಾಂತರಿ ತಳಿ ಜಗತ್ತಿನ ಕಳವಳಕ್ಕೆ ಕಾರಣವಾಗಿದೆ.

ದಕ್ಷಿಣ ಆಫ್ರಿಕಾದಲ್ಲಿ ಕಂಡುಬಂದಿರುವ ಕೊರೊನಾ ವೈರಸ್‌ನ ಹೊಸ ರೂಪಾಂತರಗಳ ಬಗ್ಗೆ ವಿಶ್ವಾದ್ಯಂತ ಕಳವಳ ವ್ಯಕ್ತವಾಗುತ್ತಿದ್ದು, ಇದು ಇಲ್ಲಿಯವರೆಗಿನ ಅತಿ ಹೆಚ್ಚು ರೂಪಾಂತರವನ್ನು ಹೊಂದಿರುವ ರೂಪಾಂತರ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. (New Covid Variant B.1.1529). ಅದರಲ್ಲಿ ಹಲವಾರು ರೂಪಾಂತರಗಳಿದ್ದು, ಇದನ್ನು ವಿಜ್ಞಾನಿಗಳು ಭಯಾನಕ ಎಂದು ಕರೆದಿದ್ದಾರೆ. ಇದನ್ನೂ ಓದಿ: ಮಕ್ಕಳಿಗೆ ಲಸಿಕೆ ಭಾಗ್ಯ- 2 ರಿಂದ 18 ವರ್ಷದವರಿಗೆ ಕೋವ್ಯಾಕ್ಸಿನ್ ನೀಡಲು ಅನುಮತಿ

ಹೊಸ ರೂಪಾಂತರ ವೈರಸ್‌ ಚೀನಾದ ವುಹಾನ್‌ನಲ್ಲಿ ಕಂಡುಬಂದಿದ್ದ ಮೂಲ ವೈರಸ್‌ಗಿಂತ ಸಾಕಷ್ಟು ಭಿನ್ನವಾಗಿದ್ದು, ಇದುವರೆಗಿನ ಮೂಲ ವೈರಸ್ ಅನ್ನು ಗಮನದಲ್ಲಿಟ್ಟುಕೊಂಡು ಲಸಿಕೆಯನ್ನು ತಯಾರಿಸಲಾಗಿದೆ. ಆದರೆ, ಈ ರೂಪಾಂತರಿಗೆ  ಲಸಿಕೆ ಎಷ್ಟು ಪರಿಣಾಮಕಾರಿ ಎಂದು ಹೇಳಲು ತಜ್ಞರಿಗೆ ಕೂಡ ಆಗುತ್ತಿಲ್ಲ ಎಂದು ವರದಿಯಾಗಿದೆ. ಇದನ್ನೂ ಓದಿ: ಒಳ್ಳೆ ಬುದ್ಧಿ ಕಲಿಯಿರಿ ಎಂದಿದ್ದಕ್ಕೆ ಸಾಮಾಜಿಕ ಕಾರ್ಯಕರ್ತನ ಕೊಲೆಗೈದ ಬಾಲಕರು!

ಈ ಹಿನ್ನೆಲೆಯಲ್ಲಿ ಭಾರತದಲ್ಲಿ ಪ್ರತಿ ರಾಜ್ಯದಲ್ಲೂ ಹೈ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಆಫ್ರಿಕಾ, ಬೋಟ್ಸ್ ವಾನಾ ಸೇರಿ ಆಫ್ರಿಕಾದ ನಾಲ್ಕು ರಾಷ್ಟ್ರಗಳ ವಿಮಾನ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ. ವಿಶ್ವ ಆರೋಗ್ಯ ಸಂಸ್ಥೆ ಸಭೆ ನಡೆಸಿ, ಲಸಿಕೆ ತಗೊಂಡಿದ್ದರೂ ಸಾಮಾಜಿಕ ಅಂತರ, ಮಾಸ್ಕ್ ಮರೆಯದಿರಿ ಎಂದಿದೆ. ಇನ್ನು, ಎರಡು ವರ್ಷಗಳ ಬಳಿಕ ಅಂದರೆ ಡಿಸೆಂಬರ್ 15ರಿಂದ ಅಂತಾರಾಷ್ಟ್ರೀಯ ವಾಣಿಜ್ಯ ವಿಮಾನಗಳ ಸಂಚಾರಕ್ಕೆ ಕೇಂದ್ರ ಸರ್ಕಾರ ಅನುಮತಿ ನೀಡಿದೆ. ಇದನ್ನೂ ಓದಿ: IND vs NZ ಟೆಸ್ಟ್ ಪಂದ್ಯದಲ್ಲಿ ಸುದ್ದಿಯಾದ ಪಾನ್ ಭಾಯ್ – ವೀಡಿಯೋ ವೈರಲ್

ಕೋವಿಡ್ ಹೆಚ್ಚಿರುವ 14 ದೇಶಗಳಿಂದ ಬರುವ ವಿಮಾನಗಳಿಂದ ಬಯೋ ಬಬಲ್ ಪದ್ಧತಿ ಅನುಸರಿಸುವುದಾಗಿ ಭಾರತ ಸರ್ಕಾರ ತಿಳಿಸಿದೆ. ಈ ಮಧ್ಯೆ, ಯುರೋಪ್‍ನಲ್ಲಿ 5-11 ವರ್ಷದ ಮಕ್ಕಳಿಗೆ ಲಸಿಕೆ ನೀಡಲು ಫೈಜರ್ ಸಂಸ್ಥೆಗೆ ಅನುಮತಿಸಲಾಗಿದೆ. ಈಗಾಗಲೇ ಆಸ್ಟ್ರೀಯಾದಲ್ಲಿ ಚಿಕ್ಕ ಮಕ್ಕಳಿಗೆ ಲಸಿಕೆ ನೀಡಲಾಗುತ್ತಿದೆ. ಭಾರತದಲ್ಲಿ ಮಕ್ಕಳಿಗೆ ಕೊರೊನಾ ಲಸಿಕೆ ನೀಡಲು ಗ್ರೀನ್ ಸಿಗ್ನಲ್ ಸಿಕ್ಕಿದ್ದು, ತುರ್ತು ಬಳಕೆಗೆ ಭಾರತೀಯ ಔಷಧ ನಿಯಂತ್ರಣ ಸಂಸ್ಥೆ(ಡಿಸಿಜಿಐ)  ಅನುಮತಿ ನೀಡಿದೆ. ಭಾರತದಲ್ಲಿ ಬೂಸ್ಟರ್ ಡೋಸ್ ನೀಡುವ ಸಂಬಂಧ ಕೇಂದ್ರದ ನಿಲುವೇನು ಎಂದು ದೆಹಲಿ ಹೈಕೋರ್ಟ್ ಪ್ರಶ್ನೆ ಮಾಡಿದೆ. ಈ ಸಂಬಂಧ ಅಫಿಡವಿಟ್ ಸಲ್ಲಿಸುವಂತೆ ಸೂಚಿಸಿದೆ.

Share This Article
Leave a Comment

Leave a Reply

Your email address will not be published. Required fields are marked *