ಮದುವೆಯಾಗಿ ಕೊಠಡಿ ಸೇರಿದ ನವದಂಪತಿ ಶವವಾಗಿ ಪತ್ತೆ – ಇಬ್ಬರಿಗೂ ಹೃದಯಾಘಾತ!

Public TV
1 Min Read

ಲಕ್ನೋ: ಮದುವೆಯಾಗಿ ಮೊದಲ ರಾತ್ರಿ ತಮ್ಮ ಕೊಠಡಿ ಸೇರಿದ್ದ ದಂಪತಿಯಿಬ್ಬರಿಗೂ (Newly married couple) ಹೃದಯಾಘಾತವಾಗಿ (Heart Attack) ಸಾವನ್ನಪ್ಪಿರುವ ವಿಚಿತ್ರ ಘಟನೆ ಉತ್ತರ ಪ್ರದೇಶದ (Uttar Pradesh) ಬಹ್ರೈಚ್ (Bharaich) ಜಿಲ್ಲೆಯಲ್ಲಿ ನಡೆದಿದೆ.

ಪ್ರತಾಪ್ ಯಾದವ್ (22) ಹಾಗೂ ಪುಷ್ಪಾ (20) ಸಾವನ್ನಪ್ಪಿರುವ ದಂಪತಿ. ಮದುವೆಯಾದ ಮೊದಲನೇ ರಾತ್ರಿ ತಮ್ಮ ಕೊಠಡಿ ಸೇರಿದ ಬಳಿಕ ಮರುದಿನ ಇಬ್ಬರೂ ನಿಗೂಢವಾಗಿ ಸಾವನ್ನಪ್ಪಿರುವುದು ಬೆಳಕಿಗೆ ಬಂದಿದೆ.

ಪೊಲೀಸರು ಸ್ಥಳಕ್ಕೆ ಧಾವಿಸಿ ಎರಡೂ ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ವರದಿಯಲ್ಲಿ ಪತಿ-ಪತ್ನಿ ಇಬ್ಬರೂ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ಜಿಲ್ಲಾ ಎಸ್‌ಪಿ ಪ್ರಶಾಂತ್ ವರ್ಮಾ ತಿಳಿಸಿದ್ದಾರೆ. ಇದನ್ನೂ ಓದಿ: ಹುಟ್ಟು ಹಬ್ಬದ ದಿನವೇ ಕಾಂಪೌಂಡ್ ಕುಸಿದುಬಿದ್ದು ಬಾಲಕ ಸಾವು

ಪ್ರತಾಪ್ ಹಾಗೂ ಪುಷ್ಪಾ ಅಂತ್ಯಕ್ರಿಯೆಯನ್ನು ಬಳಿಕ ಪ್ರತಾಪ್ ಅವರ ಗ್ರಾಮದಲ್ಲಿ ಒಟ್ಟಿಗೆ ನೆರವೇರಿಸಲಾಗಿದೆ. ನವದಂಪತಿಯ ಸಾವಿನ ಸುದ್ದಿ ಕೇಳಿ ಸ್ಥಳಕ್ಕೆ ಅಪಾರ ಜನರು ಸೇರಿದ್ದರು. ಇಬ್ಬರನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಇದನ್ನೂ ಓದಿ: ಶಹಾಪುರದಲ್ಲಿ 20 ಟನ್ ಪಡಿತರ ಅಕ್ಕಿ ಕಳ್ಳತನ ಪ್ರಕರಣ – ಖಾಲಿ ಲಾರಿ ಬಿಟ್ಟು ಖದೀಮರು ಪರಾರಿ

Share This Article