ಸಿದ್ದರಾಮಯ್ಯ ರಾಜೀನಾಮೆ ಕೊಟ್ಟರೆ ಸತೀಶ್ ಜಾರಕಿಹೊಳಿ ಸಿಎಂ ಆಗಲಿ – ಅಭಿಮಾನಿಗಳ ಅಭಿಯಾನ

Public TV
1 Min Read

– ಮುಂದಿನ ಸಿಎಂ ಜಾರಕಿಹೊಳಿ; ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟರ್‌ ವೈರಲ್‌

ಬೆಳಗಾವಿ: ಸಿದ್ದರಾಮಯ್ಯ (Siddaramaiah) ರಾಜೀನಾಮೆ ಕೊಟ್ಟರೆ ಸತೀಶ್ ಜಾರಕಿಹೊಳಿ (Satish Jarkiholi) ಸಿಎಂ ಆಗಲಿ ಎಂದು ಜಾರಕಿಹೊಳಿ ಪರ ಅಭಿಮಾನಿಗಳು ಸೋಷಿಯಲ್ ಮೀಡಿಯಾದಲ್ಲಿ ಅಭಿಮಾನ ಶುರು ಮಾಡಿದ್ದಾರೆ.

ರಾಜ್ಯದಲ್ಲಿ ಸಿಎಂ ಬದಲಾವಣೆ ಆದರೆ ಸತೀಶ್ ಜಾರಕಿಹೊಳಿಗೆ ಸಿಗುತ್ತಾ ಅವಕಾಶ ಎನ್ನುವ ಪ್ರಶ್ನೆ ಉದ್ಭವಿಸಿದೆ. ಸಾಮಾಜಿಕ ಜಾಲತಾಣದಲ್ಲಿ ಜಾರಕಿಹೊಳಿ ಪರ ಅಭಿಯಾನ ನಡೆಯುತ್ತಿದೆ. ಇದನ್ನೂ ಓದಿ: ಹಿಂದೂ ದೇವರುಗಳಿಗೆ ಅಪಮಾನ ಮಾಡಬೇಡಿ: ಸಿಎಂ ವಿರುದ್ಧ ಈಶ್ವರಪ್ಪ ಗರಂ

ಸಿದ್ದರಾಮಯ್ಯ ರಾಜೀನಾಮೆ ಕೊಟ್ಟರೆ ಜಾರಕಿಹೊಳಿ ಸಿಎಂ ಆಗಲಿ. ಮುಂದಿನ ಸಿಎಂ ಸತೀಶ್ ಜಾರಕಿಹೊಳಿ ಎಂಬ ಪೋಸ್ಟರ್‌ಗಳು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿವೆ. ಮುಂದಿನ ಸಿಎಂ ಸತೀಶ್ ಜಾರಕಿಹೊಳಿ ಎಂದು ಗ್ರೂಪ್ ಕೂಡ ಕ್ರಿಯೆಟ್ ಮಾಡಲಾಗಿದೆ.

ಅಭಿಮಾನಿಗಳ ಪೋಸ್ಟ್ ಎಲ್ಲಾ ಕಡೆ ವೈರಲ್ ಆಗುತ್ತಿದೆ. ಇತ್ತೀಚೆಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಸತೀಶ್ ಜಾರಕಿಹೊಳಿ ಭೇಟಿಯಾಗಿದ್ದರು. ಅದಾದ ಬಳಿಕ, ಮುಂದಿನ ಸಿಎಂ ಜಾರಕಿಹೊಳಿ ಎಂಬ ಕೂಗು ಹೆಚ್ಚಾಗಿದೆ. ಇದನ್ನೂ ಓದಿ: ಎನ್‌ಆರ್‌ಸಿಗೆ ಅರ್ಜಿ ಸಲ್ಲಿಸದಿದ್ರೆ ಆಧಾರ್‌ ಕಾರ್ಡ್‌ ಇಲ್ಲ: ಅಸ್ಸಾಂ ಸಿಎಂ ಘೋಷಣೆ

ಬೆಂಗಳೂರಿನಲ್ಲಿ ಹಲವು ಮುಖಂಡರ ಜೊತೆಗೆ ಜಾರಕಿಹೊಳಿ ನಿಕಟ ಸಂಪರ್ಕ ಹೊಂದಿದ್ದಾರೆ. ರಾಜ್ಯದಲ್ಲಿ ಬದಲಾವಣೆ ಆಗಲಿದೆ ಎಂಬAತೆ ರಾಜಕೀಯ ವಲಯದಲ್ಲಿ ಚರ್ಚೆ ಶುರುವಾಗಿದೆ.

Share This Article