ಯೋಗಿ ಆದಿತ್ಯನಾಥ್ ಭೇಟಿಯಾದ ನಿಖಿಲ್ ಕುಮಾರಸ್ವಾಮಿ

Public TV
1 Min Read

ಬೆಂಗಳೂರು: ರಾಜ್ಯ ರಾಜಕೀಯ ಬೆಳವಣಿಗೆಯೊಂದರಂತೆ ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (Yogi Adityanath) ಅವರನ್ನು ಹೆಚ್‌ಡಿಕೆ ಪುತ್ರ ನಿಖಿಲ್ ಕುಮಾರಸ್ವಾಮಿ ಭೇಟಿಯಾಗಿದ್ದಾರೆ.

ಭೇಟಿಯ ಬಗ್ಗೆ ನಿಖಿಲ್ ಕುಮಾರಸ್ವಾಮಿಯವರು (Nikhil Kumaraswamy) ತನ್ನ ಎಕ್ಸ್ ಖಾತೆಯಲ್ಲಿ ತಿಳಿಸಿದ್ದಾರೆ. ಇದೊಂದು ಉತ್ತಮ ಬೆಳವಣಿಗೆ ಎಂದು ನಿಖಿಲ್ ಹೇಳಿಕೊಂಡಿದ್ದಾರೆ.

ಎಕ್ಸ್ ಖಾತೆಯಲ್ಲಿ ಏನಿದೆ..?: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಲಾಯಿತು. ಲೋಕಸಭೆ ಚುನಾವಣೆ ಎದುರಿಸುವ ನಿಟ್ಟಿನಲ್ಲಿ ರಾಜ್ಯದಲ್ಲಿ ಆಗಿರುವ ಜೆಡಿಎಸ್- ಬಿಜೆಪಿ (JDS_ BJP) ಮೈತ್ರಿಯ ಬಗ್ಗೆ ಅವರೊಂದಿಗೆ ಚರ್ಚಿಸಲಾಯಿತು. ಇದು ಅತ್ಯಂತ ಉತ್ತಮ ಬೆಳವಣಿಗೆ ಎಂದು ಅವರು ಸಂತಸ ವ್ಯಕ್ತಪಡಿಸಿದರು.

ಇದೇ ವೇಳೆ ಉತ್ತರ ಪ್ರದೇಶ ರಾಜಕಾರಣದ ಹಲವಾರು ಬೆಳವಣಿಗೆಗಳನ್ನು ಅವರು ಹಂಚಿಕೊಂಡರು. ಅವರು ಅತ್ಯಂತ ಪ್ರೀತಿ, ವಾತ್ಸಲ್ಯದಿಂದ ನನ್ನನ್ನು ಬರಮಾಡಿಕೊಂಡು ಆಶೀರ್ವದಿಸಿದರು. ಪ್ರೀತಿಯಿಂದ ಸತ್ಕರಿಸಿದ ನಿಮಗೆ ಧನ್ಯವಾದಗಳು ಎಂದು ನಿಖಿಲ್ ತಿಳಿಸಿದ್ದಾರೆ. ಇದನ್ನೂ ಓದಿ: ಪರಮೇಶ್ವರ್ ಮನೆಯಲ್ಲಿ ಡಿನ್ನರ್ ಪಾರ್ಟಿ- ಗೃಹಸಚಿವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಮುಂದಾದ್ರಾ ಸಿಎಂ?

ಕಳೆದ ತಿಂಗಳು ದೆಹಲಿಯಲ್ಲಿ ನಡೆದ ಅಮಿತ್ ಶಾ (Amitshah), ಜೆಪಿ ನಡ್ಡಾ (JP Nadda) ಮತ್ತು ಕುಮಾರಸ್ವಾಮಿ (HD Kumaraswamy) ಸಭೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಅಧಿಕೃತ ಮುದ್ರೆ ಬಿದ್ದಿತ್ತು. ಸೀಟು ಹಂಚಿಕೆ ಸೇರಿ ಹಲವು ವಿಚಾರಗಳ ಬಗ್ಗೆ ಗಹನವಾದ ಚರ್ಚೆ ನಡೆದಿತ್ತು. ಮೈತ್ರಿ ಏರ್ಪಡುವಲ್ಲಿ ಗೋವಾ ಸಿಎಂ ಪ್ರಮೋದ್ ಸಾವಂತ್ ಮಹತ್ವದ ಪಾತ್ರ ವಹಿಸಿದ್ದರು. ಬಳಿಕ ಅಮಿತ್ ಶಾ, ಜೆಪಿ ನಡ್ಡಾ ಎಕ್ಸ್ ಖಾತೆಯಲ್ಲಿ ಬರೆದುಕೊಳ್ಳುವ ಮೂಲಕ ದೋಸ್ತಿಯನ್ನು ಖಚಿತಪಡಿಸಿದ್ದರು. ಎನ್‍ಡಿಎ (NDS) ಕೂಟಕ್ಕೆ ಜೆಡಿಎಸ್ ಸೇರ್ಪಡೆಗೊಂಡಿರುವುದು ಸಂತಸ ತಂದಿದೆ. ಪ್ರಧಾನಿ ಮೋದಿ ಅವರ ಆಶಯಗಳನ್ನು ಸಾಕಾರಗೊಳಿಸಲು ಈ ಮೈತ್ರಿ ನೆರವಾಗಲಿದೆ ಎಂದು ತಿಳಿಸಿದ್ದರು.

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್