Bihar Elections | 57 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಜೆಡಿಯು

Public TV
3 Min Read

– ಎನ್‌ಡಿಎಯಲ್ಲಿ ಮುಂದುವರಿದ ಮುನಿಸು, ಉಪೇಂದ್ರ ಕುಶ್ವಾಹ ಜೊತೆಗೆ ಅಮಿತ್ ಶಾ ಸಭೆ
– 3 ದಿನಗಳಲ್ಲಿ 33.97 ಕೋಟಿ ರೂ. ವಶಪಡಿಸಿಕೊಂಡ ಆಯೋಗ

ಪಾಟ್ನಾ: ಸೀಟು ಹಂಚಿಕೆ ಕುರಿತು ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದಲ್ಲಿ ನಡೆಯುತ್ತಿರುವ ಉದ್ವಿಗ್ನತೆಯ ನಡುವೆಯೇ, ಮುಖ್ಯಮಂತ್ರಿ ನಿತೀಶ್ ಕುಮಾರ್ (Nitish Kumar) ಅವರ ಜೆಡಿಯು (JDU) ಪಕ್ಷ ಇಂದು ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು (Candidate List) ಬಿಡುಗಡೆ ಮಾಡಿದೆ.

ಮೊದಲ ಪಟ್ಟಿಯಲ್ಲಿ ಸಚಿವರಾದ ಶ್ರವಣ್ ಕುಮಾರ್, ವಿಜಯ್ ಕುಮಾರ್ ಚೌಧರಿ ಮತ್ತು ಮಹೇಶ್ವರ್ ಹಜಾರಿ ಸೇರಿದಂತೆ 57 ಅಭ್ಯರ್ಥಿಗಳ ಹೆಸರುಗಳು ಸೇರಿವೆ. ಜೆಡಿಯು ಟಿಕೆಟ್‌ನಲ್ಲಿ ಈಗಾಗಲೇ ನಾಮಪತ್ರ ಸಲ್ಲಿಸಿರುವ ಅನಂತ್ ಸಿಂಗ್ ಕೂಡ ಸೇರಿದ್ದಾರೆ. ಇದನ್ನೂ ಓದಿ: ಹಿಂದಿ ಹೋರ್ಡಿಂಗ್ಸ್‌, ಸಿನಿಮಾ, ಹಾಡುಗಳು ನಿಷೇಧಿಸುವ ಮಸೂದೆ ಇಂದು ಮಂಡನೆ? – ತಮಿಳುನಾಡು ಸರ್ಕಾರ ಸಿದ್ಧತೆ

ಜೆಡಿಯುನ ಮೊದಲ ಪಟ್ಟಿಯನ್ನು ಇಂದು ಬಿಡುಗಡೆ ಮಾಡಲಾಗಿದೆ ಎಂದು ಜನತಾದಳ ಯುನೈಟೆಡ್‌ನ ಕಾರ್ಯಕಾರಿ ಅಧ್ಯಕ್ಷ ಮತ್ತು ರಾಜ್ಯಸಭಾ ಸಂಸದ ಸಂಜಯ್ ಕುಮಾರ್ ಝಾ ಹೇಳಿದ್ದಾರೆ. ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಚುನಾವಣಾ ಪ್ರಚಾರವು ಅ.16ರಂದು ಪ್ರಾರಂಭವಾಗಲಿದೆ. ಪರಿಸ್ಥಿತಿಯನ್ನು ಎಚ್ಚರಿಕೆಯಿಂದ ನಿರ್ಣಯಿಸಿದ ನಂತರ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಲು ಮುಖ್ಯಮಂತ್ರಿ ನಿರ್ಧರಿಸಿದ್ದಾರೆ. ನಮ್ಮ ಎರಡನೇ ಪಟ್ಟಿಯೂ ಒಂದು ಅಥವಾ ಎರಡು ದಿನಗಳಲ್ಲಿ ಬಿಡುಗಡೆಯಾಗಲಿದೆ ಎಂದು ಸಂಜಯ್ ಕುಮಾರ್ ತಿಳಿಸಿದ್ದಾರೆ. ಇದನ್ನೂ ಓದಿ: ಆಯುರ್ವೇದ ಚಿಕಿತ್ಸೆಗೆ ಕೇರಳಕ್ಕೆ ಬಂದಿದ್ದ ಕೀನ್ಯಾ ಮಾಜಿ ಪ್ರಧಾನಿ ಹೃದಯಸ್ತಂಭನದಿಂದ ನಿಧನ

ಜೆಡಿಯು ಒಳಗಿನ ಉದ್ವಿಗ್ನತೆಯ ಪ್ರಶ್ನೆಗೆ ಉತ್ತರಿಸಿದ ಅವರು, ಜೆಡಿಯು ಒಳಗೆ ಯಾವುದೇ ಆಂತರಿಕ ಸಮಸ್ಯೆಗಳಿಲ್ಲ ಎಂದು ಹೇಳಿದರು. ಪಕ್ಷದೊಳಗೆ ತೆಗೆದುಕೊಳ್ಳುವ ಎಲ್ಲಾ ನಿರ್ಧಾರಗಳನ್ನು ನಿತೀಶ್ ಕುಮಾರ್ ಅವರ ಒಪ್ಪಿಗೆಯೊಂದಿಗೆ ತೆಗೆದುಕೊಳ್ಳಲಾಗುತ್ತದೆ. ಅವರು ಪ್ರಜಾಸತ್ತಾತ್ಮಕ ನಾಯಕ, ಸರ್ವಾಧಿಕಾರಿ ನಾಯಕನಲ್ಲ. ಮುಖ್ಯಮಂತ್ರಿ ನಿತೀಶ್ ಕುಮಾರ್ ಬಿಹಾರ ಮತ್ತು ಜೆಡಿಯು ಎರಡರ ಉಸ್ತುವಾರಿ ವಹಿಸಿಕೊಂಡಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ: ಬೀದರ್ | 45 ಲಕ್ಷ ಮೌಲ್ಯದ ಮಾದಕ ವಸ್ತು ಸೀಜ್ – ಇಬ್ಬರು ಅರೆಸ್ಟ್

