ಮದುವೆ ಮಂಟಪದಿಂದ ನೇರವಾಗಿ ಬಂದು ನವಜೋಡಿ ಮಾನವ ಸರಪಳಿ ಕಾರ್ಯಕ್ರಮದಲ್ಲಿ ಭಾಗಿ

Public TV
1 Min Read

ಶಿವಮೊಗ್ಗ: ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಹಿನ್ನೆಲೆಯಲ್ಲಿ ವಿಶ್ವದ ಅತಿದೊಡ್ಡ ಮಾನವ ಸರಪಳಿ ನಿರ್ಮಾಣದಲ್ಲಿ ನವಜೋಡಿಯೊಂದು ಪಾಲ್ಗೊಂಡು ಗಮನ ಸೆಳೆಯಿತು.

ರಾಜ್ಯದಾದ್ಯಂತ ಸುಮಾರು 2,500 ಕಿ.ಮೀ ಉದ್ಧದ ಮಾನವ ಸರಪಳಿ ನಿರ್ಮಿಸಲಾಗಿತ್ತು. ಶಿವಮೊಗ್ಗ (Shivamogga) ಜಿಲ್ಲೆ ಭದ್ರಾವತಿ ತಾಲೂಕಿನ ಕಾರೇಹಳ್ಳಿಯಿಂದ ಶಿವಮೊಗ್ಗ ತಾಲೂಕಿನ ಮಡಕೆ ಚೀಲೂರು ವರೆಗೆ, ಸುಮಾರು 60 ಕಿಮೀ ವರೆಗೆ ಮಾನವ ಸರಪಳಿ ನಿರ್ಮಿಸಲಾಗಿತ್ತು.

ಶಿವಮೊಗ್ಗ ಜಿಲ್ಲಾಡಳಿತದಿಂದ ಕೈಗೊಂಡಿದ್ದ ಮಾನವ ಸರಪಳಿ ಕಾರ್ಯಕ್ರಮದಲ್ಲಿ ನವಜೋಡಿಯೊಂದು ಪಾಲ್ಗೊಂಡಿತ್ತು. ವಿವಾಹದ ನಂತರ ಮಾನವ ಸರಪಳಿಯಲ್ಲಿ ಕೈ ಕೈ ಹಿಡಿದು ವಧು-ವರ ಭಾಗವಹಿಸಿದ್ದರು. ಮದುವೆ ಮಂಟಪದಿಂದ ಸೀದಾ ಬಂದು ಮಾನವ ಸರಪಳಿ ಕಾರ್ಯಕ್ರಮದಲ್ಲಿ ಜೋಡಿ ಭಾಗವಹಿಸಿತು.

ಮಾನವ ಸರಪಳಿಯಲ್ಲಿ ಸರ್ಕಾರಿ ಶಾಲೆ, ಖಾಸಗಿ ಶಾಲೆ ಮಕ್ಕಳು ಮತ್ತು ಸರ್ಕಾರಿ ನೌಕರರು ಭಾಗಿಯಾಗಿದ್ದರು. ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಕಾರ್ಯಕ್ರಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಚಾಲನೆ ನೀಡಿದರು.

ಕಾರ್ಯಕ್ರಮಕ್ಕೂ ಮುನ್ನ ಮಹಾನಗರ ಪಾಲಿಕೆ ಆಚರಣದಲ್ಲಿ ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡಲಾಯಿತು. ಜೊತೆಗೆ ಸಸಿ ನೆಡುವ ಕಾರ್ಯಕ್ರಮವೂ ನಡೆಯಿತು. ಈ ವೇಳೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ, ಎಸ್‌ಪಿ ಮಿಥುನ್ ಕುಮಾರ್ ಸಾಥ್ ನೀಡಿದರು.

Share This Article