– ಮೂವರ ಸ್ಥಿತಿ ಗಂಭೀರ
ಮೈಸೂರು: ನೈಟ್ರೋಜನ್ ಗ್ಯಾಸ್ ಬ್ಲಾಸ್ಟ್ (Nitrogen Gas Blast) ಆದ ಪರಿಣಾಮ ಓರ್ವ ಸಾವನ್ನಪ್ಪಿದ್ದು, ಮೂವರು ಗಂಭೀರ ಗಾಯಗೊಂಡಿರುವ ಘಟನೆ ಮೈಸೂರು ಅರಮನೆಯ (Mysuru Palace) ಮುಂಭಾಗ ನಡೆದಿದೆ.
ಅರಮನೆಯ ಜಯ ಮಾರ್ತಾಂಡ ಗೇಟ್ ಬಳಿ ಘಟನೆ ಸಂಭವಿಸಿದ್ದು, ಬಲೂನ್‌ಗೆ ಗ್ಯಾಸ್ ತುಂಬುವ ವೇಳೆ ಬ್ಲಾಸ್ಟ್ ಆಗಿದೆ. ಬ್ಲಾಸ್ಟ್ ತೀವ್ರತೆಗೆ ದೇಹ ಛಿದ್ರ ಛಿದ್ರಗೊಂಡಿದೆ. ಘಟನೆಯಲ್ಲಿ ಮೂವರ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಸದ್ಯ ಘಟನೆಗೆ ಸಂಬಂಧಿಸಿದಂತೆ ಅರಮನೆ ಆವರಣದಲ್ಲಿ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

