ಶೂಟೌಟ್‍ನಲ್ಲಿ ಗಾಯಗೊಂಡಿರುವ ಭೀಮ್ ಆರ್ಮಿ ಮುಖ್ಯಸ್ಥನಿಗೆ ಜೀವ ಬೆದರಿಕೆ – ಆರೋಪಿ ಅರೆಸ್ಟ್

By
2 Min Read

ಲಕ್ನೋ: ದುಷ್ಕರ್ಮಿಗಳಿಂದ ಗುಂಡಿನ ದಾಳಿಗೆ ಒಳಗಾಗಿರುವ ಭೀಮ್ ಆರ್ಮಿ (Bhim Army )ಮುಖ್ಯಸ್ಥ ಚಂದ್ರಶೇಖರ್ ಆಜಾದ್ (Chandrashekhar Azad) ವಿರುದ್ಧ ಬೆದರಿಕೆ ಪೋಸ್ಟ್ ಹಾಕಿದ್ದ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.

ಅಮೇಥಿಯ ಪೊಲೀಸ್ ವರಿಷ್ಠಾಧಿಕಾರಿ ಎಳಮಾರನ್.ಜಿ ಈ ಬಗ್ಗೆ ಮಾತನಾಡಿ, ಕ್ಷತ್ರಿಯ ಆಫ್ ಅಮೇಥಿ ಎಂಬ ಫೇಸ್‍ಬುಕ್ ಪೇಜ್‍ನಲ್ಲಿ ಆಜಾದ್‍ಗೆ ಜೀವ ಬೆದರಿಕೆ ಹಾಕಲಾಗಿದೆ. ಈ ಸಂಬಂಧ ವಿಮಲೇಶ್ ಸಿಂಗ್ (30) ಎಂಬ ಆರೋಪಿಯನ್ನು ಬಂಧಿಸಲಾಗಿದೆ. ಆತನ ವಿರುದ್ಧ ಐಪಿಸಿ ಸೆಕ್ಷನ್ 506ರ ಐಟಿ ಕಾಯ್ದೆ ಅಡಿ ಪ್ರಕರಣ ದಾಖಲಾಗಿದೆ ಎಂದಿದ್ದಾರೆ. ಇದನ್ನೂ ಓದಿ: ದೆಹಲಿ ವಿಶ್ವವಿದ್ಯಾನಿಲಯದ ಕಾರ್ಯಕ್ರಮಕ್ಕೆ ಸಾಮಾನ್ಯನಂತೆ ಮೆಟ್ರೋದಲ್ಲಿ ಬಂದ ಪ್ರಧಾನಿ ಮೋದಿ

6 ದಿನಗಳ ಹಿಂದೆ ಫೇಸ್‍ಬುಕ್ ಪೋಸ್ಟ್‌ನಲ್ಲಿ ಆಜಾದ್ ಅವರನ್ನು ಅಮೇಥಿಯ ಠಾಕೂರ್‌ಗಳು ಕೊಲ್ಲುತ್ತಾರೆ ಎಂದು ಆರೋಪಿ ಬರೆದುಕೊಂಡಿದ್ದ. ಚಂದ್ರಶೇಖರ್ ಆಜಾದ್ ಮೇಲಿನ ದಾಳಿಯಲ್ಲಿ ಆರೋಪಿ ಭಾಗಿಯಾಗಿರುವುದು ಮೇಲ್ನೋಟಕ್ಕೆ ಕಂಡುಬಂದಿಲ್ಲ. ಆದರೆ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡಲು ಮುಂಜಾಗ್ರತಾ ಕ್ರಮವಾಗಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅದೇ ಪುಟದಲ್ಲಿ ಮತ್ತೊಂದು ಪೋಸ್ಟ್‌ನಲ್ಲಿ ಆಜಾದ್ ಸೊಂಟಕ್ಕೆ ಗುಂಡು ಹಾರಿಸಲಾಗಿದೆ. ಆದರೆ ಮುಂದಿನ ಬಾರಿ ಅವರು ಬದುಕುಳಿಯುವುದಿಲ್ಲ ಎಂದು ಬರೆಯಲಾಗಿದೆ. ಅಲ್ಲದೇ ಈ ವಿಚಾರದಲ್ಲಿ ಅಮಾಯಕ ರಜಪೂತ್‍ನನ್ನು ಬಂಧಿಸಿದರೆ ಬೃಹತ್ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆಯನ್ನು ಸಾಮಾಜಿಕ ಜಾಲತಾಣದಲ್ಲಿ ನೀಡಲಾಗಿದೆ.

ಬುಧವಾರ ಸಹರಾನ್‍ಪುರ ಜಿಲ್ಲೆಯ ದಿಯೋಬಂದ್‍ನಲ್ಲಿ ಅಪರಿಚಿತ ದುಷ್ಕರ್ಮಿಗಳು ಆಜಾದ್ ಅವರ ಕಾರಿನ ಮೇಲೆ ಗುಂಡಿನ ದಾಳಿ ನಡೆಸಿದ್ದರು. ಈ ವೇಳೆ ಗುಂಡು ಅವರ ಬೆನ್ನಿಗೆ ತಗುಲಿ ಗಾಯಗೊಂಡಿದ್ದರು. ಅವರಿಗೆ ಚಿಕಿತ್ಸೆ ನೀಡಲಾಗಿದ್ದು, ಆರೋಗ್ಯದಲ್ಲಿ ಚೇತರಿಕೆ ಕಂಡ ಬಳಿಕ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ. ಪ್ರಕರಣ ಸಂಬಂಧ ದಾಳಿಗೆ ಬಳಸಿದ್ದ ಕಾರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಈ ಬಗ್ಗೆ ಚಂದ್ರಶೇಖರ್ ಆಜಾದ್ ಮಾತನಾಡಿ, ಉತ್ತರ ಪ್ರದೇಶ (Uttar Pradesh) ಮುಖ್ಯಮಂತ್ರಿ ರಾಜ್ಯದಲ್ಲಿ ನಡೆಯುತ್ತಿರುವ ಅಪರಾಧಗಳ ಬಗ್ಗೆ ಕಣ್ಣುಮುಚ್ಚಿ ಕುಳಿತಿದ್ದಾರೆ. ಅವರು ರಾಜ್ಯದಲ್ಲಿ ಅಪರಾಧಗಳನ್ನು ಪೋಷಿಸುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಬ್ಯಾಂಕ್‍ಗಳ ವಿಲೀನ ಪರಿಣಾಮ – ವಿಶ್ವದ ಮೌಲ್ಯಯುತ ಬ್ಯಾಂಕ್ ಆಗಿ ಹೊರಹೊಮ್ಮಿದ HDFC

Web Stories

Share This Article
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್