ಆಸ್ಪತ್ರೆಯಲ್ಲಿ ಬೆಡ್ ಕೊರತೆ- ಪುತ್ರನನ್ನು ಕಳೆದುಕೊಂಡ ಬಿಜೆಪಿಯ ಮಾಜಿ ಸಂಸದ

Public TV
2 Min Read

ಲಕ್ನೋ: ಎಮೆರ್ಜೆನ್ಸಿ ವಾರ್ಡ್‍ನಲ್ಲಿ ಬೆಡ್ ಕೊರತೆಯಿಂದಾಗಿ ಬಿಜೆಪಿಯ ಮಾಜಿ ಸಂಸದನ (BJP Former MP) ಪುತ್ರನೊಬ್ಬ ಮೃತಪಟ್ಟ ಘಟನೆ ಉತ್ತರಪ್ರದೇಶ ಲಕ್ನೋದ ಎಸ್‍ಜಿಪಿಜಿಐ ಆಸ್ಪತ್ರೆಯಲ್ಲಿ ನಡೆದಿದೆ.

ಮೃತನನ್ನು ಪ್ರಕಾಶ್ ಮಿಶ್ರಾ (41) ಎಂದು ಗುರುತಿಸಲಾಗಿದ್ದು, ಇವರು ಭಾರತೀಯ ಜನತಾ ಪಕ್ಷದ (BJP) ಮಾಜಿ ಸಂಸದ ಭೈರೋನ್ ಪ್ರಸಾದ್ ಮಿಶ್ರಾ (Bhairon Prasad Mishra) ಪುತ್ರ.

ಮೂತ್ರಪಿಂಡದ (Kidney) ಕಾಯಿಲೆಯಿಂದ ಬಳಲುತ್ತಿದ್ದ ಮಿಶ್ರಾ ಅವರನ್ನು ಸೋಮವಾರ ರಾತ್ರಿ 11 ಗಂಟೆಗೆ ಎಸ್‍ಜಿಪಿಜಿಐ ತುರ್ತು ವಿಭಾಗಕ್ಕೆ ಕರೆದೊಯ್ಯಲಾಯಿತು. ಆದರೆ ಅಲ್ಲಿ ಬೆಡ್ ಕೊರತೆಯಿಂದಾಗಿ ತುರ್ತು ಚಿಕಿತ್ಸೆ ಸಿಗಲಿಲ್ಲ. ಹೀಗಾಗಿ ಆಸ್ಪತ್ರೆಗೆ ಹೋದ ಸ್ವಲ್ಪ ಸಮಯದ ಬಳಿಕ ಮಗ ಮೃತಪಟ್ಟಿರುವುದಾಗಿ ಪ್ರಸಾದ್ ಮಿಶ್ರಾ ದೂರಿದ್ದಾರೆ. ಅಲ್ಲದೆ ಮಗನ ಶವದೊಂದಿಗೆ ತುರ್ತು ವಾರ್ಡ್‍ನ ಹೊರಗೆ ಪ್ರತಿಭಟನೆ ಮಾಡಿದರು.

ಈ ವೇಳೆ ಸುದ್ದಿಗಾರರ ಜೊತೆ ಮಾತನಾಡಿದ ಅವರು, ನಾನು ನನ್ನ ಮಗನನ್ನು ಕಳೆದುಕೊಂಡಿದ್ದೇನೆ ಎಂದು ಪ್ರಸಾದ್ ಮಿಶ್ರಾ ಗೋಳಾಡಿದರು. ನನ್ನ ನಂತರ ಸುಮಾರು 20-25 ಜನರು ಚಿಕಿತ್ಸೆ ಪಡೆದರು. ನಾನು ಪ್ರತಿಭಟನೆಗೆ ಕುಳಿತಾಗ ಎಲ್ಲರೂ ವೈದ್ಯನ ಬಗ್ಗೆ ದೂರು ನೀಡುತ್ತಿದ್ದರು. ಆ ವೈದ್ಯನಿಗೆ ಶಿಕ್ಷೆಯಾಗಬೇಕು ಎಂದು ಒತ್ತಾಯಿಸಿದರು. ಇದನ್ನೂ ಓದಿ: ಬೃಹತ್‌ ಜಯದ ನಿರೀಕ್ಷೆಯಲ್ಲಿ ಪಾಕಿಸ್ತಾನ – ಸೆಮಿಸ್‌ ಹಾದಿಯ ಲೆಕ್ಕಾಚಾರ ಏನು?

ಆಸ್ಪತ್ರೆ ಮುಖ್ಯಸ್ಥ ಡಾ.ಆರ್.ಕೆ.ಧಿಮಾನ್ ಮಾತನಾಡಿ, ಆಸ್ಪತ್ರೆಗೆ ದಾಖಲಿಸಿದಾಗ ರೋಗಿಯನ್ನು ಐಸಿಯುಗೆ ಕರೆದೊಯ್ಯಲು ವೈದ್ಯರು ಹೇಳಿದರು. ಆದರೆ ಅಲ್ಲಿ ಬೆಡ್‍ಗಳು ಲಭ್ಯವಿಲ್ಲ ಎಂದು ರೋಗಿ ಕಡೆಯವರಿಗೆ ತಿಳಿಸಿದ್ದಾರೆ. ಯಾಕೆ ಬೆಡ್ ಇಲ್ಲ ಎಂದು ಹೇಳಿದರು ತಿಳಿದಿಲ್ಲ. ಈ ಸಂಬಂಧ ನಾವು ಸಮಿತಿಯನ್ನು ರಚಿಸಿದ್ದೇವೆ. ನಾವು ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ. ಸದ್ಯ ವೈದ್ಯರನ್ನು ಅಮಾನತುಗೊಳಿಸಲಾಗಿದೆ ಎಂದು ತಿಳಿಸಿದರು.

ಘಟನೆಯ ಕುರಿತು ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಪ್ರತಿಕ್ರಿಯಿಸಿ, ರಾಜ್ಯದ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಇದು ಆಸ್ಪತ್ರೆಯ ತಪ್ಪಲ್ಲ. ಆದರೆ ಇದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ತಪ್ಪು. ಆಸ್ಪತ್ರೆಗೆ ಏಕೆ ಬಜೆಟ್ ನೀಡುತ್ತಿಲ್ಲ ಎಂದು ಪ್ರಶ್ನಿಸಿದರು.

ಘಟನೆ ಸಂಬಂಧ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರು ಕಟ್ಟುನಿಟ್ಟಿನ ಕ್ರಮದ ಭರವಸೆ ನೀಡಿದ್ದಾರೆ. ಅಲ್ಲದೆ ಮಾಜಿ ಸಂಸದನ ಮನೆಗೆ ಭೇಟಿ ಮಾಡಿದ್ದಾರೆ. ಇದೊಂದು ದುರದೃಷ್ಟಕರ ಘಟನೆಯಾಗಿದೆ. ಈ ಸಂಬಂಧ ತ್ರಿಸದಸ್ಯ ಸಮಿತಿಯನ್ನು ರಚಿಸಲಾಗಿದ್ದು, ಈ ಬಗ್ಗೆ ಕೂಲಂಕುಷವಾಗಿ ತನಿಖೆ ನಡೆಸಲಾಗುವುದು ಎಂದರು.

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್