ರಾಜ್ಯಸಭಾ ಸಂಸದರಾಗಿ ಪ್ರಮಾಣವಚನ ಸ್ವೀಕರಿಸಿದ ನಿತೀಶ್‌ ಕುಮಾರ್‌ – ಶೀಘ್ರವೇ ಬಿಹಾರಕ್ಕೆ ನೂತನ ಸಿಎಂ

1 Min Read

ಪಾಟ್ನಾ: ನಿತೀಶ್ ಕುಮಾರ್ (Nitish Kumar) ರಾಜ್ಯಸಭಾ ಸದಸ್ಯರಾಗಿ ಇಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇದು ರಾಜ್ಯ ಸರ್ಕಾರದಿಂದ ಅವರು ಹೊರಬರುವ ಸೂಚನೆಯಾಗಿದ್ದು, ಬಿಹಾರದಲ್ಲಿ (Bihar) ಹೊಸ ಸರ್ಕಾರ ರಚನೆಗೆ ದಾರಿ ಸುಗಮಗೊಳಿಸಿದೆ.

ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಬಿಹಾರ ಉಪಮುಖ್ಯಮಂತ್ರಿಗಳಾದ ವಿಜಯ್ ಕುಮಾರ್ ಸಿನ್ಹಾ ಮತ್ತು ಸಾಮ್ರಾಟ್ ಚೌಧರಿ ಭಾಗವಹಿಸಿದ್ದರು. ಇದನ್ನೂ ಓದಿ: ದಾಖಲೆಯ 10ನೇ ಬಾರಿಗೆ ಬಿಹಾರ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ ನಿತೀಶ್‌ ಕುಮಾರ್‌

ಹೊಸ ಹುದ್ದೆ ವಹಿಸಿಕೊಳ್ಳುವ ಒಂದು ದಿನ ಮೊದಲು ನಿತೀಶ್ ಕುಮಾರ್ ದೆಹಲಿಗೆ ಪ್ರಯಾಣ ಬೆಳೆಸಿ, ಶೀಘ್ರದಲ್ಲೇ ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡುವುದಾಗಿ ದೃಢಪಡಿಸಿದ್ದರು. ಬಿಹಾರದಲ್ಲಿ ನನ್ನ ಹೆಚ್ಚಿನ ಕೆಲಸವನ್ನು ಪೂರ್ಣಗೊಳಿಸಿದ್ದೇನೆ. ಈಗ ದೆಹಲಿಯಲ್ಲಿ ನನ್ನ ಜವಾಬ್ದಾರಿಗಳತ್ತ ಗಮನಹರಿಸಲು ಉದ್ದೇಶಿಸಿದ್ದೇನೆ ಎಂದು ತಿಳಿಸಿದ್ದರು.

ನಾನು ಅಲ್ಲಿನ ಸಿಎಂ ಸ್ಥಾನದಿಂದ ಕೆಳಗಿಳಿದು ಇಲ್ಲಿ ಕೆಲಸ ಮಾಡುತ್ತೇನೆ. ಮೂರು ಅಥವಾ ನಾಲ್ಕು ದಿನಗಳಲ್ಲಿ ನಾನು ರಾಜೀನಾಮೆ ನೀಡುತ್ತೇನೆ. ಬೇರೆಯವರಿಗೆ ಸಿಎಂ ಸ್ಥಾನ ನೀಡಲಾಗುವುದು ಎಂದು ನಿತೀಶ್‌ ಕುಮಾರ್‌ ಹೇಳಿದ್ದರು.

ನಿತೀಶ್ ಕುಮಾರ್ ಬಿಹಾರದ ಅತ್ಯಂತ ದೀರ್ಘಾವಧಿಯ ಮುಖ್ಯಮಂತ್ರಿಯಾಗಿದ್ದಾರೆ. 1985 ರಲ್ಲಿ ಶಾಸಕರಾಗಿ ತಮ್ಮ ರಾಜಕೀಯ ಪ್ರಯಾಣವನ್ನು ಪ್ರಾರಂಭಿಸಿದರು. ನಂತರ ಅಟಲ್ ಬಿಹಾರಿ ವಾಜಪೇಯಿ ಸರ್ಕಾರದಲ್ಲಿ ಕೇಂದ್ರ ಸಚಿವರಾಗಿ ಸೇವೆ ಸಲ್ಲಿಸಿದ್ದರು. ನಿತೀಶ್ ಕುಮಾರ್ 2005 ರಲ್ಲಿ ಮೊದಲ ಬಾರಿಗೆ ಬಿಹಾರದ ಮುಖ್ಯಮಂತ್ರಿಯಾದರು. ಅವರು ದೇಶದ ಅತ್ಯಂತ ಅನುಭವಿ ಮತ್ತು ಹಿರಿಯ ರಾಜಕೀಯ ನಾಯಕರಲ್ಲಿ ಒಬ್ಬರು. ಇದನ್ನೂ ಓದಿ: ಬಿಹಾರ ಸಿಎಂ ನಿತೀಶ್ ಕುಮಾರ್ ರಾಜೀನಾಮೆ? – ನಿತೀಶ್ ಪುತ್ರ ನಿಶಾಂತ್‌ಗೆ ಡಿಸಿಎಂ ಹುದ್ದೆಗೆ ಡೀಲ್

Share This Article