ನಿಖಿಲ್ ಕುಮಾರ್ ಹೊಸ ಚಿತ್ರಕ್ಕೆ ಮುಹೂರ್ತ : ಕ್ಲ್ಯಾಪ್ ಮಾಡಿ ವಿಶ್ ಮಾಡಿದ ಹೆಚ್.ಡಿ.ಕೆ

By
2 Min Read

ನಿಖಿಲ್ ಕುಮಾರ್ (Nikhil Kumar) ನಾಯಕರಾಗಿ ನಟಿಸುತ್ತಿರುವ ನೂತನ ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ನೆರವೇರಿತು. ಮಾಜಿ ಪ್ರಧಾನ ಮಂತ್ರಿಗಳಾದ ಹೆಚ್.ಡಿ.ದೇವೇಗೌಡ ಅವರು ಕಾರ್ಯಕ್ರಮಕ್ಕೆ ಆಗಮಿಸಿ ದೀಪ ಬೆಳಗುವ ಮೂಲಕ ಚಾಲನೆ ನೀಡಿದರು. ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ. ಕುಮಾರಸ್ವಾಮಿ (Kumaraswamy) ನೂತನ ಚಿತ್ರದ ಮೊದಲ ಸನ್ನಿವೇಶಕ್ಕೆ ಆರಂಭ ಫಲಕ ತೋರಿದರು.

 

ದಕ್ಷಿಣ ಭಾರತದ ಹೆಸರಾಂತ ಚಿತ್ರ ನಿರ್ಮಾಣ ಸಂಸ್ಥೆ ಲೈಕಾ ಪ್ರೊಡಕ್ಷನ್ಸ್ ಸಂಸ್ಥೆ (Lyca Production) ಈಗ ಈ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದೆ. ಈ ಚಿತ್ರದ ನಾಯಕನಾಗಿ ನಾನು ನಟಿಸುತ್ತಿದ್ದೇನೆ. ಲಕ್ಷ್ಮಣ್ ಅವರು ಈ ಚಿತ್ರದ ನಿರ್ದೇಶಕರು.

ಈ ಹಿಂದೆ ‘ಸೀತಾರಾಮ ಕಲ್ಯಾಣ’ ಚಿತ್ರದ ಆಡಿಯೋ ಬಿಡುಗಡೆ ಸಮಾರಂಭಕ್ಕೆ ಲೈಕಾ ಸಂಸ್ಥೆಯ ಸುಭಾಸ್ಕರನ್ (Subhaskaran) ಅವರು ಆಗಮಿಸಿದ್ದರು.  ‘ನಮ್ಮ ಸಂಸ್ಥೆಯ ನಿರ್ಮಾಣದ ಚಿತ್ರದಲ್ಲಿ ನೀವು ನಾಯಕರಾಗಿ ನಟಿಸಬೇಕು’ ಎಂದು ಸುಭಾಸ್ಕರನ್ ಹೇಳಿದ್ದರು. ಈಗ ಚಿತ್ರ ಆರಂಭವಾಗುತ್ತಿದೆ. ಈ ಚಿತ್ರಕ್ಕಾಗಿ ನಿರ್ದೇಶಕರು ಒಂದು ವರ್ಷದಿಂದ ಬೆಂಗಳೂರಿನಲ್ಲೇ ಇದ್ದು ಕೆಲಸ  ಮಾಡುತ್ತಿದ್ದಾರೆ. ಸದ್ಯದಲ್ಲೇ ಚಿತ್ರದ ಕುರಿತು ಹೆಚ್ಚಿನ ಮಾಹಿತಿ ನೀಡುವುದಾಗಿ ನಿಖಿಲ್ ಕುಮಾರ್ ತಿಳಿಸಿದರು.

ತಮ್ಮ‌ ತಂಡವನ್ನು ಪರಿಚಯಿಸುತ್ತಾ ಮಾತು ಪ್ರಾರಂಭಿಸಿದ ನಿರ್ದೇಶಕ ಲಕ್ಷ್ಮಣ್, ಕನ್ನಡದಲ್ಲಿ ಇದು ನನ್ನ ಮೊದಲ ಚಿತ್ರ. ನಾನು ಬರೆದ ಕಥೆಯನ್ನು ಒಪ್ಪಿ ಚಿತ್ರ ನಿರ್ಮಾಣಕ್ಕೆ ಮುಂದಾಗಿರುವ ನಿರ್ಮಾಪಕರಿಗೆ ಹಾಗೂ ನಾಯಕ ನಿಖಿಲ್ ಕುಮಾರ್ ಅವರಿಗೆ ಧನ್ಯವಾದ. ಒಳ್ಳೆಯ ತಂಡದೊಂದಿಗೆ ಒಳ್ಳೆಯ ಚಿತ್ರ ನೀಡುವ ನಂಬಿಕೆ ಇದೆ. ಮುಂದಿನ ದಿನಗಳಲ್ಲಿ ಚಿತ್ರದ ಕುರಿತು ಹೆಚ್ಚಿನ ವಿವರಣೆ ನೀಡುತ್ತೇನೆ. ನಿಮ್ಮೆಲ್ಲರ ಹಾರೈಕೆ ಇರಲಿ ಎಂದರು. ಇದನ್ನೂ ಓದಿ:ಇಂದು ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ ಹರ್ಷಿಕಾ ಪೂಣಚ್ಚ- ಭುವನ್

ಈ ಚಿತ್ರದಲ್ಲಿ ನಟಿಸುವಂತೆ ನಿಖಿಲ್ ಅವರು ಹೇಳಿದರು. ನಾನು ಕಥೆ ಕೇಳಿ ಒಪ್ಪಿಕೊಂಡೆ. ಕಥೆ ಚೆನ್ನಾಗಿದೆ ಎಂದು ನಟ ಕೋಮಲ್ (Komal) ತಿಳಿಸಿದರು. ಲೈಕಾ ಪ್ರೊಡಕ್ಷನ್ಸ್ ಸಂಸ್ಥೆಯ ಮೂಲಕ ನಿರ್ಮಾಣವಾಗುತ್ತಿರುವ ಮೊದಲ ಕನ್ನಡ ಚಿತ್ರವಿದು. ಚಿತ್ರ ಯಶಸ್ವಿಯಾಗಲಿ ಎಂದು ಲೈಕಾ ಪ್ರೊಡಕ್ಷನ್ಸ್ ಮುಖ್ಯಸ್ಥರಾದ ಸುಭಾಸ್ಕರನ್  ಹಾರೈಸಿದರು.

ನಾಯಕಿ ಯುಕ್ತಿ ತರೇಜ ಸಹ ನೂತನ ಚಿತ್ರದ ಕುರಿತು ಮಾತನಾಡಿದರು. ಹಲವಾರು ತಂತ್ರಜ್ಞರು ಹಾಗೂ ಗಣ್ಯರು ಮುಹೂರ್ತ ಸಮಾರಂಭದಲ್ಲಿ ಉಪಸ್ಥಿತರಿದ್ದರು.

Web Stories

Share This Article
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್