ಸಿದ್ದರಾಮಯ್ಯ ಬಯೋಪಿಕ್: ಪಾರ್ಟ್ 1 ಚಿತ್ರಕ್ಕೆ ನಿರೂಪ್ ಭಂಡಾರಿ ಹೀರೋ

Public TV
2 Min Read

ಸ್ಯಾಂಡಲ್ ವುಡ್ (Sandalwood) ಅಂಗಳದಿಂದ ಮತ್ತೊಂದು ಬ್ರೇಕಿಂಗ್ ಸುದ್ದಿ ಹರಿದಾಡುತ್ತಿದೆ. ಈಗಾಗಲೇ ಮುಖ್ಯಮಂತ್ರಿ (Chief Minister) ಸಿದ್ದರಾಮಯ್ಯ (Siddaramaiah) ಕುರಿತಾದ ಸಿನಿಮಾ ಬಗ್ಗೆ ಹಲವಾರು ವಿಷಯಗಳನ್ನು ಇದೇ ಪಬ್ಲಿಕ್ ಟಿವಿ ಡಿಜಿಟಲ್ ನಲ್ಲಿ ಓದಿದ್ದೀರಿ. ಮತ್ತೊಂದು ಹೊಸ ವಿಷಯ ಅಂದರೆ, ಈ ಸಿನಿಮಾದಲ್ಲಿ ನಿರೂಪ್ ಭಂಡಾರಿ (Nirup Bhandari)ಕೂಡ ನಟಿಸಲಿದ್ದಾರಂತೆ. ಈಗಾಗಲೇ ನಿರೂಪ್ ಅವರನ್ನು ಚಿತ್ರತಂಡ ಭೇಟಿ ಕೂಡ ಮಾಡಿದೆಯಂತೆ.

ಹೌದು, ಈ ಸಿನಿಮಾ ಎರಡು ಭಾಗದಲ್ಲಿ ಮೂಡಿ ಬರಲಿದ್ದು, ಮೊದಲ ಭಾಗದಲ್ಲಿ ನಿರೂಪ್ ಭಂಡಾರಿ ನಾಯಕನಾಗಿ ನಟಿಸಿದರೆ, ಎರಡನೇ ಭಾಗದಲ್ಲಿ ಸಿದ್ದರಾಮಯ್ಯನವರ ಪಾತ್ರದಲ್ಲಿ ತಮಿಳಿನ ಹೆಸರಾಂತ ನಟ ವಿಜಯ್ ಸೇತುಪತಿ ಕಾಣಿಸಿಕೊಳ್ಳಲಿದ್ದಾರಂತೆ. ಯೌವನದ ಪಾತ್ರದಲ್ಲಿ ನಿರೂಪ್, ಸಿದ್ದರಾಮಯ್ಯ ಲಾಯರ್ ಆಗಿದ್ದ ದಿನಗಳ ಪಾತ್ರದಲ್ಲಿ ವಿಜಯ್ ಸೇತುಪತಿ ನಟಿಸಲಿದ್ದಾರೆ ಎನ್ನುವುದು ಸದ್ಯಕ್ಕಿರುವ ಮಾಹಿತಿ.  ಇದನ್ನೂ ಓದಿ:ಇಳಿವಯಸ್ಸಿನವರ ಜೊತೆ ತಮನ್ನಾ ನಟನೆ: ಟ್ರೋಲ್ ಮಾಡಿದವರ ವಿರುದ್ದ ನಟಿ ಗರಂ

ಸಿದ್ದರಾಮಯ್ಯ ಅವರ ಕುರಿತಾದ ಚಿತ್ರಕ್ಕೆ (Biopic) ಸದ್ಯದಲ್ಲೇ ಚಾಲನೆ ಸಿಗಲಿದ್ದು, ಈಗಾಗಲೇ ಸಿನಿಮಾದ ಸ್ಕ್ರಿಪ್ಟ್ ಸೇರಿದಂತೆ ಹಲವು ಕೆಲಸಗಳಲ್ಲಿ ಬ್ಯುಸಿಯಾಗಿದೆ ಚಿತ್ರತಂಡ. ಕಲಾವಿದರ ಆಯ್ಕೆ ಕೂಡ ಮಾಡಲಾಗುತ್ತಿದೆ ಎನ್ನುವ ಮಾಹಿತಿ ಇದೆ. ಬಾಲ್ಯ ಮತ್ತು ಯೌವನ ಹೀಗೆ ಎರಡು ಸ್ತರದ ಕಲಾವಿದರನ್ನು ಆಯ್ಕೆ ಮಾಡಿಕೊಳ್ಳಲಾಗುತ್ತಿದೆ ಎನ್ನುವ ಮಾಹಿತಿ ಇದೆ.

ರಾಜಕೀಯ (Politics) ಕ್ಷೇತ್ರದಲ್ಲಿ ತಮ್ಮದೇ ಶೈಲಿಯಲ್ಲಿ ಗುರುತಿಸಿಕೊಂಡಿರುವ ಸಿದ್ದರಾಮಯ್ಯ ಅವರ ಜೀವನ ಚರಿತ್ರೆಯನ್ನ ಬೆಳ್ಳಿಪರದೆಯಲ್ಲಿ ಬಿಚ್ಚಿಡಲು ಸತ್ಯರತ್ನಂ (Sathyaratanam)  ರೆಡಿಯಾಗಿದ್ದಾರೆ. ಈಗಾಗಲೇ ಈ ಕುರಿತು ಒಂದು ಸುತ್ತಿನ ಮಾತುಕತೆ ಕೂಡ ನಡೆಸಿದ್ದಾರೆ. ಮಾಜಿ ಸಚಿವ ಶಿವರಾಜ್ ತಂಗಡಗಿ ಮತ್ತು ಜಮೀರ್ ಅಹ್ಮಮದ್ ನೇತೃತ್ವದಲ್ಲಿ ಮಾಕತೆ ನಡೆದಿದೆ. ಸಿಎಂ ಸಿದ್ದರಾಮಯ್ಯ ಕೂಡ ಸಿನಿಮಾಗೆ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ.

 

ಗಂಗಾವತಿ ಹಯಾತ್ ಪೀರ್ ಸಾಬ್ ಅವರ ನೇತೃತ್ವದ ಎಮ್‌ಎಸ್ ಕ್ರಿಯೇಷನ್ಸ್ ಬ್ಯಾನರ್ ಅಡಿ ಈ ಸಿನಿಮಾ ನಿರ್ಮಾಣವಾಗುತ್ತಿದೆ. ಹೈ ಬಜೆಟ್‌ನಲ್ಲಿ 50 ಕೋಟಿ ರೂ.ಗೂ ಅಧಿಕ ವೆಚ್ಚದಲ್ಲಿ ಚಿತ್ರಕ್ಕೆ ಬಂಡವಾಳ ಹೂಡಲಿದ್ದಾರೆ. ಸದ್ಯದಲ್ಲೇ ಮಾಜಿ ಸಿಎಂ ಸಿದ್ದರಾಮಯ್ಯ ಬಯೋಪಿಕ್‌ ಬಗ್ಗೆ ಚಿತ್ರತಂಡದಿಂದ ಅಭಿಮಾನಿಗಳಿಗೆ ಅಧಿಕೃತ ಮಾಹಿತಿ ಸಿಗಲಿದೆ.

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್