ಯಾವ್ದೇ ಅನರ್ಹ ಬಿಪಿಎಲ್ ಕಾರ್ಡ್‌ಗಳನ್ನ ರದ್ದು ಮಾಡಲ್ಲ – ಕೆ.ಹೆಚ್ ಮುನಿಯಪ್ಪ

Public TV
1 Min Read

ಬೆಂಗಳೂರು: ಯಾವುದೇ ಅನರ್ಹ ಬಿಪಿಎಲ್ (BPL) ಕಾರ್ಡ್‌ಗಳನ್ನ ರದ್ದು ಮಾಡಲ್ಲ, ಎಲ್ಲವನ್ನು ಪರಿಷ್ಕರಣೆ ಮಾಡುತ್ತೇವೆ ಎಂದು ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ (KH Muniyappa) ಸ್ಪಷ್ಟನೆ ನೀಡಿದ್ದಾರೆ.

ನಗರದಲ್ಲಿ ಮಾಧ್ಯಮದವರೊಂದಿಗೆ ಅನರ್ಹ ರೇಷನ್ ಕಾರ್ಡ್‌ಗಳ ರದ್ದು ವಿಚಾರವಾಗಿ ಮಾತನಾಡಿದ ಅವರು, ಬಿಪಿಎಲ್‌ನಲ್ಲಿರುವ ಅನರ್ಹರನ್ನು ನಿಯಮಗಳ ಪ್ರಕಾರ ಪರಿಷ್ಕರಣೆ ಮಾಡಿ, ಎಪಿಎಲ್‌ಗೆ (APL Card) ವರ್ಗಾವಣೆ ಮಾಡುತ್ತೇವೆ. ಯಾವ ಕಾರ್ಡನ್ನು ರದ್ದು ಮಾಡಲ್ಲ, ಎಲ್ಲಾ ಕಾರ್ಡ್‌ಗಳನ್ನು ಪರಿಷ್ಕರಣೆ ಮಾಡುತ್ತೇವೆ. ವರ್ಗಾವಣೆ ಸಂದರ್ಭದಲ್ಲಿ ಏನಾದರೂ ಸಣ್ಣಪುಟ್ಟ ಸಮಸ್ಯೆಯಾದರೆ 24 ಗಂಟೆಯೊಳಗೆ ಅದನ್ನು ಸರಿಪಡಿಸಿ ಆಹಾರ ಧಾನ್ಯ ಕೊಡುವ ಕೆಲಸ ಮಾಡುತ್ತೇವೆ ಎಂದು ತಿಳಿಸಿದ್ದಾರೆ.ಇದನ್ನೂ ಓದಿ: ಚಾ.ನಗರ: ಕಬ್ಬಿನ ಲಾರಿಗೆ ಗೂಡ್ಸ್ ಆಟೋ ಡಿಕ್ಕಿ – ಇಬ್ಬರು ಸ್ಥಳದಲ್ಲೇ ಸಾವು

ಇನ್ನೂ ಇದೇ ವೇಳೆ ಯಾದಗಿರಿಯಲ್ಲಿ (Yadagiri) ಅನ್ನಭಾಗ್ಯ ಅಕ್ಕಿ ಅಕ್ರಮ ಸಾಗಣೆ ವಿಚಾರವಾಗಿ ಮಾತನಾಡಿ, ಪ್ರಕರಣವನ್ನು ವಿವರವಾಗಿ ತನಿಖೆ ನಡೆಸಬೇಕು. ದೊಡ್ಡಮಟ್ಟದಲ್ಲಿ ನಡೆದಿದೆ. ಅಧಿಕಾರಿಗಳು ತನಿಖೆ ನಡೆಸುತ್ತಾರೆ. ಯಾರೇ ತಪ್ಪು ಮಾಡಿದ್ದರೂ ಅವರ ವಿರುದ್ಧ ಕ್ರಮ ಆಗುತ್ತದೆ ಎಂದಿದ್ದಾರೆ.

Share This Article