ಬಿಜೆಪಿ ಜೆಡಿಯು ಎರಡು ಪಕ್ಷಗಳು ಮೊದಲ ಪಟ್ಟಿ ಬಿಡುಗಡೆ ನಡುವೆಯೂ ಎನ್‌ಡಿಎಯಲ್ಲಿ ಸೀಟು ಹಂಚಿಕೆಯಲ್ಲಿ ಗೊಂದಲ ಮುಂದುವರಿದಿದೆ. ಸೀಟು ಹಂಚಿಕೆ ಬಗ್ಗೆ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿರುವ ರಾಷ್ಟ್ರೀಯ ಲೋಕ ಮೋರ್ಚಾ ಮುಖ್ಯಸ್ಥ ಉಪೇಂದ್ರ ಕುಶ್ವಾಹ ಅವರ ಜೊತೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಸಭೆ ನಡೆಸಿದ್ದು, ಸಂಧಾನ ಮುಂದುವರಿದಿದೆ. ಇಂಡಿಯಾ ಒಕ್ಕೂಟದಲ್ಲಿ ಗೊಂದಲ ಮುಂದುವರಿದಿದ್ದು, ಕೆಲವು ನಿರ್ದಿಷ್ಟ ಸ್ಥಾನಗಳಿಗೆ ಆರ್‌ಜೆಡಿ ಮತ್ತು ಕಾಂಗ್ರೆಸ್ ನಡುವೆ ಒಮ್ಮತ ಮೂಡಿಲ್ಲ. ಇದನ್ನೂ ಓದಿ: Karnataka | ಈ ವರ್ಷದಿಂದ 33% ಅಂಕ ಪಡೆದರೆ SSLC ಪಾಸ್

ಈ ನಡುವೆ ಚುನಾವಣೆಯ ಸಮಯದಲ್ಲಿ ಹಣದ ದುರುಪಯೋಗ ಮತ್ತು ಮತದಾರರ ಮೇಲೆ ಪ್ರಭಾವ ಬೀರುವ ಪ್ರಯತ್ನಗಳನ್ನು ತಡೆಯಲು ಚುನಾವಣಾ ಆಯೋಗವು ಮಹತ್ವದ ಕ್ರಮಗಳನ್ನು ತೆಗೆದುಕೊಂಡಿದೆ. ಆಯೋಗವು ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ಖರ್ಚು ವೀಕ್ಷಕರನ್ನು ನಿಯೋಜಿಸಿದ್ದು, ಅಭ್ಯರ್ಥಿಗಳ ಚುನಾವಣಾ ವೆಚ್ಚವನ್ನು ಸೂಕ್ಷ್ಮವಾಗಿ ಗಮನಿಸಲಿದ್ದಾರೆ. ಇದನ್ನೂ ಓದಿ: ದೆಹಲಿಯಲ್ಲಿ ಹಸಿರು ಪಟಾಕಿ ಸಿಡಿಸಲು ಸುಪ್ರೀಂ ಅನುಮತಿ

ಇನ್ನು ಮೂರು ದಿನಗಳಲ್ಲಿ 33.97 ಕೋಟಿ ರೂಪಾಯಿಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಫ್ಲೈಯಿಂಗ್ ಸ್ಕ್ವಾಡ್‌ಗಳು, ಕಣ್ಗಾವಲು ತಂಡಗಳು, ವೀಡಿಯೊ ಕಣ್ಗಾವಲು ತಂಡಗಳು ದಿನದ 24 ಗಂಟೆಗಳ ಕಾಲ ಜಾಗರೂಕರಾಗಿರುತ್ತವೆ ಮತ್ತು ಮತದಾರರನ್ನು ಆಕರ್ಷಿಸಲು ಹಣದ ಬಲ ಅಥವಾ ಇತರ ಪ್ರಚೋದನೆಗಳ ಯಾವುದೇ ಶಂಕಿತ ಪ್ರಕರಣಗಳ ಮೇಲೆ ಕಣ್ಣಿಡುತ್ತವೆ. ಇದರೊಂದಿಗೆ, ಚುನಾವಣೆ ಘೋಷಣೆಯಾದಾಗಿನಿಂದ, ವಿವಿಧ ಜಾರಿ ಸಂಸ್ಥೆಗಳು ಒಟ್ಟು 33.97 ಕೋಟಿ ರೂ. ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಉಚಿತ ವಸ್ತುಗಳನ್ನು ವಶಪಡಿಸಿಕೊಂಡಿವೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಇದನ್ನೂ ಓದಿ: ಬಿಹಾರ ಚುನಾವಣೆಯಲ್ಲಿ ನಾನು ಸ್ಪರ್ಧಿಸಲ್ಲ – ಚುನಾವಣಾ ಚಾಣಕ್ಯ ಪ್ರಶಾಂತ್ ಕಿಶೋರ್

Share This Article