ವರದಕ್ಷಿಣೆ ಕಿರುಕುಳ – ನವವಿವಾಹಿತೆ ಟೆಕ್ಕಿ ಆತ್ಮಹತ್ಯೆಗೆ ಶರಣು

Public TV
1 Min Read

ಬೆಂಗಳೂರು: ಎರಡು ವರ್ಷದ ಹಿಂದೆ ಮದುವೆಯಾಗಿದ್ದ ಟೆಕ್ಕಿಯೊಬ್ಬರು (Techie) ಆತ್ಮಹತ್ಯೆಗೆ (Suicide) ಶರಣಾದ ಘಟನೆ ಬೆಂಗಳೂರಿನ (Bengaluru) ಗಂಗಮ್ಮನ ಗುಡಿಯಲ್ಲಿ ನಡೆದಿದೆ.

ಪೂಜಾ(22) ಆತ್ಮಹತ್ಯೆ (Dowry) ಶರಣಾದ ವಿವಾಹಿತೆ. ಪೂಜಾ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಕಳೆದ ಎರಡು ವರ್ಷಗಳ ಹಿಂದೆ ಸುನೀಲ್ ಎಂಬಾತನನ್ನು ಪೂಜಾ ಮದುವೆಯಾಗಿದ್ದರು. ಇದನ್ನೂ ಓದಿ: ಶಂಕಿತ ಡೆಂಗ್ಯೂಗೆ ಹಾಸನದ ಬಾಲಕಿ ಬಲಿ – ಜಿಲ್ಲೆಯಲ್ಲಿ ಮೃತರ ಸಂಖ್ಯೆ 4ಕ್ಕೆ ಏರಿಕೆ

 

ಮದುವೆಯಾದ ಬಳಿಕ ವರದಕ್ಷಿಣೆಗಾಗಿ ಪತಿ ಪೀಡಿಸುತ್ತಿದ್ದ. ಇದರಿಂದ ಮನನೊಂದು ಮಗಳು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಮಗಳ ಸಾವಿಗೆ ಪತಿ ಸುನೀಲ್ ಹಾಗೂ ಮೈದುನ ಅನಿಲ್ ಕಾರಣ ಎಂದು ಪೂಜಾ ಪೋಷಕರು ಆರೋಪಿಸಿದ್ದಾರೆ.  ಇದನ್ನೂ ಓದಿ: ರೈತರಿಗೆ ಕೋಚಿಮುಲ್ ಬಿಗ್ ಶಾಕ್ – ಹಾಲು ಉತ್ಪಾದಕರಿಗೆ 2 ರೂ. ಕಡಿತ

ಪೂಜಾ ಆತ್ಮಹತ್ಯೆ ಸಂಬಂಧ ಗಂಗಮ್ಮನಗುಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Share This Article