ಪ್ಯಾಲೆಸ್‌ ಗ್ರೌಂಡ್‌ನಲ್ಲಿ ರಿಸೆಪ್ಷನ್, ಶ್ರೀಲಂಕಾಕ್ಕೆ ಹನಿಮೂನ್ – ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆಗೆ ಯತ್ನ

1 Min Read

ಬೆಂಗಳೂರು: ಪ್ಯಾಲೆಸ್‌ ಗ್ರೌಂಡ್‌ನಲ್ಲಿ (Palace Ground) ಅದ್ದೂರಿ ರಿಸೆಪ್ಷನ್ ಮಾಡಿಕೊಂಡು ಶ್ರೀಲಂಕಾಕ್ಕೆ (Srilanka) ಹನಿಮೂನ್ ಹೋಗಿದ್ದ ನವದಂಪತಿ ಅರ್ಧದಲ್ಲೇ ವಾಪಸ್ಸಾಗಿದ್ದು, ಮದುವೆಯಾಗಿ ಎರಡು ತಿಂಗಳು ಕಳೆಯುವ ಮುನ್ನವೇ ನವವಧು ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಬೆಂಗಳೂರಿನ (Bengaluru) ರಾಮಮೂರ್ತಿ ನಗರದಲ್ಲಿ (Ramamurthy Nagar) ಈ ಘಟನೆ ನಡೆದಿದ್ದು, 26 ವರ್ಷದ ವಧು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಇದನ್ನೂ ಓದಿ: Chitradurga Bus Accident | ಲಾಕೆಟ್ ಮೂಲಕ ಮಗಳ ಗುರುತು ಪತ್ತೆಹಚ್ಚಿದ ಮಾನಸಾ ತಂದೆ

ಅಕ್ಟೋಬರ್ 29ರಂದು ವೈವಾಹಿಕ ಜೀವನಕ್ಕೆ ಕಾಲಿಟ್ಟು, ಪ್ಯಾಲೆಸ್‌ ಗ್ರೌಂಡ್‌ನಲ್ಲಿ ಅದ್ದೂರಿಯಾಗಿ ರಿಸೆಪ್ಷನ್ ಮಾಡಿಕೊಂಡಿದ್ದರು. ಕಳೆದ ಹತ್ತು ದಿನಗಳ ಹಿಂದೆ ಶ್ರೀಲಂಕಾಗೆ ಹನಿಮೂನ್‌ಗೆಂದು ಹೋಗಿದ್ದರು. ಆದರೆ ಅರ್ಧಕ್ಕೆ ಶ್ರೀಲಂಕಾದಿಂದ ಇಬ್ಬರು ವಾಪಸ್ಸಾಗಿದ್ದರು.

ಬುಧವಾರ (ಡಿ.25) ಮಧ್ಯಾಹ್ನ ಹೊತ್ತಿಗೆ ಪತಿ ಮನೆಯಲ್ಲಿ ನವವಧು ಆತ್ಮಹತ್ಯೆಗೆ ಯತ್ನಿಸಿದ್ದು, ಸದ್ಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವಧುವಿನ ಕುಟುಂಬಸ್ಥರು ವರನ ಕುಟುಂಬಸ್ಥರ ವಿರುದ್ಧ ರಾಮಮೂರ್ತಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಕಿರುಕುಳ ತಾಳಲಾಗದೇ ಆತ್ಮಹತ್ಯೆ ಯತ್ನಿಸಿದ್ದಾಳೆ ಎಂದು ಆರೋಪಿಸಿದ್ದಾರೆ.ಇದನ್ನೂ ಓದಿ: ಗೆಳೆಯನಿಗಾಗಿ ಡ್ರಗ್ಸ್‌ ಮಾರಾಟ – ಮಹಿಳಾ ಟೆಕ್ಕಿ ಸೇರಿದಂತೆ ನಾಲ್ವರು ಅರೆಸ್ಟ್‌

 

 

Share This Article