ಕನ್ನಡ ಮಾತು ಕೇಳಿ ಇಂಗ್ಲಿಷ್‌ನಲ್ಲಿ ಉತ್ತರ ಕೊಟ್ಟ ರಚಿನ್‌ – ಬೆಂಗ್ಳೂರು ವಿಲ್ಸನ್‌ ಗಾರ್ಡನ್‌ ನೆನಪು ಹಂಚಿಕೊಂಡ ರವೀಂದ್ರ

Public TV
4 Min Read

ಅಹಮದಾಬಾದ್: ಏಕದಿನ ವಿಶ್ವಕಪ್ (Cricket World Cup) ಟೂರ್ನಿಯ ಚೊಚ್ಚಲ ಪಂದ್ಯದಲ್ಲೇ ಆಂಗ್ಲರ ವಿರುದ್ಧ ಶತಕ ಸಿಡಿಸಿ ಕಿವೀಸ್ ಪಡೆಗೆ ಗೆಲುವು ತಂದುಕೊಟ್ಟ ರಚಿನ್ ರವೀಂದ್ರ (Rachin Ravindra) ನಿನ್ನೆಯಿಂದಲೂ ಜಾಲತಾಣದಲ್ಲಿ ಸುದ್ದಿಯಲ್ಲಿದ್ದಾರೆ. ರಚಿನ್‌ ಬಗ್ಗೆ ಅನೇಕ ಕುತೂಹಲಕಾರಿ ಸಂಗತಿಗಳು ಹರಿದಾಡುತ್ತಿವೆ. ಇದೀಗ ರಚಿನ್‌ ರವೀಂದ್ರ ಅವರೊಂದಿಗೆ ಕನ್ನಡದಲ್ಲಿ ಮಾಡಿರುವ ಸಂದರ್ಶನದ ವೀಡಿಯೋ ತುಣುಕು ಜಾಲತಾಣದಲ್ಲಿ ಸದ್ದು ಮಾಡುತ್ತಿದೆ.

ಇಂಗ್ಲೆಂಡ್‌ (England) ವಿರುದ್ಧ ಗೆಲುವು ಸಾಧಿಸಿದ ಬಳಿಕ ವಿಶೇಷ ಸಂದರ್ಶನವೊಂದರಲ್ಲಿ ಮಾತನಾಡಿದ ರಚಿನ್‌ ನಿರೂಪಕರು ಕನ್ನಡದಲ್ಲೇ ಕೇಳುವ ಪ್ರಶ್ನೆಗಳನ್ನು ಸ್ಪಷ್ಟವಾಗಿ ಅರ್ಥಮಾಡಿಕೊಂಡು ಇಂಗ್ಲಿಷ್‌ನಲ್ಲೇ ಉತ್ತರ ಕೊಟ್ಟಿದ್ದಾರೆ. ಈ ಮೂಲಕ ಕನ್ನಡ ಭಾಷೆ ಮೇಲಿನ ಪ್ರೀತಿಯನ್ನು ಅಭಿವ್ಯಕ್ತಪಡಿಸಿದ್ದಾರೆ. ಇದಕ್ಕೆ ಅಭಿಮಾನಿಗಳು ಭೇಷ್‌ ಎಂದಿದ್ದಾರೆ. ಇದನ್ನೂ ಓದಿ: World Cup 2023: ಚೊಚ್ಚಲ ಪಂದ್ಯದಲ್ಲೇ ಸೇಡು ತೀರಿಸಿಕೊಂಡ ಕಿವೀಸ್‌; ಇಂಗ್ಲೆಂಡ್‌ ವಿರುದ್ಧ 9 ವಿಕೆಟ್‌ಗಳ ಭರ್ಜರಿ ಜಯ

