10 ವರ್ಷಗಳ ನಂತರ ಮತ್ತೆ ಕೈಜೋಡಿಸಿದ ‘ರಂಗಿತರಂಗ’ ಜೋಡಿ

Public TV
1 Min Read

ನ್ನಡ ಚಿತ್ರರಂಗದಲ್ಲಿ ‘ರಂಗಿತರಂಗ’ (Rangitaranga) ಚಿತ್ರ ಮಾಡಿದ ಸಾಧನೆ ದೊಡ್ಡದು. ಈ ಸಿನಿಮಾ ಬಿಡುಗಡೆಯಾಗಿ ಹೆಚ್ಚು ಕಮ್ಮಿ 10 ವರ್ಷವಾಗಿದೆ. ಬಾಹುಬಲಿಯಂತಹ ದೊಡ್ಡ ಸಿನಿಮಾದ ಎದುರು ಗೆದ್ದು ಬೀಗಿದ್ದ ಈ ಸಿನಿಮಾದಲ್ಲಿ, ನಾಯಕನಾಗಿ ಅಮೋಘವಾಗಿ ನಟಿಸಿದ್ದ ನಿರೂಪ್ ಭಂಡಾರಿ (Nirup Bhandari) ಎದುರು ಖಳನಾಯಕನಾಗಿ ಸಾಯಿ ಕುಮಾರ್ (Sai Kumar) ಅತ್ಯದ್ಭುತ ಪ್ರದರ್ಶನ ತೋರಿಸಿದ್ದರು. ಪೋಸ್ಟ್‌ಮ್ಯಾನ್ ಕಾಳಿಂಗನಾಗಿ ಅಬ್ಬರಿಸಿದ್ದ ಸಾಯಿ ಕುಮಾರ್ ಅವರು ನಿರೂಪ್ ಮತ್ತೆ ಕೈ ಜೋಡಿಸಿದ್ದಾರೆ.

ಮೊದಲ ಬಾರಿಗೆ ಡೈರೆಕ್ಟರ್ ಕ್ಯಾಪ್ ತೊಟ್ಟಿರುವ ಯುವ ಪ್ರತಿಭೆ ಸಚಿನ್ ವಾಲಿ ಸಾರಥ್ಯದ ಹೊಸ ಸಿನಿಮಾದಲ್ಲಿ ನಿರೂಪ್ ಭಂಡಾರಿ ಹಾಗೂ ಸಾಯಿಕುಮಾರ್ ಒಟ್ಟಿಗೆ ನಟಿಸುತ್ತಿದ್ದಾರೆ. ಈಗಾಗಲೇ ಸಾಯಿ ಕುಮಾರ್ ಚಿತ್ರತಂಡ ಸೇರಿದ್ದು, ಬಹಳ ವರ್ಷಗಳ ನಂತರ ಈ ಕಾಂಬೋ ಮತ್ತೆ ಒಂದಾಗಿರುವುದು ಕುತೂಹಲ ಹೆಚ್ಚಿಸಿದೆ. ಈ ಚಿತ್ರದಲ್ಲಿ ಸಾಯಿ ಕುಮಾರ್ ಅವರು ನಿರೂಪ್ ಅವರ ತಂದೆ ಪಾತ್ರದಲ್ಲಿ ಬಣ್ಣ ಹಚ್ಚಲಿದ್ದಾರೆ. ಈ ಚಿತ್ರದ ಶೀರ್ಷಿಕೆ ಮತ್ತು ಫಸ್ಟ್ ಲುಕ್ ಫೆಬ್ರವರಿ 6ಕ್ಕೆ ಅನಾವರಣಗೊಳ್ಳುತ್ತಿದೆ. ಇದನ್ನೂ ಓದಿ: ಮತ್ತೆ ಗುಡ್ ನ್ಯೂಸ್ ಕೊಟ್ಟ ‘ಜೋಡಿಹಕ್ಕಿ’ ನಟಿ ಮಧುಶ್ರೀ ಅಯ್ಯರ್

ಸತ್ಯ ಮತ್ತು ಸುಳ್ಳಿನ ನಡುವೆ ಇರುವ ಸಾಮಾಜಿಕ ಬದ್ಧತೆ ಸುತ್ತ ಸಾಗುವ ಕಾಮಿಡಿ ಮತ್ತು ಫ್ಯಾಮಿಲಿ ಮನರಂಜನೆಯ ಕಥಾಹಂದರ ಹೊಂದಿರುವ ಚಿತ್ರ ಇದಾಗಿದೆ. ಅಂಕಿತ್ ಸೋನಿಗಾರ ಅವರು ನಿರ್ಮಾಣ ಮಾಡುವ ಮೂಲಕ ಈ ಸಿನಿಮಾಗೆ ಸಾಥ್‌ ನೀಡಿದ್ದಾರೆ. ಪ್ರಶಾಂತ್ ಮುಲಗೆ ಸಹ ನಿರ್ಮಾಪಕರಾಗಿದ್ದಾರೆ.

ಸಚಿನ್ ಬಸ್ರೂರ್ ಸಂಗೀತ, ಸಂದೀಪ್ ವಲ್ಲೂರಿ ಛಾಯಾಗ್ರಹಣ, ಉಜ್ವಲ್ ಚಂದ್ರ ಸಂಕಲನ, ಉಲ್ಲಾಸ್ ಹೈದೂರು ಕಲಾ ನಿರ್ದೇಶನ ಈ ಚಿತ್ರಕ್ಕಿದೆ. ಸದ್ಯ ಚಿತ್ರದ ಶೂಟಿಂಗ್ ಭರದಿಂದ ಸಾಗುತ್ತಿದೆ.

Share This Article