ನಿರೂಪಕರು ಮೊದಲು ನಿಮ್ಗೆ ರಿಪ್ಲೇ ಮಾಡೋದಕ್ಕೆ ಕಷ್ಟ ಆಗುತ್ತೆ ಅಂತಾ ನಾವು ಕನ್ನಡದಲ್ಲಿ ಪ್ರಶ್ನೆ ಕೇಳುತ್ತೇವೆ ನಡೆಯುತ್ತಲ್ಲಾ? ಎನ್ನುತ್ತಿದ್ದಂತೆ ಹೋ, ತುಂಬಾ ಸಂತೋಷ ಎಂದು ಹೇಳಿದ ರಚಿನ್‌, ಬಳಿಕ ಕನ್ನಡದಲ್ಲಿ ಕೇಳಿದ ಪ್ರತಿಯೊಂದು ಪ್ರಶ್ನೆಯನ್ನು ಸುಲಭವಾಗಿ ಅರ್ಥಮಾಡಿಕೊಂಡು ಇಂಗ್ಲಿಷ್‌ನಲ್ಲಿ ಉತ್ತರ ಕೊಟ್ಟಿದ್ದಾರೆ. ಇದನ್ನೂ ಓದಿ: World Cup 2023: ಚೊಚ್ಚಲ ಪಂದ್ಯದಲ್ಲೇ ಮೋದಿ ಕ್ರಿಕೆಟ್‌ ಅಂಗಳದಲ್ಲಿ ಇತಿಹಾಸ ಬರೆದ ಇಂಗ್ಲೆಂಡ್‌

ಕನ್ನಡದಲ್ಲಿ ಕೇಳುವ ನಿರೂಪಕರ ಪ್ರಶ್ನೆಗಳಿಗೆ ಸಂತೋಷದಿಂದಲೇ ಉತ್ತರಿಸಿದ ರಚಿನ್‌, ಶತಕ ಸಿಡಿಸುವುದು ಒಬ್ಬ ಕ್ರಿಕೆಟ್ ಆಟಗಾರನಿಗೆ ತುಂಬಾ ವಿಶಿಷ್ಟವಾಗಿರುತ್ತದೆ. ಆದರೆ ಭಾರತದ ಮೈದಾನದಲ್ಲಿ ಇಂತಹ ದೊಡ್ಡ ಇನಿಂಗ್ಸ್ ಆಡಿರುವುದು ನಿಜಕ್ಕೂ ಆಹ್ಲಾದಾಕರವಾಗಿದೆ. ಇಂತಹ ದೊಡ್ಡ ಮೈದಾನದಲ್ಲಿ ಆಡುವುದು ನಿಜಕ್ಕೂ ಮರೆಯಲಾಗದ ಕ್ಷಣವಾಗಿದೆ. ಇದು ಮೊದಲ ಪಂದ್ಯವಾದ್ದರಿಂದ ಆಶಾದಾಯಕವಾಗಿಯೇ ಮುಂದುವರಿಯಬಹುದು ಎಂದು ಹೇಳಿದ್ದಾರೆ.

ಈ ಸೋಲಿನಿಂದ ಇಂಗ್ಲೆಂಡ್‌ ತಂಡವನ್ನು ಟೂರ್ನಿಯಿಂದ ಸೋಲಿಸಬಹುದು ಎಂದು ನಾನು ಹೇಳುವುದಿಲ್ಲ. ಇಂಗ್ಲೆಂಡ್‌ ಕೂಡ ಒಂದು ಅದ್ಭುತ ಕ್ರಿಕೆಟ್‌ ತಂಡ. ವಿಶ್ವಕಪ್‌ ಕ್ರಿಕೆಟ್‌ನಲ್ಲಿ ಇನ್ನೂ ಮುಂದೆ ಸಾಗುತ್ತಾರೆ ಅಂತ ನನಗನ್ನಿಸುತ್ತದೆ. ಕೆಲವೊಮ್ಮೆ ದಿನ ನಿಮ್ಮದಾಗಿರುತ್ತದೆ, ಕೆಲವೊಮ್ಮೆ ಆಗಿರೋದಿಲ್ಲ ಅಷ್ಟೇ. ಆದ್ರೆ ಖಂಡಿತವಾಗಿಯೂ ಇಂಗ್ಲೆಂಡ್‌ ಚಾಂಪಿಯನ್‌ ಟೀಂ ಎಂದು ನಂಬುತ್ತೇನೆ ಎಂದು ಶ್ಲಾಘಿಸಿದ್ದಾರೆ. ಇದನ್ನೂ ಓದಿ: ಆಂಗ್ಲರ ವಿರುದ್ಧ ಶತಕ ಸಿಡಿಸಿ ಮೆರೆದಾಡಿದ ಬೆಂಗ್ಳೂರು ಮೂಲದ ರಚಿನ್‌ ರವೀಂದ್ರ ಯಾರು ಗೊತ್ತಾ?

ಇದೇ ವೇಳೆ ಬೆಂಗಳೂರಿಗಿರುವ ನಂಟಿನ ಬಗ್ಗೆ ಮಾತನಾಡಿದ ರಚಿನ್‌, ನಾನು ಬೆಂಗಳೂರಿಗೆ ಹಿಂದಿರುಗುತ್ತಿರುವುದು ಆಹ್ಲಾದಕರವೆನಿಸಿದೆ. ಬೆಂಗಳೂರಿನಲ್ಲಿ ನನ್ನ ಕುಟುಂಬದೊಂದಿಗಿನ ನೆನಪುಗಳಿವೆ. ನನ್ನ ಅಜ್ಜ ಮತ್ತು ಅಜ್ಜಿಯನ್ನು ವಿಲ್ಸನ್‌ ಗಾರ್ಡನ್‌ನಲ್ಲಿ ನೋಡಿದ ನೆನಪು ಈಗಲೂ ನೆನಪಾಗುತ್ತೆ. ನನ್ನ ತಾಯಿ ಸಂಬಂಧಿಕರು ಇಸ್ರೋ ಬಡಾವಣೆಯಲ್ಲಿದ್ದಾರೆ. ನನಗೆ ಸಾಧ್ಯವಾದಾಗಲೆಲ್ಲಾ ಅವರನ್ನು ಭೇಟಿ ಮಾಡಲು ಪ್ರಯತ್ನಿಸುತ್ತೇನೆ. ಅದು ನನಗೆ ತುಂಬಾ ಸಂತೋಷ ನೀಡುತ್ತದೆ. ಮುಂದೆ ಪಾಕಿಸ್ತಾನದ ವಿರುದ್ಧ ಬೆಂಗಳೂರಿನಲ್ಲಿ ಆಡುವಾಗಲು ಅಭಿಮಾನಿಗಳಿಂದ ಸಾಕಷ್ಟು ಬೆಂಬಲ ಸಿಗುತ್ತದೆ ಎಂದು ನಾನು ಭಾವಿಸುತ್ತೇನೆ ಎಂದಿದ್ದಾರೆ.

ಅಲ್ಲದೇ ನಮ್ಮದು ದೊಡ್ಡ ಪರಿವಾರ, ನನ್ನ ಇಡೀ ಕುಟುಂಬಕ್ಕೆ ಎಷ್ಟು ಟಿಕೆಟ್‌ಗಳನ್ನು ಪಡೆಯಲು ಸಾಧ್ಯವಾಗುತ್ತದೆ, ಅಷ್ಟು ಪಡೆಯಲು ನಾನು ಪ್ರಯತ್ನಿಸುತ್ತೇನೆ. ಆದ್ರೆ ಕುಟುಂಬದಿಂದ ಎಷ್ಟು ಜನ ಬರುತ್ತಾರೆ ಅನ್ನೋದು ಖಚಿತವಿಲ್ಲ. ಒಟ್ಟಿನಲ್ಲಿ ಅವರೆಲ್ಲರಿಗೂ ನಾನು ಕೃತಜ್ಞನನಾಗಿದ್ದೇನೆ ಎಂದು ಹೇಳಿಕೊಂಡಿದ್ದಾರೆ. ಇದನ್ನೂ ಓದಿ: Asian Games 2023- ಗ್ರೀಕೊ ರೋಮನ್ ಕುಸ್ತಿಯಲ್ಲಿ ಭಾರತಕ್ಕೆ 13 ವರ್ಷಗಳ ಬಳಿಕ ಪದಕ

ರಚಿನ್‌ ರವೀಂದ್ರ ಯಾರು?
23 ವರ್ಷದ ರಚಿನ್ ರವೀಂದ್ರ ಅವರು ನ್ಯೂಜಿಲೆಂಡ್‌ನ ವೆಲ್ಲಿಂಗ್ಟನ್‌ನಲ್ಲಿ ಜನಿಸಿದ್ದರೂ ಅವರ ಅಪ್ಪ-ಅಮ್ಮ ಮೂಲತಃ ಬೆಂಗಳೂರಿನವರು. ತಂದೆ ರವಿ ಕೃಷ್ಣಮೂರ್ತಿ ಹಾಗೂ ತಾಯಿ ದೀಪಾ ಕೃಷ್ಣಮೂರ್ತಿ ಅವರು ಸಾಫ್ಟ್ವೇರ್ ಎಂಜಿನೀಯರ್‌ಗಳಾಗಿದ್ದು, ಉದ್ಯೋಗ ಅರಸಿ 1990ರ ದಶಕದಲ್ಲಿ ಬೆಂಗಳೂರಿನಿಂದ ನ್ಯೂಜಿಲೆಂಡ್‌ಗೆ ತೆರಳಿದ್ದರು. ರಚಿನ್ ರವೀಂದ್ರ ಅವರ ತಂದೆ, ಸಾಫ್ಟ್ವೇರ್ ಎಂಜಿನೀಯರ್ ಆಗಿದ್ದರೂ ಅಪ್ಪಟ ಕ್ರಿಕೆಟ್ ಅಭಿಮಾನಿ. ಅದರಲ್ಲೂ ರವಿ ಕೃಷ್ಣಮೂರ್ತಿ ಅವರು ಭಾರತೀಯ ಕ್ರಿಕೆಟ್ ದಿಗ್ಗಜರಾದ ಸಚಿನ್ ತೆಂಡೂಲ್ಕರ್ ಹಾಗೂ ರಾಹುಲ್ ದ್ರಾವಿಡ್ ಅವರ ಪಕ್ಕಾ ಫ್ಯಾನ್. ಈ ಕಾರಣದಿಂದಾಗಿ ರಾಹುಲ್ ದ್ರಾವಿಡ್ ಹೆಸರಿನಿಂದ ʻರʼ ಮತ್ತು ಸಚಿನ್ ತೆಂಡೂಲ್ಕರ್ ಹೆಸರಿನಿಂದ ʻಚಿನ್ʼ ಅಕ್ಷರಗಳನ್ನು ತೆಗೆದುಕೊಂಡು ತಮ್ಮ ಪುತ್ರನಿಗೆ ರಚಿನ್ ಎಂದು ಹೆಸರಿಟ್ಟಿದ್ದರು.

ರಚಿನ್ ರವೀಂದ್ರ ಅವರು ನ್ಯೂಜಿಲೆಂಡ್ ಪರ ಅಂಡರ್-19 ವಿಶ್ವಕಪ್ ಟೂರ್ನಿಯಲ್ಲಿ ಆಡಿದ್ದಾರೆ. 2016 ಮತ್ತು 2018ರಲ್ಲಿ ಕಾಣಿಸಿಕೊಂಡಿದ್ದರು. ಇದಾದ ಬಳಿಕ ಅವರು ನ್ಯೂಜಿಲೆಂಡ್ ದೇಶಿ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿ ಅಲ್ಲಿ ಗಮನಾರ್ಹ ಪ್ರದರ್ಶನ ತೋರಿದ್ದರು. ಇದರ ಫಲವಾಗಿ 2021ರಲ್ಲಿ ಭಾರತದ ವಿರುದ್ಧ ಟೆಸ್ಟ್ ಸರಣಿಯಲ್ಲಿ ನ್ಯೂಜಿಲೆಂಡ್ ತಂಡಕ್ಕೆ ಮೊದಲ ಬಾರಿ ಆಯ್ಕೆಯಾಗಿದ್ದರು. ನಂತರ ಇದೇ ವರ್ಷದಲ್ಲಿ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದರು.

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್